‘ಗತವೈಭವ’ ತೋರಿಸಲು ಸುನಿ ರೆಡಿ: ದುಷ್ಯಂತ್ ಗೆ ಹೀರೋ ಪಟ್ಟ
Team Udayavani, Mar 3, 2022, 9:18 AM IST
ಸುನಿ ನಿರ್ದೇಶನದಲ್ಲಿ ಮೂಡಿಬಂದ “ಸಖತ್’ ಚಿತ್ರ ಹಿಟ್ ಆಗಿದ್ದು, ಗೊತ್ತೇ ಇದೆ. ಈಗ ಸುನಿ ಮತ್ತೂಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಅದು “ಗತವೈಭವ’.
ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರ ಇತ್ತೀಚೆಗೆ ಆರಂಭವಾಗಿದ್ದು, ಮೊದಲ ಹಂತವಾಗಿ ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ನವನಟ ದುಷ್ಯಂತ್ ನಾಯಕರಾಗುತ್ತಿದ್ದಾರೆ.
ಹೀರೋ ಆಗುತ್ತಿರುವ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ದುಷ್ಯಂತ್, “ನಾನು ಮೂಲತಃ ತುಮಕೂರಿನವನು. ವಿದೇಶದಲ್ಲಿ ಎಲ್‌ಎಲ್‌ಬಿ ಓದಿದ್ದೇನೆ. ಆದರೆ ಅಭಿನಯದಲ್ಲಿ ಆಸಕ್ತಿ ಹೆಚ್ಚು . ಮೊದಲು ನಾನು ಅಪ್ಪು ಅವರನ್ನು ನೆನೆಯುತ್ತೇನೆ. ಈ ಚಿತ್ರದ ಟೀಸರ್ ಕಳೆದ ವರ್ಷ ಸಿದ್ಧವಾಗಿತ್ತು. ಮೊದಲು ನಾವು ತೋರಿಸಿದ್ದೆ ಅಪ್ಪು ಅವರಿಗೆ. ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೆ ಹೆಚ್ಚು. ಆದರೆ ನಿನಗೆ ಒಳ್ಳೆಯ ಭವಿಷ್ಯವಿದೆ. ಚಿತ್ರದಲ್ಲಿ ನಟಿಸು ಎಂದಿದ್ದರು ಅಪ್ಪು. ಅವರ ಮಾತುಗಳು ನನಗೆ ಸ್ಪೂರ್ತಿ. ನಮ್ಮದು ಸಂಪ್ರದಾಯಸ್ಥರ ಕುಟುಂಬ. ಸಿನಿಮಾದಲ್ಲಿ ನಟಿಸುವುದು ನನ್ನ ತಂದೆ, ತಾಯಿಗೆ ಇಷ್ಟವಿರಲಿಲ್ಲ. ಕೊನೆಗೆ ತಾಯಿಯನ್ನು ಒಪ್ಪಿಸಿದೆ. ತಂದೆ ಈಗಲೂ ಪೂರ್ಣ ಒಪ್ಪಿಗೆ ನೀಡಿಲ್ಲ. ನಾನು ವಿದೇಶದಲ್ಲಿ ಓದುತ್ತಿದ್ದಾಗ ದಿನ ಕನ್ನಡಿ ಮುಂದೆ ನಿಂತು ನಟನಂತೆ ಅಭಿನಯಿಸುತ್ತಿದ್ದೆ. ನಂತರ ಅಭಿನಯಕ್ಕೆ ಬೇಕಾದ ತರಬೇತಿ ಪಡೆದೆ. ನನ್ನ ಸ್ನೇಹಿತರೊಬ್ಬರ ಮೂಲಕ ಸುನಿ ಅವರ ಪರಿಚಯವಾಯಿತು. ಕಥೆ ಸಿದ್ದವಾಯಿತು. ನಿರ್ಮಾಪಕರ ಹುಡುಕಾಟ ಆರಂಭವಾಯಿತು’ ಎಂದರು ದುಶ್ಯಂತ್.
