ಸೀರೆಗಾಗಿ ಸುಧಾ ಹುಡುಕಾಟ!

ಮತ್ತೆ ಬಂದ ನರಸಿಂಹರಾಜು ಪುತ್ರಿ

Team Udayavani, Oct 20, 2019, 3:03 AM IST

Siddi-Seere

ನರಸಿಂಹರಾಜು ಅವರ ಮಗಳು ಸುಧಾ ನರಸಿಂಹರಾಜು ಹಲವು ವರ್ಷಗಳ ನಂತರ ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಈಗಾಗಲೇ ಸದ್ದಿಲ್ಲದೇ ಆ ಚಿತ್ರ ಬಿಡುಗಡೆಯೂ ಆಗಿದೆ. ಅಂದಹಾಗೆ, ಆ ಚಿತ್ರದ ಹೆಸರು “ಸಿದ್ದಿ ಸೀರೆ’. ವಿಶೇಷವೆಂದರೆ, ಈ ಚಿತ್ರ ವಿದೇಶಿ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಒಂದಲ್ಲ,ಎರಡಲ್ಲ ಬರೋಬ್ಬರಿ ಒಂಬತ್ತು ವಿಭಾಗದಲ್ಲಿ ಪ್ರಶಸ್ತಿಗೆ ಅರ್ಹವಾಗಿದೆ.

ಹೌದು, ಇತ್ತೀಚಿನ ದಿನಗಳಲ್ಲಿ ಕನ್ನಡದ ಬಹುತೇಕ ಹೊಸಬರ ಚಿತ್ರಗಳು ದೇಶ ಸೇರಿದಂತೆ ವಿದೇಶಿ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ನೋಡುಗರ ಮೆಚ್ಚುಗೆ ಪಡೆಯುತ್ತಿವೆ. ಆ ಸಾಲಿಗೆ ಹೊಸಬರ “ಸಿದ್ದಿ ಸೀರೆ’ಯೂ ಸೇರಿದೆ. ಈ ಚಿತ್ರವನ್ನು ಬ್ರಹ್ಮಾನಂದರೆಡ್ಡಿ ಹಾಗು ಕೆ.ಎನ್‌.ಕೃಷ್ಣ ಮೂರ್ತಿ ನಿರ್ದೇಶಿಸಿದ್ದಾರೆ. ಟೆಕ್ಕಿ ನವೀನ್‌ ಕುಮಾರ್‌ ನಿರ್ಮಾಣ ಮಾಡಿದ್ದಾರೆ. ಸಿನಿಮಾ ಕಥೆ ಬಗ್ಗೆ ಹೇಳುವುದಾದರೆ, ಇದೊಂದು ದಲಿತ ಮಹಿಳೆಯೊಬ್ಬಳ ಸೀರೆ ಕಥೆ.

ಆಕೆ ತನಗೆ ಸದ್ಗತಿ ದೊರಕಿಸುವ ಒಂದು ಸೀರೆಗಾಗಿ ಹೋರಾಟ ಮಾಡುವುದು ಚಿತ್ರದ ಹೈಲೈಟ್‌. 1990ರ ದಶಕದಲ್ಲಿ ಚಾಮರಾಜನಗರ ಬಳಿ ಇರುವ ಮಿರ್ಲೆ ಎಂಬ ಗ್ರಾಮದಲ್ಲಿ ನಡೆದಂತ ಸತ್ಯಘಟನೆ ಆಧರಿಸಿ, ಈ ಚಿತ್ರ ಮಾಡಲಾಗಿದೆ. ಆಗೆಲ್ಲಾ ಹಿರಿಯ ಮಹಿಳೆ ಸಾವನ್ನಪ್ಪಿದರೆ ಆಕೆಯ ಮೇಲೆ ಸೀರೆ ಹೊದಿಸಲಾಗುತ್ತಿತ್ತು. ಗುಣಮಟ್ಟದ ಸೀರೆ ಹೊದಿಸಿಕೊಂಡರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬ ನಂಬಿಕೆ ಆ ಮಹಿಳೆಯದು.

ಆದರೆ, ಆಕೆ ಬಡವಿ. ಸೀರೆ ಕೊಳ್ಳಲು ಸಾಧ್ಯವಾಗಲ್ಲ. ಅದಕ್ಕಾಗಿ ಹೇಗೆಲ್ಲಾ ಪರದಾಡುತ್ತಾಳೆ. ಆಕೆಯ ಸೀರೆ ವಿಷಯ ಎಷ್ಟೆಲ್ಲಾ ರಾಜಕೀಯ ತಿರುವು ಪಡೆದು, ಆ ಊರಲ್ಲಿ ಚರ್ಚೆಗೆ ಗ್ರಾಸವಾಗುತ್ತದೆ ಎಂಬುದು ಕಥಾಹಂದರ. ಇಲ್ಲಿ ಸುಧಾನರಸಿಂಹರಾಜು ಸಿದ್ದಿ ಪಾತ್ರದಲ್ಲಿ ನಟಿಸಿದ್ದಾರೆ. ತುಂಬ ವರ್ಷಗಳ ಬಳಿಕ ತೆರೆ ಮೇಲೆ ಕಾಣಿಸಿಕೊಂಡರೂ ಅದೊಂದು ಹೊಸಬಗೆಯ ಪಾತ್ರ ಎಂಬುದು ಅವರ ಮಾತು. ಆ ಪಾತ್ರಕ್ಕೆ ಮೇಕಪ್‌ ಇಲ್ಲದೆ, ಗಲೀಜು ಬಟ್ಟೆ ಹಾಕಿಕೊಂಡೇ ನಟಿಸಿದ್ದು ವಿಶೇಷವಂತೆ.

ಅದೊಂದು ಚಾಲೆಂಜ್‌ ಪಾತ್ರ ಎನ್ನುವ ಸುಧಾ ನರಸಿಂಹರಾಜು, ಇಡೀ ಚಿತ್ರ ನೋಡುಗರಿಗೆ ಹೊಸತನ ಕಟ್ಟಿಕೊಡುತ್ತದೆ ಎನ್ನುತ್ತಾರೆ ಅವರು. ಇನ್ನು, ಚಿತ್ರದಲ್ಲಿ ಸಿದ್ದಿ ಪುತ್ರಿಯಾಗಿ ಮಹಾಲಕ್ಷೀ ಬಜಾರಿಯಾಗಿ ಕಾಣಿಸಿಕೊಂಡರೆ, ಕವಿತಾ ಶೆಟ್ಟಿ ಪಕ್ಕದ ಮನೆ ಹೆಣ್ಣಾಗಿ ಕಾಣಿಸಿಕೊಂಡಿದ್ದಾರೆ. ಸ್ವರ್ಣ ಚಂದ್ರ ಸಹೋದರನ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ರವಿಶಂಕರ್‌ ಮಿರ್ಲೆ ಅವರು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಜೈ ಕೃಪಲಾನಿ ಛಾಯಾಗ್ರಹಣ ಮಾಡಿದ್ದಾರೆ.

ಟಾಪ್ ನ್ಯೂಸ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

shreyas manju’s Vishnupriya movie releasing on Feb 21

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.