“ಗ್ರಾಮ’ ಚಿತ್ರದ ಮೊದಲ ಹಂತ ಮುಕ್ತಾಯ
Team Udayavani, Jun 12, 2018, 10:58 AM IST
ಯಶ್‌ದೀಪ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಂತಕುಮಾರ್ ಅವರು ನಿರ್ಮಿಸುತ್ತಿರುವ “ಗ್ರಾಮ’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಾಸಾಂತ್ಯಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕರ್ನಾಟಕ- ಆಂದ್ರ ಪ್ರದೇಶ ಗಡಿಯ, ಚಿಂತಾಮಣಿ ಬಳಿಯ ಹಳ್ಳಿಯೊಂದರಲ್ಲೇ ಚಿತ್ರಕ್ಕೆ 23 ದಿನಗಳ ಚಿತ್ರೀಕರಣ ನಡೆದಿದೆ.
ಮಾತಿನ ಭಾಗದ ಚಿತ್ರೀಕರಣದೊಂದಿಗೆ, ಒಂದು ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ಈ ಹಂತದಲ್ಲಿ ನಡೆದಿದೆ. ಲಿಖಿತ್ ಸೂರ್ಯ, ಲಹರಿ, ಸತ್ಯಪ್ರಕಾಶ್, ಸುಧಾರಾಣಿ, ಶಿಪ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಹರಿ ಕಿರಣ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ತೆಲುಗಿನಲ್ಲಿ ಒಂದು ಚಿತ್ರ ನಿರ್ದೇಶಿಸಿ, ಹತ್ತಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಒದಗಿಸಿರುವ ಹರಿ ಕಿರಣ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಕೃಷ್ಣಪ್ರಸಾದ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿಕಲ್ಯಾಣ್ ಸಂಗೀತ ನೀಡಿದ್ದಾರೆ.
ಬಾಬಿ ಸಂಕಲನ, ವಿಜಯ್ ಕೃಷ್ಣ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು, ಶಿವು, ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ವಿಜಯ್ ಭರಮಸಾಗರ ಗೀತರಚನೆ ಮಾಡಿ, ಸಂಭಾಷಣೆಯನ್ನು ಬರೆದಿದ್ದಾರೆ. ಲಿಖಿತ್ ಸೂರ್ಯ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಲಹರಿ. ಶಿಪ್ರ, ಸತ್ಯಪ್ರಕಾಶ್, ಸುಧಾರಾಣಿ, ಸುಮನ್, ಗಾಂಧಿ, ಸಾಧುಕೋಕಿಲ, ಗೋಟುರಿ, ಶ್ರೇಯಸ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.