ಈ ಬಾರಿ ಶಿವರಾಜಕುಮಾರ್ ಹುಟ್ಟುಹಬ್ಬ ಆಚರಣೆ ಇಲ್ಲ
Team Udayavani, Jul 11, 2017, 10:31 AM IST
ಜುಲೈ 12 ಬಂದರೆ ಶಿವರಾಜಕುಮಾರ್ ಅವರ ಅಭಿಮಾನಿಗಳಿಗೆ ಎಲ್ಲಿಲ್ಲದ ಖುಷಿ. ಯಾಕೆಂದರೆ, ಅಂದು ಅವರ ಹುಟ್ಟುಹಬ್ಬ. ನಾಳೆ (ಜು.12) ಅವರ ಬರ್ತ್ಡೇ. ಆದರೆ, ಈ ಬಾರಿ ಶಿವರಾಜಕುಮಾರ್ ಅವರು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಅವರ ತಾಯಿಯವರ ನಿಧನದ ಹಿನ್ನೆಲೆಯಲ್ಲಿ ಈ ಸಲದ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ.
ಆದರೆ, ಶಿವರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ, “ಟಗರು’ ಚಿತ್ರತಂಡ ಪೊಲೀಸ್ ಕಲ್ಯಾಣ ನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಅರ್ಥಪೂರ್ಣ ಕಾರ್ಯ ಮಾಡಿದೆ. ಸೋಮವಾರ, ಶಿವರಾಜಕುಮಾರ್ ಅವರು ಕೆಎಸ್ಆರ್ಪಿಯ ಎಡಿಜಿಪಿ ಭಾಸ್ಕರ್ರಾವ್ ಅವರನ್ನು ಭೇಟಿ ಮಾಡಿ, ಪೊಲೀಸ್ ಕಲ್ಯಾಣ ನಿಧಿಗೆ ಒಂದು ಲಕ್ಷ ರೂಪಾಯಿ ಚೆಕ್ ವಿತರಿಸಿದ್ದಾರೆ.
ಈ ಸಂದರ್ಭದಲ್ಲಿ ನಿರ್ದೇಶಕ ಸೂರಿ ಹಾಗೂ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಹಾಜರಿದ್ದರು. ಅದೇನೆ ಇರಲಿ, ಜು.12 ಬಂದರೆ ಸಾಕು, ಅಭಿಮಾನಿಗಳು ಹಿಂದಿನ ದಿನವೇ ಶಿವರಾಜಕುಮಾರ್ ಮನೆಯ ಮುಂದೆ ಜಮಾಯಿಸಿ, ತಮ್ಮ ನೆಚ್ಚಿನ ನಾಯಕನಿಗೆ ಹೂವಿನ ಹಾರ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಈ ಸಲದ ಹುಟ್ಟುಹಬ್ಬವನ್ನು ಆಚರಿಸದಿರಲು ಶಿವರಾಜಕುಮಾರ್ ನಿರ್ಧರಿಸಿರುವುದರಿಂದ ಅಭಿಮಾನಿಗಳೂ ಸಹ ಅವರ ನಿರ್ಧಾರವನ್ನು ಸ್ವಾಗತಿಸುತ್ತಾರೆ ಎಂಬ ವಿಶ್ವಾಸ ಅಭಿಮಾನಿಗಳ ಸಂಘದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.