ಇದನ್ನೂ ಓದಿ:ದಾಳಿಗೆ “ಸರ್ವಾಧಿಕಾರಿ’ ಬೆಲೆ ತೆರಲೇಬೇಕು! ಅಮೆರಿಕ ಸಂಸತ್‌ನಲ್ಲಿ ಬೈಡೆನ್ ಭಾಷಣ
ತಮ್ಮ ಮಗ ಹೀರೋ ಆಗುತ್ತಿರುವ ಬಗ್ಗೆ ಮಾತನಾಡಿದ ಗುಬ್ಬಿ ಶಾಸಕ ಶ್ರೀನಿವಾಸ್, “ನಾವು ರಾಜಕೀಯ ವ್ಯಕ್ತಿಗಳು ನಿಮಗಿಂತ ಚೆನ್ನಾಗಿ ನಟನೆ ಮಾಡುತ್ತೇವೆ. ಆದರೆ ನಾನು ನನ್ನ ಮಗನನ್ನು ಬೆಳೆಸಿದ ರೀತಿಯ ಬೇರೆ. ಅವನ ಆಯ್ಕೆಯೇ ಬೇರೆ. ಚುನಾವಣೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುವ ನನಗೆ ಸಿನಿಮಾ ನಿರ್ಮಾಣ ದೊಡ್ಡ ವಿಷಯವಲ್ಲ. ಆದರೆ ನನಗಿಷ್ಟವಿಲ್ಲದ ಕೆಲಸಕ್ಕೆ ನಾನು ಕೊಡಲ್ಲ. ಈ ಚಿತ್ರತಂಡ ನೋಡಿದರೆ ಸಂತೋಷವಾಗುತ್ತಿದೆ. ನನ್ನ ಮಗನಿಂದ ಒಳ್ಳೆಯದು ಆಗದಿದ್ದರೂ ಪರವಾಗಿಲ್ಲ, ಯಾರಿಗೂ ಕೆಟ್ಟದಾಗುವುದು ಬೇಡ’ ಎಂದರು ಶ್ರೀನಿವಾಸ್.
ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸುನಿ, “ಗತವೈಭವ ಎಂದರೆ ಗತಿಸಿ ಹೋದ ವೈಭವ ಎಂದು. ಈ ನಮ್ಮ ಚಿತ್ರದಲ್ಲಿ ವಾಸ್ಕೋಡಿಗಾಮನ ಕಥೆ ಸೇರಿದಂತೆ ಕೆಲವು ಐತಿಹಾಸಿಕ ಸನ್ನಿವೇಶಗಳಿರುತ್ತದೆ. ಫನ್, ಸೆಂಟಿಮೆಂಟ್ ಹಾಗೂ ಮೈಂಡ್ ಗೇಮ್‌ನ ಮಿಶ್ರಣ ಅನ್ನಬಹುದು. ದುಶ್ಯಂತ್ ಗೆ ಸ್ಟೇಜ್ ಫಿಯರ್ ಇಲ್ಲ. ಟೀಸರ್ ನಲ್ಲಿ ಆತನ ಅಭಿನಯಕ್ಕೆ ಹಾಗೂ ಧ್ವನಿಗೆ ಹೆಚ್ಚಿನ ಪ್ರಶಂಸೆ ವ್ಯಕ್ತವಾಗಿದೆ. ಏಪ್ರಿಲ್ ಕೊನೆಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದರು ಸುನಿ.
ಈ ಚಿತ್ರವನ್ನು ದೀಪಕ್ ತಿಮ್ಮಪ್ಪ ನಿರ್ಮಿಸುತ್ತಿದ್ದು, ಇವರಿಗೆ ಸುನಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ವಿಲಿಯಂ ಡೇವಿಡ್ ಛಾಯಾಗ್ರಹಣ, ಭರತ್ ಬಿ.ಜೆ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.