Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Team Udayavani, Jan 9, 2025, 11:07 AM IST
“ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ನಾಯಕಿಯಾಗಿ ರಚನಾ ಇಂದರ್ ಆಯ್ಕೆಯಾಗಿದ್ದಾರೆ. ನಾಯಕ ನಿಹಾರ್ ಮುಖೇಶ್ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಅಕ್ಷರ ಪಾತ್ರದಲ್ಲಿ ರಚನಾರನ್ನು ಚಿತ್ರತಂಡ ಪ್ರೇಕ್ಷಕರಿಗೆ ಪರಿಚಯಿಸಿದ್ದು, ಪೋಸ್ಟರ್ ರಿಲೀಸ್ ಮಾಡಿದೆ.
ತೀರ್ಥರೂಪ ತಂದೆಯವರಿಗೆ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮೈಸೂರು, ಕೊಚ್ಚಿ ಮೂಡಿಗೆರೆ ಸುತ್ತಮುತ್ತ ಶೇಖಡ 50ರಷ್ಟು ಶೂಟಿಂಗ್ ಮಾಡಿರುವ ಚಿತ್ರತಂಡ ಸಂಕ್ರಾಂತಿ ಬಳಿಕ ನಾಲ್ಕನೇ ಹಂತದ ಚಿತ್ರೀಕರಣವನ್ನು ಮೂಡಿಗೆರೆಯಲ್ಲಿ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ.
ಆ ನಂತರ ಉತ್ತರ ಭಾರತದ ಕಡೆ ಚಿತ್ರೀಕರಣ ನಡೆಸಲಿದೆ. ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಡಿ ತೀರ್ಥರೂಪ ತಂದೆಯವರಿಗೆ ಸಿನಿಮಾ ನಿರ್ಮಾಣವಾಗುತ್ತಿದ್ದು, ರಾಮೇನಹಳ್ಳಿ ಜಗನ್ನಾಥ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದ ಸಂಡೇ ಸಿನಿಮಾಸ್ ಈ ಸಿನಿಮಾವನ್ನು ಪ್ರಸೆಂಟ್ ಮಾಡುತ್ತಿದೆ. ತೆಲುಗಿನಲ್ಲಿ ಗುಪ್ಪೆಡಂತ ಮನಸು ಸೀರಿಯಲ್ ಖ್ಯಾತಿಯ ನಿಹಾರ್ ಮುಖೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ತೀರ್ಥರೂಪ ತಂದೆಯವರಿಗೆ ಚಿತ್ರ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರುತ್ತಿದೆ.
ತೆಲುಗಿನಲ್ಲಿ ಪ್ರಿಯಮೈನ ನಾನ್ನಕು ಎಂಬ ಶೀರ್ಷಿಕೆ ಇಡಲಾಗಿದೆ. ಕೌಟುಂಬಿಕ ಹಿನ್ನೆಲೆ ಕಥೆಯುಳ್ಳ ಸಿನಿಮಾಗೆ ದೀಪಕ್ ಯರಗೇರಾ ಛಾಯಾಗ್ರಹಣ, ಜೋ ಕೋಸ್ಟ್ ಸಂಗೀತ, ಪ್ರಶಾಂತ್ ರಾಜಪ್ಪ ಸಂಭಾಷಣೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.