ಹಠವಾದಿಗಳು ಜೊತೆಯಾದರು
Team Udayavani, Jul 16, 2017, 10:30 AM IST
ಒಂದಷ್ಟು ದಿನ ಬಣ್ಣದ ಲೋಕದಿಂದ ದೂರವಿದ್ದು, ತಮ್ಮದೇ ಕಾರ್ಯಗಳಲ್ಲಿ ಬಿಝಿಯಾಗಿದ್ದ ರಾಧಿಕಾ ಈಗ ಮತ್ತೆ ಬಣ್ಣದ ಲೋಕದಲ್ಲಿ ಬಿಝಿಯಾಗುತ್ತಿದ್ದಾರೆ. ಈಗಾಗಲೇ “ಕಾಂಟ್ರ್ಯಾಕ್ಟ್’ ಚಿತ್ರೀಕರಣ ಮುಗಿಸಿರುವ ರಾಧಿಕಾ, ಈಗ ಮತ್ತೂಂದು ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ.
ಹೌದು, ರವಿಚಂದ್ರನ್ ನಿರ್ದೇಶನದ “ರಾಜೇಂದ್ರ ಪೊನ್ನಪ್ಪ’ ಚಿತ್ರದಲ್ಲಿ ರಾಧಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆಂಬ ವಿಚಾರ ನಿಮಗೆ ಗೊತ್ತೇ ಇದೆ. ಆದರೆ, ಚಿತ್ರೀಕರಣ ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆ ಅನೇಕರಲ್ಲಿತ್ತು. ಈಗಾಗಲೇ “ರಾಜೇಂದ್ರ ಪೊನ್ನಪ್ಪ’ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಸುಂದರ ತಾಣದಲ್ಲಿ ಚಿತ್ರೀಕರಣ ನಡೆಯುತ್ತಿದೆ. ರಾಧಿಕಾ ಕೂಡಾ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
ಕಳೆದ ಶಿವರಾತ್ರಿಯಂದು “ರಾಜೇಂದ್ರ ಪೊನ್ನಪ್ಪ’ ಜೊತೆಗೆ ರವಿಚಂದ್ರನ್ ಅವರ ಇನ್ನೂ ಎರಡು ಚಿತ್ರಗಳು ಸೆಟ್ಟೇರಿದ್ದವು. ಈಗಾಗಲೇ “ಬಕಾಸುರ’ ಹಾಗೂ “ದಶರಥ’ದ ಬಹುತೇಕ ಚಿತ್ರೀಕರಣ ನಡೆದಿದೆ. ಈಗ ರವಿಚಂದ್ರನ್ ನಿರ್ದೇಶನದ “ರಾಜೇಂದ್ರ ಪೊನ್ನಪ್ಪ’ ಆರಂಭವಾಗಿದೆ. ಅಂದಹಾಗೆ, “ದೃಶ್ಯ’ ಸಿನಿಮಾದಲ್ಲಿ ರವಿಚಂದ್ರನ್ ಪಾತ್ರದ ಹೆಸರು “ರಾಜೇಂದ್ರ ಪೊನ್ನಪ್ಪ’ ಎಂದಿತ್ತು.
ಈಗ ಅದೇ ಚಿತ್ರವೊಂದರ ಟೈಟಲ್ ಆಗಿದೆ ಹಾಗೂ ರಾಧಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ರಾಧಿಕಾ ದೊಡ್ಡ ಗ್ಯಾಪ್‌ನ ನಂತರ ರವಿಚಂದ್ರನ್ ಜೊತೆ ಮತ್ತೆ ನಟಿಸುತ್ತಿದ್ದಾರೆ. ಈ ಹಿಂದೆ “ಹಠವಾದಿ’ ಮತ್ತು “ಒಡಹುಟ್ಟಿದವಳು’ ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದರು. ಸದ್ಯ ರಾಧಿಕಾ ನಟನೆಯ ಜೊತೆಗೆ ರಿಯಾಲಿಟಿ ಶೋವೊಂದರ ತೀರ್ಪುಗಾರರಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.