ಕೋವಿಡ್ ರೋಗಿಗಳ ಪಾಲಿಗೆ ‘ಹೀರೋ’ : ಆ್ಯಂಬುಲೆನ್ಸ್ ಚಾಲಕನಾದ ಖಳನಟ ಅರ್ಜುನ್ ಗೌಡ
Team Udayavani, Apr 30, 2021, 1:06 PM IST
ಬೆಂಗಳೂರು: ಕೋವಿಡ್ ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ದೇಶ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ, ಇಲ್ಲೊಬ್ಬ ಚಂದನವನದ ನಟ ಆ್ಯಂಬುಲೆನ್ಸ್ ಚಾಲಕನಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ರುಸ್ತುಂ, ಯುವರತ್ನ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿರುವ ಅರ್ಜುನ್, ಈಗ ರಿಯಲ್ ಲೈಫಿನಲ್ಲಿ ಹೀರೋ ಆಗಿದ್ದಾನೆ. ಇವರು ಕೋವಿಡ್ ಸೋಂಕಿತರಿಗೆ ಸಹಾಯ ಮಾಡಲು ಆ್ಯಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡುತ್ತಾರೆ ಮತ್ತು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಮೃತದೇಹಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಸೇವೆಯನ್ನು ಮಾಡುತ್ತಿದ್ದಾರೆ.
ಈಗಾಗಲೇ ಸಾಕಷ್ಟು ಮಂದಿಗೆ ಅರ್ಜುನ್ ಸಹಾಯ ಮಾಡಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಮಾನವೀಯ ಕೆಲಸಕ್ಕೆ ಮುಂದಾಗಿರುವ ಅರ್ಜುನ್ ಇನ್ನು ಎರಡು ತಿಂಗಳು ಈ ಕೆಲಸವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಕೇವಲ ರೋಗಿಗಳನ್ನು ಕರೆದೊಯ್ಯುವುದು ಮತ್ತು ಮೃತದೇಹಗಳನ್ನು ಸಾಗಿಸುವುದು ಮಾತ್ರವಲ್ಲದೆ ಆಕ್ಸಿಜನ್ ವ್ಯವಸ್ಥೆಯನ್ನು ಮಾಡಿಸುತ್ತಿದ್ದಾರೆ.
ಇನ್ನು ಬಾಲಿವುಡ್‍ನ ನಟ ಸಲ್ಮಾನ್ ಖಾನ್ ಸೇರಿದಂತೆ ಕೆಲವು ತಾರೆಯರು ಸಂಕಷ್ಟದಲ್ಲಿರುವ ಜನರ ಸಹಾಯಕ್ಕೆ ನಿಂತಿದ್ದಾರೆ. ಕಳೆದ ಬಾರಿ ನಟ ಸೋನು ಸೂದ್ ಸ್ವಂತ ದುಡ್ಡಿನಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದರು. ಈ ಬಾರಿಯೂ ಅವರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.