ಅಮ್ಮ ಮಗನ ಬಾಂಧವ್ಯದ ಹಾಡು ಬಂತು: Watch
Team Udayavani, Oct 6, 2018, 2:24 PM IST
ಶಶಾಂಕ್ ನಿರ್ದೇಶನದ ಅಜೇಯ್ ರಾವ್ ಅಭಿನಯದ “ತಾಯಿಗೆ ತಕ್ಕ ಮಗ’ ಚಿತ್ರದ ಫಸ್ಟ್ ಲುಕ್, ಟ್ರೈಲರ್ ಮತ್ತು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೌಂಡು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ “ಅಮ್ಮಾ ನಿನ್ನ ಮಗನೆಂಬ ಹೆಮ್ಮೆ’ ಎಂಬ ಅಮ್ಮ ಮಗನ ಬಾಂಧವ್ಯವನ್ನು ಸಾರುವ, ಮಗನೊಬ್ಬ ಅಮ್ಮನನ್ನು ಆರಾಧಿಸುವಂಥಾ ಹಾಡನ್ನು ಬಿಡುಗಡೆ ಮಾಡಿದೆ.
ಈ ಹಾಡನ್ನ ಚಿತ್ರದ ನಿರ್ದೇಶಕ ಶಶಾಂಕ್ ಅವರೇ ಸ್ವತಃ ಬರೆದಿದ್ದು, ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನದಲ್ಲಿ ನಾರಾಯಣ್ ಶರ್ಮಾ ಧ್ವನಿಯಲ್ಲಿ ಮೂಡಿಬಂದಿರೋ ಹಾಡು ಹೃದಯ ಮುಟ್ಟುವಂತಿದೆ. ಇತ್ತೀಚೆಗಷ್ಟೇ ಈ ಚಿತ್ರದ “ಹೃದಯಕೆ ಹೆದರಿಕೆ ನೀ ಹೀಗೆ ನೋಡಿದರೆ’ ಎಂಬ ಹಾಡು ಬಿಡುಗಡೆಯಾಗಿ ಯುವ ಮನಸುಗಳನ್ನು ಹುಚ್ಚೆಬ್ಬಿಸಿತ್ತು. ಇದೀಗ ಈ ಅಮ್ಮನ ಹಾಡು ರಿಲೀಸಾಗಿದೆ. ಇದು “ತಾಯಿಗೆ ತಕ್ಕ ಮಗ’ ಚಿತ್ರದ ಮೂರನೇ ಹಾಡು.
ಚಿತ್ರ ಶಶಾಂಕ್ ನಿರ್ಮಾಣದಲ್ಲಿ ಮೂಡಿಬರುತ್ತಿದ್ದು, ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಈಗಾಗಲೇ ಸಂಪೂರ್ಣ ಚಿತ್ರೀಕರಣ ಮುಗಿಸಿರುವ “ತಾಯಿಗೆ ತಕ್ಕ ಮಗ’ ಅಕ್ಟೋಬರ್ನಲ್ಲಿ ತೆರೆಗೆ ಬರಲಿದೆ. ಚಿತ್ರವು ಎರಡು ಟ್ರ್ಯಾಕ್ನಲ್ಲಿ ಸಾಗುವ ಕಥೆಯಾಗಿದ್ದು, ತಾಯಿ-ಮಗನ ಎಪಿಸೋಡ್ ಒಂದು ಕಡೆಯಾದರೆ, ಹೀರೋ ಲವ್ ಎಪಿಸೋಡ್ ಇನ್ನೊಂದು ಕಡೆ ಸಾಗುತ್ತದೆಯಂತೆ.
“ಚಿತ್ರದಲ್ಲಿ ತಾಯಿ-ಮಗನ ಒಂದು ಕಥೆಯಾದರೆ, ಅವರನ್ನು ವಿರೋಧಿಸುವ ತಂದೆ-ಮಗನ ಮತ್ತೊಂದು ಕಥೆ ಇದೆ. ಇವರ ನಡುವೆ ಪೇಚಿಗೆ ಸಿಲುಕುವ ಅಪ್ಪ-ಮಗಳು ಇನ್ನೊಂದು ಕಡೆ’ಯಲ್ಲಿ ಕಥೆ ಸಾಗುತ್ತದೆ. ಚಿತ್ರದಲ್ಲಿ ಅಜೇಯ್ ರಾವ್ ಎದುರಿಗೆ ನಾಯಕಿಯಾಗಿ ಆಶಿಕಾ ನಟಿಸಿದ್ದು, ಸುಮಲತಾ ಅಂಬರೀಶ್ ತಾಯಿಯಾಗಿ ನಟಿಸಿದ್ದಾರೆ. ಅಲ್ಲದೇ ಚಿತ್ರಕ್ಕೆ ಕಿಚ್ಚ ಸುದೀಪ ಧ್ವನಿ ನೀಡಿದ್ದು, ಈ ಮೂಲಕ ಅಜೇಯ್ ರಾವ್ ಸಿನಿಮಾಕ್ಕೆ ಸುದೀಪ್ ಸಾಥ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.