ಚಿತ್ರರಂಗದ ನೆರವಿಗೆ ಧಾವಿಸುವಂತೆ ಸಿಎಂಗೆ ತಾರಾ ಮನವಿ

Team Udayavani, Apr 15, 2020, 10:50 AM IST

ಚಿತ್ರರಂಗದ ನೆರವಿಗೆ ಧಾವಿಸುವಂತೆ ಸಿಎಂಗೆ ತಾರಾ ಮನವಿ

ಕೋವಿಡ್ 19 ದಾಳಿಯಿಂದಾಗಿ ಕನ್ನಡ ಚಿತ್ರರಂಗ ಸಂಪೂರ್ಣ ಸಂಕಷ್ಟದಲ್ಲಿದ್ದು, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದೆ. ಈ ಬಗ್ಗೆ ನಟಿ ತಾರಾ ಅನುರಾಧ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮೂಲಕ ಚಿತ್ರರಂಗದ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ.

ಹಲವು ನಿರ್ಮಾಪಕರು ಸಮಸ್ಯೆ ಅನುಭವಿಸುತ್ತಿದ್ದು,ಲಾಕ್‌ಡೌನ್‌ ತೆರವಾದರೂ ಚಿತ್ರರಂಗ ಸುಧಾರಿಸಿಕೊಳ್ಳಲು ಕನಿಷ್ಠ 6 ತಿಂಗಳು ಬೇಕು. ಹಾಗಾಗಿ ಸರ್ಕಾರ ಈ ವ್ಯಾಪ್ತಿಯಲ್ಲಿ ನೀಡಬಹುದಾದ ನೆರವು ಹಾಗು ಯಾವುದೇ ನಿರ್ಮಾಪಕರಿಗೆ ನಷ್ಟವಾಗದಂತೆ ಚಿತ್ರ ಬಿಡುಗಡೆಗೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರದ ನೆರವು ಅಗತ್ಯವಾಗಿದೆ. ನಿರ್ದೇಶಕರು, ಛಾಯಾಗ್ರಾಹಕರು, ಸಂಕಲನಕಾರರು, ಪೋಷಕ ಕಲಾವಿದರು, ಒಕ್ಕೂಟ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಬೇಕು.

ಮಂಡಳಿಯ ಅಂಗವಾಗಿ ದುಡಿಯುತ್ತಿರುವ ವಿತರಕರು, ಪ್ರದರ್ಶಕರು ಹಾಗು ನಿರ್ಮಾಪಕರು ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಬಡ್ಡಿಗೆ ಸಾಲ ಮಾಡಿದ್ದಾರೆ. ಆದರೆ, ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಸಾಲದ ಬಡ್ಡಿಯನ್ನು ಕಡಿಮೆ ಮಾಡುವಂತೆ ಸಂಬಂಧಿಸಿದವರಿಗೆ ಮನವೊಲಿಸಬಹುದು. ಲಾಕ್‌ಡೌನ್‌ ಜಾರಿಯ ಮುನ್ನ ರಿಲೀಸ್‌ ಆದ ಚಿತ್ರಗಳಿಗೆ ಕಡ್ಡಾಯವಾಗಿ ಸರ್ಕಾರದ ಸಹಾಯಧನ (ಸಬ್ಸಿಡಿ) ದೊರೆಯುವಂತೆ ಮಾಡಬಹುದು. ನಿರ್ಮಾಪಕರಿಗೆ ಎದುರಾಗುವ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿ, ಪರಿಹಾರಕ್ಕೆ ರೋಡ್‌ ಮ್ಯಾಪ್‌ ಸಿದ್ಧಪಡಿಸುವುದು ಎಲ್ಲಾ ವಲಯದವರಿಗೂ ನೀಡಬಹುದಾದ ನೆರವಿನ ಬಗ್ಗೆ ಕ್ರಮ ಕೈಗೊಳ್ಳಬೇಕು. ಈ ಸಮಸ್ಯೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರೋದು, ನಿರ್ದೇಶಕರು, ಛಾಯಾಗ್ರಾಹಕರು, ಸಂಕಲನಕಾರರು, ಕಲಾವಿದರು, ಕಾರ್ಮಿಕರು ಇವರಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಬಿಪಿಎಲ್‌ ಕಾರ್ಡ್‌ ಹಾಗು ಎಪಿಎಲ್‌ಕಾರ್ಡ್‌ ನೀಡಲು ಕ್ರಮ ಸೇರಿದಂತೆ ಉಚಿತ ಆರೋಗ್ಯ ಸೇವೆ ಹಾಗು ಈ ವರ್ಗದವರಿಗೆ ಅಗತ್ಯ ದಿನಸಿ, ಔಷಧಕೊಳ್ಳಲು 5 ಸಾವಿರ ರೂ.ಮೊತ್ತದ ಕೂಪನ್‌ ಒದಗಿಸುವುದು ಸೇರಿದಂತೆ ಅನೇಕ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಾರಾ ಅನುರಾಧ ಅವರು ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದ್ದಾರೆ.  ಈ ವೇಳೆ, ಬಿಜೆಪಿ ಮುಖಂಡ ರುದ್ರೇಶ್‌, ಮರಿಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.