ಟಗರು ಚಿತ್ರೀಕರಣ ಮುಕ್ತಾಯ
Team Udayavani, Dec 5, 2017, 11:35 AM IST
ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸಿರುವ, ಸೂರಿ ನಿರ್ದೇಶನದ “ಟಗರು’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ಗವಿಪುರಂನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಕುಂಬಳಕಾಯಿ ಒಡೆಯುವುದರ ಮೂಲಕ ಚಿತ್ರದ ಚಿತ್ರೀಕರಣ ಪೂರ್ಣವಾಯಿತು.
ಸೂರಿ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ವೀನಸ್ ಎಂಟರ್ ಟೈನರ್ ಮೂಲಕ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ಚರಣ್‌ರಾಜ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಮಹೇಂದ್ರ ಸಿಂಹ ಅವರ ಛಾಯಾಗ್ರಹಣವಿದೆ.
ದೀಪು ಎಸ್ ಕುಮಾರ್ ಸಂಕಲನ, ಸುರೇಶ್ ಕಲಾ ನಿರ್ದೇಶನ, ಸೂರಿ ನೃತ್ಯ ನಿರ್ದೇಶನ ಹಾಗೂ ಸೂರಿ, ಜಾಲಿ ಬಾಸ್ಟಿನ್, ವಿನೋದ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ಶಿವರಾಜಕುಮಾರ್, ಮಾನ್ವಿತಾ ಹರೀಶ್, ಭಾವನಾರಾವ್, ಧನಂಜಯ್, ದೇವರಾಜ್, ವಸಿಷ್ಠ ಸಿಂಹ, ಅಚ್ಯುತ ಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.