ಶೀಘ್ರದಲ್ಲಿ “ನೋಟಗಾರ’ನ ಆಟ
Team Udayavani, May 16, 2019, 3:00 AM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ನೋಟಗಾರ’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಸದ್ಯ ಚಿತ್ರದ ಹಾಡುಗಳ ಚಿತ್ರೀಕರಣ ಬಾಕಿಯಿದ್ದು, ಇದರ ನಡುವೆಯೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಡಬ್ಬಿಂಗ್ ಕೆಲಸದಲ್ಲಿ ನಿರತವಾಗಿದೆ.
“ಬೆಳ್ಳುಡಿ ಸಿನಿಮಾಸ್’ ಬ್ಯಾನರ್‌ನಲ್ಲಿ ಪರಮೇಶಿ ಎ. ಹೆಚ್ ಹಾಗೂ ಹರ್ಷ ಬೆಳ್ಳುಡಿ ಜಂಟಿಯಾಗಿ ನಿರ್ಮಿಸುತ್ತಿರುವ “ನೋಟಗಾರ’ ಚಿತ್ರದ ದೃಶ್ಯಗಳನ್ನು ಬೆಂಗಳೂರು, ತೀರ್ಥಹಳ್ಳಿ, ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಚಿತ್ರೀಕರಿಸಲಾಗಿದೆ. ಮಂಜು ಹೆದ್ದೂರ್ ಕಥೆ, ಚಿತ್ರಕಥೆ, ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಸಿದ್ದು ಮೂಲಿಮನಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ.
ಕನ್ನಡ, ತುಳು, ಮಲೆಯಾಳಂ ಚಿತ್ರಗಳಲ್ಲಿ ನಟಿಸಿರುವ ಅಶ್ವಿನಿ ಚಂದ್ರಶೇಖರ್ ಈ ಚಿತ್ರದ ನಾಯಕಿಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಮೋಹನ್ ಜುನೇಜ, ಪ್ರಕಾಶ್, ನಾಗೇಶ್ ಮಯ್ಯ, ಪೃಥ್ವಿರಾಜ್, ವಿನಯ್ ಕಣಿವೆ ಮುಂತಾದವರು “ನೋಟಗಾರ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇನ್ನು “ನೋಟಗಾರ’ ಚಿತ್ರದ ಹಾಡುಗಳಿಗೆ ಅರ್ಜುನ್ ರಾಮು ಸಂಗೀತ ಸಂಯೋಜನೆಯಿದ್ದು, ಡಾ. ವಿ. ನಾಗೇಂದ್ರ ಪ್ರಸಾದ್, ಭರ್ಜರಿ ಚೇತನ್ ಕುಮಾರ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರಕ್ಕೆ ಎಂ.ಬಿ.ಅಳ್ಳಿಕಟ್ಟಿ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನ ಕಾರ್ಯವಿದೆ. ಇದೇ ತಿಂಗಳಾಂತ್ಯಕ್ಕೆ ಚಿತ್ರದ ಹಾಡುಗಳ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಂಡಿರುವ ಚಿತ್ರತಂಡ, ಇದೇ ಅಕ್ಟೋಬರ್ ವೇಳೆಗೆ “ನೋಟಗಾರ’ನನ್ನು ನೋಡುಗರ ಮುಂದೆ ತರುವ ಯೋಚನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.