ಡಿಸೆಂಬರ್‌ನಲ್ಲಿ ಸುದೀಪ್ ಹೊಸ ಚಿತ್ರ
ಅನೂಪ್ ಭಂಡಾರಿ ನಿರ್ದೇಶನದಲ್ಲಿ "ಪ್ಯಾಂಟಮ್'?
Team Udayavani, Oct 1, 2019, 3:01 AM IST
ಇತ್ತೀಚೆಗಷ್ಟೇ ನಟ ಕಿಚ್ಚ ಸುದೀಪ್ ಅಭಿನಯದ “ಪೈಲ್ವಾನ್’ ಚಿತ್ರ ಪ್ರದರ್ಶನ ಕಾಣುತ್ತಿದೆ. ಇನ್ನೊಂದು ಕಡೆ “ಕೋಟಿಗೊಬ್ಬ-3′ ಚಿತ್ರೀಕರಣದಲ್ಲಿದ್ದು, ಡಿಸೆಂಬರ್ ಹೊತ್ತಿಗೆ ಚಿತ್ರೀಕರಣ ಮುಗಿಯಲಿದೆ. ಆ ಬಳಿಕ ಯಾವ ಸಿನಿಮಾವನನ್ನು ಸುದೀಪ್ ಕೈಗೆತ್ತಿಕೊಳ್ಳಲಿದ್ದಾರೆಂಬ ಪ್ರಶ್ನೆ ಸಹಜ. ಅದಕ್ಕೆ ಉತ್ತರ ಅನೂಪ್ ಭಂಡಾರಿ ನಿರ್ದೇಶನದ ಚಿತ್ರ.
“ರಂಗಿತರಂಗ’ ಅನೂಪ್ ಭಂಡಾರಿ ನಿರ್ದೇಶನದ ಹೊಸ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಈ ಹಿಂದೆ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಶನ್‌ನಲ್ಲಿ “ಬಿಲ್ಲಾ ರಂಗ ಬಾಷಾ’ ಚಿತ್ರ ಅನೌನ್ಸ್ ಆಗಿತ್ತು. ಆದರೆ, ಕಾರಣಾಂತರಗಳಿಂದ ಈ ಚಿತ್ರ ಕೆಲಕಾಲ ಮುಂದಕ್ಕೆ ಹೋಗಿದ್ದು, “ಬಿಲ್ಲಾ ರಂಗ ಬಾಷಾ’ ಚಿತ್ರದ ಬದಲಾಗಿ ಸುದೀಪ್ ಮತ್ತು ಅನೂಪ್ ಕಾಂಬಿನೇಶನ್‌ನಲ್ಲಿ ಹೊಸ ಚಿತ್ರವೊಂದು ಶುರುವಾಗಲಿದ್ದು, ಡಿಸೆಂಬರ್‌ನಲ್ಲಿ ಈ ಚಿತ್ರ ಸೆಟ್ಟೇರಲಿದೆ.
ಚಿತ್ರವನ್ನು ಜಾಕ್ ಮಂಜು ನಿರ್ಮಿಸಲಿದ್ದಾರೆ. ಮೂಲಗಳ ಪ್ರಕಾರ ಸದ್ಯ ಈ ಚಿತ್ರಕ್ಕೆ “ಪ್ಯಾಂಟಮ್’ ಎಂದು ಹೆಸರಿಡಲಾಗಿದೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.