ಬಿಡುಗಡೆಯತ್ತ ತರಂಗ ವಿಶ್ವ ನಿರ್ಮಾಣದ ‘ಗಿರ್ಕಿ’
Team Udayavani, Jun 18, 2022, 4:10 PM IST
ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ ಗುರುತಿಸಿಕೊಂಡಿರುವ ತರಂಗ ವಿಶ್ವ, ಈಗ “ಗಿರ್ಕಿ’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಗಾಂಧಿನಗರಕ್ಕೆ ಪರಿಚಯ ವಾಗುತ್ತಿದ್ದಾರೆ. ಈ ಚಿತ್ರ ಜುಲೈ 08ರಂದು ತೆರೆಕಾಣಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್, ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಚಿತ್ರದ ಬಗ್ಗೆ ಮಾತನಾಡುವ ನಟ ಕಂ ನಿರ್ಮಾಪಕ ತರಂಗ ವಿಶ್ವ, “ಈ ಸಿನಿಮಾದ ನಿರ್ಮಾಣದ ಜೊತೆಗೆ ನಾನು ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಎಲ್ಲರ ಶ್ರಮದಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎನ್ನುತ್ತಾರೆ.
ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ವೀರೇಶ್ ಪಿ. ಎಂ, “ಗಿರ್ಕಿ ಎಂದರೆ ಸುತ್ತಾಟ ಹಾಗೂ ಪರ್ಯಟನೆ. ಒಂದೇ ಥರಹದ ಕಥೆಯಲ್ಲ. ಲವ್, ಕಾಮಿಡಿ, ಫ್ಯಾಮಿಲಿ ಕಂಟೆಂಟ್ ಹೀಗೆ ಎಲ್ಲ ಥರದ ಎಂಟರ್‌ಟೈನ್ಮೆಂಟ್ ಎಲಿಮೆಂಟ್ಸ್ ಕೂಡ ಇದರಲ್ಲಿದೆ. ಸಿನಿಮಾದ ಬಹುತೇಕ ಶೂಟಿಂಗ್ ಬೆಂಗಳೂರು ಸುತ್ತಮುತ್ತ ನಡೆಸಲಾಗಿದೆ’ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.
“ಗಿರ್ಕಿ’ ಚಿತ್ರದ ನಾಯಕ ವಿಲೋಕ್, ನಾಯಕಿ ದಿವ್ಯ ಉರುಡುಗ, ನಟ ರಾಶಿ ಮಹದೇವ್ ಸೇರಿದಂತೆ ಅನೇಕರು ನಟಿಸಿದ್ದಾರೆ. “ಗಿರ್ಕಿ’ ಚಿತ್ರದ ಹಾಡುಗಳಿಗೆ ಸಂಗೀತದ ವೀರ್ ಸಮರ್ಥ್ ಸಂಗೀತ ಸಂಯೋಜನೆಯಿದ್ದು, ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್ ಸಾಹಿತ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.