ಓಂಪ್ರಕಾಶ್ ರಾವ್ ಚಿತ್ರದ ಹೆಸರು ಬದಲಾಗಿದೆ
Team Udayavani, Aug 3, 2017, 10:46 AM IST
ಈ ಹಿಂದೆ ಓಂಪ್ರಕಾಶ್ ರಾವ್ ಅವರು “ಮದರಂಗಿ’ ಕೃಷ್ಣ ಅಭಿನಯದಲ್ಲಿ “ಹುಚ್ಚ 2′ ಸಿನಿಮಾ ನಿರ್ದೇಶಿಸುವುದಾಗಿ ಘೋಷಿಸಿದ್ದು ನೆನಪಿರಬಹುದು. ಆದರೆ, ಈಗ ಆ ಚಿತ್ರದ ಶೀರ್ಷಿಕೆ ಬದಲಾಗಿದೆ. “ಹುಚ್ಚ’ ಶೀರ್ಷಿಕೆ ಕೆಳಗೆ “ಹಂಡ್ರೆಡ್ ಪರ್ಸೆಂಟ್’ ಎಂಬ ಅಡಿಬರಹವಿದೆ. ಅಲ್ಲಿಗೆ ಅದನ್ನು “ಹುಚ್ಚ ಹಂಡ್ರೆಡ್ ಪರ್ಸೆಂಟ್’ ಎಂದು ಓದಿಕೊಳ್ಳಲ್ಲಡ್ಡಿಯಿಲ್ಲ.
ಕೆಲವು ವರ್ಷಗಳ ಹಿಂದೆಯೇ ಶುರುವಾದ ಚಿತ್ರ, ಈಗ ಬಿಡುಗಡೆಯ ತಯಾರಿಯಲ್ಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್‌ನಲ್ಲಿ ತೆರೆ ಕಾಣಲಿದೆ. ಇದು ತಮಿಳಿನ “ರಾಮ್’ ಚಿತ್ರದ ರಿಮೇಕ್. 2005 ರಲ್ಲಿ ತೆರೆಕಂಡಿದ್ದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅಮೀರ್ ನಿರ್ದೇಶನ ಮಾಡಿದ್ದರು.
ಜೀವ, ಶರಣ್ಯ, ರೆಹಮಾನ್ ಇತರರು ಅಭಿನಯಿಸಿದ್ದರು. ಕನ್ನಡದಲ್ಲಿ “ಹುಚ್ಚ ಹಂಡ್ರೆಡ್ ಪರ್ಸೆಂಟ್’ ಸಿನಿಮಾ ನಿರ್ದೇಶಿಸಿರುವ ಓಂ ಪ್ರಕಾಶ್‌ರಾವ್, ತಮ್ಮ ಚಿತ್ರಕ್ಕೆ ಮದರಂಗಿ ಕೃಷ್ಣ ಅವರನ್ನು ನಾಯಕರನ್ನಾಗಿ ಮಾಡಿದರೆ, ಶ್ರಾವ್ಯಾ ಅವರನ್ನು ನಾಯಕಿಯನ್ನಾಗಿಸಿದ್ದಾರೆ.
ಮಿಕ್ಕಂತೆ ಚಿತ್ರದಲ್ಲಿ ಸಾಯಿಕುಮಾರ್,ಅವಿನಾಶ್, ಮಾಳವಿಕಾ, ಶ್ರೀನಿವಾಸಮೂರ್ತಿ ಸೇರಿದಂತೆ ಹಲವು ಅಭಿನಯಿಸಿದ್ದಾರೆ. ಎ.ಎಂ.ಉಮೇಶ್‌ರೆಡ್ಡಿ ಅವರು ಚಿತ್ರವನ್ನು ನಿರ್ಮಿಸಿದರೆ, ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಂ.ಎಸ್.ರಮೇಶ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.