ತಮಿಳಿನಲ್ಲೂ “ಟಕ್ಕರ್’ ರೆಡಿ
ಏಕಕಾಲಕ್ಕೆ ತೆರೆಗೆ ಸಿದ್ಧತೆ
Team Udayavani, Jul 16, 2019, 3:00 AM IST
ಯುವ ನಟ ಮನೋಜ್ ಕುಮಾರ್ ಮತ್ತು ರಂಜನಿ ರಾಘವನ್ ಅಭಿನಯಿಸಿರುವ “ಟಕ್ಕರ್’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಹೊಸ ಸುದ್ದಿಯೆಂದರೆ, ಕನ್ನಡದ ಜೊತೆಗೆ ತಮಿಳಿನಲ್ಲೂ ಏಕಕಾಲಕ್ಕೆ ಬಿಡುಗಡೆ ಮಾಡುವ ಯೋಚನೆಯಲ್ಲಿದೆ ಚಿತ್ರತಂಡ.
“ಎಸ್‌ಎಲ್‌ಎನ್ ಕ್ರಿಯೇಶನ್ಸ್’ ಬ್ಯಾನರ್ ಅಡಿಯಲ್ಲಿ ಕೆ.ಎನ್. ನಾಗೇಶ್ ಕೋಗಿಲು ನಿರ್ಮಾಣ ಮಾಡಿರುವ “ಟಕ್ಕರ್’ ಚಿತ್ರಕ್ಕೆ ರಘು ಶಾಸ್ತ್ರಿ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ “ಟಕ್ಕರ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್‌ಗೆ ಸಿನಿಪ್ರಿಯರು ಮತ್ತು ಚಿತ್ರರಂಗದಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇನ್ನು ತಮ್ಮ ಚೊಚ್ಚಲ ಚಿತ್ರ “ಟಕ್ಕರ್’ ಬಿಡುಗಡೆಗೂ ಮೊದಲೇ ನಾಯಕ ಮನೋಜ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಇನ್ನೂ ಎರಡೂ ಚಿತ್ರಗಳ ಕೆಲಸಗಳು ಆರಂಭವಾಗಿದ್ದು, ಶೀಘ್ರದಲ್ಲೇ ಈ ಚಿತ್ರಗಳ ಬಗ್ಗೆ ಹೆಚ್ಚಿನ ಮಾಹಿತಿಗಳು ಹೊರಬೀಳುವ ನಿರೀಕ್ಷೆ ಇದೆ.
ಮೊಬೈಲ್ ಮತ್ತು ಇಂಟರ್‌ನೆಟ್‌ನಿಂದ ಏನೆಲ್ಲಾ ಅನಾಹುತಗಳು ಸಂಭವಿಸುತ್ತಿವೆ, ಮಳೆಯರಿಗೆ ಅದು ಹೇಗೆ ಮಾರಕವಾಗುತ್ತಿದೆ ಎಂಬ ಅಂಶದ ಸುತ್ತ ಹಣೆಯಲಾಗಿರುವ “ಟಕ್ಕರ್’ ಚಿತ್ರ ಆ್ಯಕ್ಷನ್, ಸೆಂಟಿಮೆಂಟ್ ಸೇರಿದಂತೆ ಪಕ್ಕಾ ಮಾಸ್ ಎಂಟರ್‌ಟೈನ್ಮೆಂಟ್ ಅಂಶಗಳನ್ನು ಒಳಗೊಂಡಿದೆ.
ಚಿತ್ರದಲ್ಲಿ ಮನೋಜ್, ರಂಜನಿ ರಾಘವನ್ ಅವರೊಂದಿಗೆ ಶ್ರೀಧರ್, ಶಂಕರ್ ಅಶ್ವಥ್, ಸುಮಿತ್ರಾ, ಭಜರಂಗಿ ಲೋಕಿ, ಸಾಧು ಕೋಕಿಲಾ, ಜೈಜಗದೀಶ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಟಕ್ಕರ್’ ಚಿತ್ರದ ಹಾಡುಗಳಿಗೆ ಕದ್ರಿ ಮಣಿಕಾಂತ್ ಸಂಗೀತ ಸಂಯೋಜಿಸಿದ್ದು, ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ.
ಚಿತ್ರಕ್ಕೆ ವಿಲಿಯಮ್ಸ್ ಡೇವಿಡ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನವಿದೆ. ಡಿಫರೆಂಟ್ ಡ್ಯಾನಿ ಸಾಹಸ, ಮೋಹನ್ ನೃತ್ಯ ನಿರ್ದೇಶನವಿದೆ. ಗುರುರಾಜ್ ದೇಸಾಯಿ ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.