ಹೆಣ್ಣುಮಗಳೊಬ್ಬಳ ಸಾಧನೆಯ ಸುತ್ತ ತನುಜಾ
Team Udayavani, Jan 18, 2023, 2:24 PM IST
2020ರ ಸಮಯದಲ್ಲಿ ಇಡೀ ದೇಶವೇ ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗಿತ್ತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು, ದೊಡ್ಡ ಸುದ್ದಿಯಾಗಿತ್ತು. ಅಂದಿನ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ. ಸುಧಾಕರ್ ಮತ್ತು ಸರ್ಕಾರ ತನುಜಾಳಿಗೆ ನೀಟ್ ಪರೀಕ್ಷೆ ಬರೆಯಲು ಅನುಕೂಲ ಮಾಡಿತ್ತು. ಸಾಕಷ್ಟು ಅಡೆತಡೆಗಳನ್ನು ಎದುರಿಸಿ, ಕೊನೆಗೂ ಅಂದುಕೊಂಡಂತೆ ತನುಜಾ ನೀಟ್ ಪರೀಕ್ಷೆ ಬರೆಯುವಲ್ಲಿ ಯಶಸ್ವಿಯಾಗಿದ್ದರು. ಈಗ ಇದೇ ನೈಜ ಘಟನೆಯನ್ನು ಆಧರಿಸಿ “ತನುಜಾ’ ಎಂಬ ಹೆಸರಿನಲ್ಲಿ ಸಿನಿಮಾವಾಗಿ ತೆರೆಗೆ ಬರಲು ಸಿದ್ಧವಾಗಿದೆ.
ಹರೀಶ್ ಎಂ. ಡಿ ಹಳ್ಳಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಈಗಾಗಲೇ “ತನುಜಾ’ ಸಿನಿಮಾದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿದೆ. “”ತನುಜಾ’ ನಮ್ಮ ನಾಡಿನ ಗ್ರಾಮೀಣ ಭಾಗದ ಹೆಣ್ಣುಮಗಳೊಬ್ಬಳ ಸಾಧನೆಯ ನೈಜ ಘಟನೆಯಾಧರಿತ ಚಿತ್ರ.
ಒಬ್ಬ ವಿದ್ಯಾರ್ಥಿ ಮನಸ್ಸು ಮಾಡಿದರೆ ಯಾವುದೇ ಅಡೆ ತಡೆ ಬಂದರು ಮೆಟ್ಟಿ ನಿಂತು ಹೇಗೆಲ್ಲಾ ಸಾಧನೆ ಮಾಡಬಹುದು, ತಾಯಿಯ ಇಚ್ಛಾಶಕ್ತಿಯಿಂದ ಮಕ್ಕಳ ಭವಿಷ್ಯ ಹೇಗೆಲ್ಲಾ ರೂಪಿಸಬಹುದು? ಶಿಕ್ಷಕರು ನಿರ್ಧಾರ ಮಾಡಿದರೆ ವಿಧ್ಯಾರ್ಥಿಗಳ ಗುರಿ ಮುಟ್ಟಲು ಹೇಗೆ ನೆರವಾಗಬಹುದು? ಒಂದು ಆಡಳಿತಾತ್ಮಕ ವ್ಯವಸ್ಥೆ ಸಾಮಾನ್ಯ ಜನರಿಗೆ ಸೂಕ್ತ ಸಮಯಕ್ಕೆ ಸ್ಪಂದಿಸಿದರೆ ಏನೆಲ್ಲಾ ಅಚ್ಚರಿ ನಡೆಯಬಹುದು? ಎನ್ನುವುದಕ್ಕೆ “ತನುಜಾ’ ಚಿತ್ರ ಒಂದು ಉತ್ತಮ ಉದಾಹರಣೆ. ಅನೇಕರಿಗೆ ಪ್ರೇರಣೆಯಾಗುವಂಥ ಅಪರೂಪದ ನೈಜ ಘಟನೆ ಈ ಸಿನಿಮಾದಲ್ಲಿದೆ’ ಎಂಬುದು ಚಿತ್ರದ ಬಗ್ಗೆ ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ ಮಾತು. ಇನ್ನು “ತನುಜಾ’ ಸಿನಿಮಾದಲ್ಲಿ ಸಪ್ತ ಪಾವೂರ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಉಳಿದಂತೆ ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿ ಶ್ರೀ, ರಘುನಂದನ್ ಎಸ್.ಕೆ, ಸತೀಶ್, ಚಿತ್ಕಲಾ ಬಿರಾದಾರ್ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಸಚಿವ ಡಾ. ಕೆ. ಸುಧಾಕರ್, ಪತ್ರಕರ್ತ ವಿಶ್ವೇಶ್ವರ್ ಭಟ್ ಅತಿಥಿ ಕಲಾವಿದರಾಗಿ “ತನುಜಾ’ ಸಿನಿಮಾದಲ್ಲಿ ತೆರೆಮೇಲೆ ಕಾಣಿಸಿಕೊಂಡಿದ್ದಾರೆ. ಶಿವಮೊಗ್ಗ, ಬೆಂಗಳೂರು ಸೇರಿದಂತೆ ಈ ಘಟನೆ ನಡೆದ ಸ್ಥಳಗಳಲ್ಲಿಯೇ ಸುಮಾರು 43 ದಿನಗಳ ಕಾಲ ಈ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.
“ಬಿಯಾಂಡ್ ವಿಷನ್ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ಚಂದ್ರಶೇಖರ ಗೌಡ, ಮನೋಜ್ ಬಿ. ಜಿ, ಪ್ರಕಾಶ್ ಮದ್ದೂರು, ಅನಿಲ್ ಷಡಾಕ್ಷರಿ, ಗಿರೀಶ್ ಕೆ. ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.