“ತ್ರಿವಿಕ್ರಮ’ ತಂಡ ಸೇರಿಕೊಂಡ ತೆಲುಗು ನಟ
ನಾಯಕಿ ತಂದೆಯಾಗಿ ಜಯಪ್ರಕಾಶ್ ನಟನೆ
Team Udayavani, Sep 23, 2019, 3:02 AM IST
ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ಅಭಿನಯದ “ತ್ರಿವಿಕ್ರಮ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಶೇ.40 ರಷ್ಟು ಚಿತ್ರೀಕರಣ ಪೂರೈಸಿರುವ ಚಿತ್ರತಂಡಕ್ಕೆ ಈಗ ತೆಲುಗು ಚಿತ್ರರಂಗದ ನಟರೊಬ್ಬರು ಎಂಟ್ರಿಯಾಗಿದ್ದಾರೆ. ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ಯಶಸ್ವಿ ಚಿತ್ರಗಳಲ್ಲಿ ನಟಿಸುವ ಮೂಲಕ ಬಿಝಿ ನಟ ಎನಿಸಿಕೊಂಡಿರುವ ಜಯಪ್ರಕಾಶ್, “ತ್ರಿವಿಕ್ರಮ’ ಚಿತ್ರತಂಡ ಸೇರಿದ್ದಾರೆ.
ಈ ಚಿತ್ರದಲ್ಲಿ ಅವರದು ನಾಯಕಿ ತಂದೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ನಿರ್ದೇಶಕ ಸಹನಮೂರ್ತಿ ಅವರು ಕಳೆದ ಐದು ದಿನಗಳಿಂದಲೂ ಅವರ ಭಾಗದ ಕೆಲ ಮುಖ್ಯ ದೃಶ್ಯಗಳನ್ನು ಚಿತ್ರೀಕರಿಸಿದ್ದಾರೆ. ಅಂದಹಾಗೆ, ಜಯಪ್ರಕಾಶ್ ಅವರಿಗೆ “ತ್ರಿವಿಕ್ರಮ’ ಎರಡನೇ ಚಿತ್ರ. ಈ ಹಿಂದೆ ಅವರು, ಶಿವರಾಜಕುಮಾರ್ ಅಭಿನಯದ “ಕವಚ’ ಚಿತ್ರದಲ್ಲಿ ನಟಿಸಿದ್ದರು.
ಈಗ “ತ್ರಿವಿಕ್ರಮ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯಕ್ಕೆ ಕಾಲೇಜ್ ಭಾಗದ ಚಿತ್ರೀಕರಣ ಮುಗಿಸಲು ಸಜ್ಜಾಗಿರುವ ಚಿತ್ರತಂಡ, ಅದನ್ನು ಪೂರೈಸಿ, ರಾಜಸ್ಥಾನಕ್ಕೆ ಹೊರಡಲಿದ್ದಾರೆ. ಅದಾದ ಬಳಿಕ ಉಳಿದ ಮಾತಿನ ಭಾಗದ ಚಿತ್ರೀಕರಣ ಮುಗಿಸುವ ಯೋಜನೆ ಹಾಕಿಕೊಂಡಿದೆ. ಹಾಡುಗಳಿಗೆ ಗೋವಾ, ದೂದ್ಸಾಗರ್ ಹಾಗು ಬ್ಯಾಂಕಾಕ್ಗೆ ಹೋಗುವ ಪ್ಲಾನ್ ಮಾಡಿಕೊಂಡಿದೆ. ಚಿತ್ರದಲ್ಲಿ ಆಕಾಂಕ್ಷ ನಾಯಕಿಯಾದರೆ,
ಅಕ್ಷರಗೌಡ ಎರಡನೇ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಪಕ್ಕಾ ಲವ್ಸ್ಟೋರಿ ಹೊಂದಿದ್ದು, ತಾಯಿ ಸೆಂಟಿಮೆಂಟ್, ಎಮೋಷನ್ಸ್ ಹಾಗು ಒಂದಷ್ಟು ಗೆಳೆತನ ಇತ್ಯಾದಿ ಅಂಶಗಳು ಚಿತ್ರದಲ್ಲಿವೆ. ಉಳಿದಂತೆ ಚಿತ್ರದಲ್ಲಿ ಸಾಧುಕೋಕಿಲ, ತುಳಸಿ ಶಿವಮಣಿ, ಚಿಕ್ಕಣ್ಣ, ಸುಚೇಂದ್ರಪ್ರಸಾದ್ ಇತರರು ನಟಿಸುತ್ತಿದ್ದಾರೆ. ಅರ್ಜುನ್ ಜನ್ಯಾ ಆರು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.