Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’
Team Udayavani, May 9, 2024, 5:44 PM IST
“ದ ಸೂಟ್’- ಹೀಗೊಂದು ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಚಿತ್ರ ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ. ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್.ಭಗತ್ ರಾಜ್ ನಿರ್ದೇಶಿಸಿದ್ದಾರೆ.
ನಟ ಧ್ರುವ ಸರ್ಜಾ ಅವರು ಈ ಚಿತ್ರದ ಟ್ರೇಲರ್ ನೋಡಿ ಶುಭ ಕೋರಿದ್ದು, ಚಿತ್ರದ ಸಂಭ್ರಮ ಹೆಚ್ಚಿಸಿದೆ.
ನಿರ್ದೇಶಕ ಎಸ್.ಭಗತ್ ರಾಜ್ ಮಾತನಾಡಿ, “ನಾನು ಹಿರಿಯ ನಿರ್ದೇಶಕ ಕಾಶೀನಾಥ್ ಅವರ ಬಳಿ ನಿರ್ದೇಶನ ಕಲಿತಿದ್ದೇನೆ. ಅವರು ನನ್ನ ಗುರುಗಳು. ದ ಸೂಟ್ ನನ್ನ ಮೊದಲ ನಿರ್ದೇಶನದ ಚಿತ್ರ. ಸೂಟ್ ಬದುಕು ಹಾಗೂ ಭಾವನೆಗಳ ಸಂಗಮ. ನಮ್ಮ ಚಿತ್ರಕ್ಕೆ ಸೂಟೇ ಕಥಾನಾಯಕ. ಈ ವಿಷಯ ಕೇಳಿ ಆಶ್ಚರ್ಯಪಟ್ಟಿದ್ದು ಉಂಟು. ಆದರೆ ನಮ್ಮ ಚಿತ್ರದಲ್ಲಿ ಸೂಟ್‌ನ ಪಾತ್ರವೇನು ಎಂಬುದು ಮೇ 17 ರಂದು ತಿಳಿಯಲಿದೆ. ಸೂಟ್ ಅನ್ನು ಬರೀ ಬಟ್ಟೆಯಂತೆ ತೋರಿಸಿಲ್ಲ. ಮನುಷ್ಯನ ಹೊರಗಿನ ಮನಸ್ಸನ್ನು ಸೂಟ್‌ನ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇನೆ. ಚಿತ್ರಕ್ಕೆ ಅತಿಥಿ ದೇವೋಭವ ಎಂಬ ಅಡಿಬರಹವಿದೆ. ಸೂಟ್ ಚಿತ್ರದ ಪ್ರಚಾರವನ್ನು ವಿನೂತನವಾಗಿ ಮಾಡಿದ್ದೇವೆ. ಸೂಟ್‌ನ ಬಗ್ಗೆ ಅನೇಕ ಗಣ್ಯರು ತಮ್ನಗನಿಸಿದನ್ನು ಕವನಗಳ ಮೂಲಕ ಬರೆದಿದ್ದಾರೆ. ಅದನ್ನು ಸಂಕಲನವಾಗಿ ಹೊರ ತಂದಿದ್ದೇವೆ. ನಮ್ಮ ಚಿತ್ರದಲ್ಲಿ ಮೂರು ಕಿರಣಗಳಿದೆ. ಸಂಗೀತ ನಿರ್ದೇಶಕ ಕಿರಣ್ ಶಂಕರ್, ಛಾಯಾಗ್ರಾಹಕ ಕಿರಣ್ ಹಂಪಾಪುರ ಹಾಗೂ ರೇಖಾಚಿತ್ರಗಳ ಮೂಲಕ ನಮ್ಮ ಚಿತ್ರಕ್ಕೆ ಜೀವ ತುಂಬಿರುವ ಕಿರಣ್ ಅವರು. ಈ ಚಿತ್ರದಲ್ಲಿ ಕಮಲ್, ಉಮೇಶ್ ಬಣಕಾರ್, ವಿ.ನಾಗೇಂದ್ರ ಪ್ರಸಾದ್, ಜೋಸೆಫ್, ಸುಜಯ್, ಭೀಷ್ಮ ರಾಮಯ್ಯ, ಗಡ್ಡ ವಿಜಿ, ಪ್ರಣಯ ಮೂರ್ತಿ ಸೇರಿದಂತೆ ಐವತ್ತಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ’ ಎಂದರು.
ನಟ ಸಲ್ಮಾನ್ ಖಾನ್ ಅವರಿಗೆ ಮ್ಯಾನೇಜರ್ ಆಗಿದ್ದ ನಟ ಕಮಲ್ ಅವರು ದ ಸೂಟ್ ಚಿತ್ರದ ತಮ್ಮ ಜರ್ನಿಯ ಬಗ್ಗೆ ವಿವರಣೆ ನೀಡಿದರು. ಕಲಾವಿದರಾದ ಮಂಜು ಪಾಟೀಲ್. ಸುಜಯ್, ಭೀಷ್ಮ ರಾಮಯ್ಯ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.