ಅಭಿಮಾನಿಗಳಿಗೆ ‘ವಿಕ್ರಾಂತ್ ರೋಣ’ ಚಿತ್ರತಂಡದಿಂದ ಸರ್ ಪ್ರೈಸ್
Team Udayavani, Apr 10, 2021, 4:36 PM IST
ಬೆಂಗಳೂರು: ಜಗತ್ತಿನ ಅತೀ ಎತ್ತರದ ಕಟ್ಟಡ ದುಬೈನ ಬುರ್ಜ್ ಖಲೀಪಾ ಮೇಲೆ ಟೈಟಲ್ ಲಾಂಚ್ ಮಾಡಿಕೊಂಡು ಬೆಟ್ಟದಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡದ ಸಿನಿಮಾ ‘ವಿಕ್ರಾಂತ್ ರೋಣ’ ಚಿತ್ರತಂಡ ಇದೀಗ ಮತ್ತೊಂದು ಸರ್ ಪ್ರೈಸ್ ನೀಡಲು ಮುಂದಾಗಿದೆ.
ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ನಾಯಕ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಏಪ್ರಿಲ್ 15 ರಂದು ಬೆಳಿಗ್ಗೆ 11.10ಕ್ಕೆ ಅಚ್ಚರಿಯೊಂದು ಕಾದಿದೆ ಎಂದು ಹೇಳಿಕೊಂಡಿದ್ದಾರೆ.
ಏನಿರಬಹುದು ಅಚ್ಚರಿ ?
ಈಗಾಗಲೇ ವಿಕ್ರಾಂತ್ ರೋಣ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿದೆ. ಏಪ್ರಿಲ್ 15 ರಂದು ಚಿತ್ರತಂಡದಿಂದ ಯಾವ ಸುದ್ದಿ ಹೊರಬರಲಿದೆ ಎನ್ನುವ ಕುತೂಹಲ ಕಿಚ್ಚನ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಅಂದು ವಿಕ್ರಾಂತ ರೋಣ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಬಹುದೇ ಎನ್ನುವ ಕುತೂಹಲಕಾರಿ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
15th April ,, 11.10am…
Await the surprise …
??#VikrantRonaAnnouncement #VikrantRona @vikrantrona pic.twitter.com/liFgpNMLQk— Kichcha Sudeepa (@KicchaSudeep) April 10, 2021
ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಶೂಟಿಂಗ್ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಇದು ಆ್ಯಕ್ಷನ್ ಓರಿಯೆಂಟೆಂಡ್ ಸಿನಿಮಾವಾಗಿದ್ದು, ಕಳೆದ ವರ್ಷ ಲಾಕ್ ಡೌನ್ ನಂತರ ಜೂನ್ ತಿಂಗಳಿನಲ್ಲಿ ವಿಕ್ರಾಂತ್ ರೋಣ ಶೂಟಿಂಗ್ ಆರಂಭವಾಗಿತ್ತು. ಇನ್ನು ಎರಡು ಹಾಡು ಮತ್ತು ಟಾಕಿ ಪೋರ್ಷನ್ ಬಾಕಿ ಉಳಿದಿದೆ. ಈ ಶೆಡ್ಯೂಲ್ ನಲ್ಲಿ ಬಾಕಿ ಉಳಿದ ಸನ್ನಿವೇಶಗಳ ಶೂಟಿಂಗ್ ಮುಗಿಯಲಿದೆ. ಮುಂದಿನ ಕೆಲ ದಿನಗಳಲ್ಲಿ ಶೂಟಿಂಗ್ ನಡೆಯಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೇ ಮೇ ತಿಂಗಳ ಅಂತ್ಯದಲ್ಲಿ ಶೂಟಿಂಗ್ ಪೂರ್ಣಗೊಳ್ಳಲಿದೆ.
ವಿಕ್ರಾಂತ್ ರೋಣ ಸಿನಿಮಾದಲ್ಲಿ ಸುದೀಪ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, 50 ದೇಶಗಳಲ್ಲಿ ರಿಲೀಸ್ ಆಗಲಿದೆ. ಭಾರತದ ಹಲವು ಭಾಷೆಗಳ ಜೊತೆಗೆ ಫ್ರೆಂಚ್, ಅರೇಬಿಕ್, ಸ್ಪ್ಯಾನಿಷ್ ಮತ್ತು ರಷ್ಯನ್ ಭಾಷೆಗಳಲ್ಲಿ ಡಬ್ ಆಗಲಿದೆ ಎನ್ನುವ ಸುದ್ದಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.