ಭಟ್ಟರ ಗಾಳಿಪಟದಲ್ಲಿ ಚೈನೀಸ್ ಹುಡುಗಿ
Team Udayavani, Jan 19, 2019, 5:33 AM IST
ಯೋಗರಾಜ್ ಭಟ್ ನಿರ್ದೇಶನದ “ಪಂಚತಂತ್ರ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಬಹುದು. ಈ ನಡುವೆಯೇ ಭಟ್ಟರು ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬಿಝಿಯಾಗಿದ್ದಾರೆ. ಅದು “ಗಾಳಿಪಟ-2′. ಭಟ್ಟರು “ಗಾಳಿಪಟ-2′ ಚಿತ್ರ ಮಾಡುತ್ತಾರೆಂಬ ಸುದ್ದಿ ಹಲವು ವರ್ಷಗಳಿಂದ ಓಡಾಡುತ್ತಲೇ ಇತ್ತು. ಆದರೆ, ಆ ಸಿನಿಮಾಕ್ಕೆ ಕಾಲ ಕೂಡಿಬಂದಿರಲಿಲ್ಲ.
ಈಗ ಎಲ್ಲವೂ ಪಕ್ಕಾ ಆಗಿದ್ದು, ಭಟ್ಟರು ಚಿತ್ರೀಕರಣಕ್ಕೆ ಅಣಿಯಾಗಿದ್ದಾರೆ. ಮೊದಲ ಹಂತವಾಗಿ ಚಿತ್ರದ ಟೈಟಲ್ ಲಾಂಚ್ ಮಾಡಲಾಗಿದೆ. ಈಗಾಗಲೇ ಚಿತ್ರಕ್ಕೆ ಬೇಕಾದ ಗಾಳಿಪಟ ಉತ್ಸವದ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಈ ಬಾರಿ ಭಟ್ಟರ ಗಾಳಿಪಟದಲ್ಲಿ ಯಾರೆಲ್ಲಾ ಇರುತ್ತಾರೆಂದು ನೀವು ಕೇಳಬಹುದು. ಶರಣ್, “ಲೂಸಿಯಾ’ ಪವನ್ ಹಾಗೂ ರಿಷಿ ನಾಯಕರಾಗಿ ನಟಿಸುತ್ತಿದ್ದಾರೆ. ಈ ಮೂವರಿಗೆ ಐವರು ನಾಯಕಿಯರಿದ್ದಾರೆ.
ಈಗಾಗಲೇ ಸೋನಾಲ್ ಮೊಂತೆರೋ, ಶರ್ಮಿಳಾ ಮಾಂಡ್ರೆ ಹಾಗೂ ಮುಂಬೈನ ಮಾಡೆಲ್‌ವೊಬ್ಬರು ಆಯ್ಕೆಯಾಗಿದ್ದರು. ಇನ್ನೊಬ್ಬರು ಬೆಂಗಾಲಿ ಬೆಡಗಿ ಹಾಗೂ ಚೈನೀಸ್ ಹುಡುಗಿಯೊಬ್ಬಳ ಆಯ್ಕೆ ನಡೆಯಬೇಕಿದೆ. ಎಲ್ಲಾ ಓಕೆ, ಚಿತ್ರಕ್ಕೆ ಚೈನೀಸ್ ಹುಡುಗಿಯ ಅಗತ್ಯವೇನು ಎಂದು ನೀವು ಕೇಳಬಹುದು. ಕಥೆ ಪಡೆಯುವ ತಿರುವುನಿಂದಾಗಿ ಚೈನೀಸ್ ಹುಡುಗಿಯನ್ನು ಕರೆತರಲು ಭಟ್ಟರು ಮುಂದಾಗಿದ್ದಾರೆ.
ಈಗಾಗಲೇ ಅಲ್ಲಿನ ಒಂದಿಬ್ಬರ ಜೊತೆ ಮಾತುಕತೆಯಾಗಿದ್ದು, ಸದ್ಯದಲ್ಲೇ ಅಂತಿಮವಾಗಲಿದೆ. ಈಗಾಗಲೇ ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ ಆರಂಭಗೊಂಡಿದ್ದು, ಅರ್ಜುನ್ ಜನ್ಯಾ ಸಂಗೀತ ನೀಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಹಾಗೂ ವಿದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ. ಮಹೇಶ್ ಎನ್ನುವವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಮಾರ್ಚ್‌ನಿಂದ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.