Sandalwood Legend; ಇಂದು ವಿಷ್ಣುವರ್ಧನ್‌ ಪುಣ್ಯಸ್ಮರಣೆ: ಸಾಹಸ ಸಿಂಹ ಅಗಲಿ 14 ವರ್ಷ


Team Udayavani, Dec 30, 2023, 10:29 AM IST

vishnuvardhan

ಅಭಿಮಾನಿಗಳ ಪಾಲಿನ ಪ್ರೀತಿಯ ಸಾಹಸ ಸಿಂಹ, ವಿಷ್ಣುದಾದ ಅಗಲಿ ಇಂದಿಗೆ (ಡಿ.30) ಬರೋಬ್ಬರಿ 14 ವರ್ಷ. ಇಷ್ಟು ವರ್ಷಗಳಲ್ಲಿ ಅಭಿಮಾನಿಗಳು ಅವರನ್ನು ನೆನೆಯದ ದಿನವಿಲ್ಲ. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ  ಆಚರಿಸುತ್ತಲೇ ಬಂದಿದ್ದಾರೆ. ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ವಿಷ್ಣು ಹೆಸರನ್ನು ಚಿರಸ್ಥಾಯಿಯನ್ನಾಗಿಸಿದ್ದಾರೆ.

ಆದರೆ, ಅಭಿಮಾನಿಗಳಿಗೆ ಒಂದು ಬೇಸರ ಮಾತ್ರ ಇದ್ದೇ ಇದೆ. ಅದು ಸಮಾಧಿ ಕುರಿತಾಗಿದ್ದು. ವಿಷ್ಣುವರ್ಧನ್‌ ಅವರ ಅಂತ್ಯಸಂಸ್ಕಾರವಾದ ಜಾಗದಲ್ಲೇ ಅವರ ಸಮಾಧಿ ನಿರ್ಮಾಣವಾಗಬೇಕೆಂಬುದು. ಆ ನಿಟ್ಟಿನಲ್ಲಿ ಹೋರಾಟ ನಡೆಯುತ್ತಲೇ ಇದೆ. ಇಂದು ಕುಟುಂಬ ವರ್ಗ ಮೈಸೂರಿನಲ್ಲಿರುವ ವಿಷ್ಣು ಸ್ಮಾರಕದಲ್ಲಿ ಪೂಜೆ ಸಲ್ಲಿಸಿದರೆ, ಅಭಿಮಾನಿಗಳು ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋದಲ್ಲಿರುವ ವಿಷ್ಣು ಸಮಾದಿಗೆ ಪೂಜೆ ಸಲ್ಲಿಸಲಿದ್ದಾರೆ.

ಇನ್ನು, ಪ್ರೀತಿ, ಒಂಚೂರು ಸಿಟ್ಟು, ಅಪಾರ ವಿನಯ, ಕಿಂಚಿತ್‌ ಸಂಕೋಚ, ಮುಚ್ಚುಮರೆಯಿಲ್ಲದ ಮಾತು, ಮನಗೆಲ್ಲುವ ಮಂದಹಾಸ- ಇವೆಲ್ಲದರ ಮೊತ್ತವಾಗಿದ್ದವರು ವಿಷ್ಣುವರ್ಧನ್‌. ಸಂಪತ್‌ ಕುಮಾರ್‌ ಆಗಿ ಚಿತ್ರರಂಗಕ್ಕೆ ಬಂದು “ವಂಶವೃಕ್ಷ’ದಲ್ಲಿ ಪುಟ್ಟ ಪಾತ್ರ ಮಾಡಿ, ರಾಮಾಚಾರಿಯಾಗಿ ಎದ್ದು ನಿಂತ ವಿಷ್ಣುವರ್ಧನ್‌ ಮತ್ತೆ ತಿರುಗಿ ನೋಡಲಿಲ್ಲ. ಇನ್ನೂರು ಚಿತ್ರಗಳ ಗಡಿ ದಾಟಿದ ವಿಷ್ಣುವರ್ಧನ್‌ ಚಾರಿತ್ರಿಕ, ಪೌರಾಣಿಕ, ಸಾಮಾಜಿಕ ಪಾತ್ರಗಳಲ್ಲಿ ನಟಿಸಿ ಗೆದ್ದವರು.

ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ’, ಹೆಣ್ಮಕ್ಕಳ ಪಾಲಿಗೆ “ಬಂಧನ’ದ ಭಗ್ನಪ್ರೇಮಿ, “ಬಿಳಿಗಿರಿಯ ಬನ’ದ ಬಂಡಾಯಗಾರ, “ಹೊಂಬಿಸಿಲು’ ಚಿತ್ರದ ನಿಷ್ಪಾಪಿ, “ಸಿಡಿದೆದ್ದ ಸಹೋದರ’, “ಬಂಗಾರದ ಜಿಂಕೆ’ಯ ಬೆನ್ನಟ್ಟಿದ ಪ್ರೇಮಿ, “ಇಂದಿನ ರಾಮಾಯಣ’ದ ನ್ಯಾಯವಂತ, ದೆವ್ವಕ್ಕೆ ಸಡ್ಡು ಹೊಡೆದ “ಆಪ್ತಮಿತ್ರ’- ಹೀಗೆ ವಿಷ್ಣು ಎಲ್ಲ ಪಾತ್ರಗಳಲ್ಲೂ ನಟಿಸಿ ಗೆದ್ದವರು. ಅಪಾರ ಹಾಸ್ಯಪ್ರಜ್ಞೆ, ತುಂಬು ಮಾನವೀಯತೆ, ಸರಳ ಸಜ್ಜನಿಕೆಯ ವಿಷ್ಣು ಅವರಿಲ್ಲದೇ 14 ವರ್ಷ ಕಳೆದಿದೆ. ಆದರೆ, ಅಭಿಮಾನಿಗಳ ಹೃದಯದಲ್ಲಿ ಯಜಮಾನರು ಅಜರಾಮರ.

ಬಲಗೈಲಿ ಕೊಟ್ಟದ್ದು ಎಡಗೈಗೆ ತಿಳಿಯಬಾರದು ಎಂಬಂತಿದ್ದವರು ವಿಷ್ಣು … ಯಾವತ್ತೂ ಅವರು ತಾವು ಮಾಡಿದ ಸಹಾಯದ ಕುರಿತು ಹೇಳಿಕೊಂಡವರೇ ಅಲ್ಲ. ವಿವಾದಗಳು ಅವರನ್ನು ಬೆನ್ನಟ್ಟಿ ಬಂದಾಗಲೂ ವಿಷ್ಣು ಮೌನಿಯಾಗಿದ್ದರು.

ಅಂಬರೀಷ್‌ ಮತ್ತು ಅವರ ಸ್ನೇಹ ಚಿತ್ರರಂಗಕ್ಕೊಂದು ಮಾದರಿ ಎಂಬಂತಿತ್ತು. ವಿಷ್ಣುವರ್ಧನ್‌ ನಟಿಸಿದ ಚಿತ್ರಗಳ ಪೈಕಿ ನೆನಪಲ್ಲಿ ಉಳಿಯುವಂಥ ಚಿತ್ರಗಳ ಪಟ್ಟಿ ಸಾಕಷ್ಟು ದೊಡ್ಡದಿದೆ.

“ಮುತ್ತಿನಹಾರ’ ಕನ್ನಡ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು. “ಬಂಧನ’, “ಆಪ್ತಮಿತ್ರ’, “ಆಪ್ತರಕ್ಷಕ’ಗಳ ನಡುವೆಯೇ ಅವರು “ಗಂಧರ್ವಗಿರಿ’ಯಂಥ ಸಿನಿಮಾ ಮಾಡಿದವರು. “ಹರಕೆಯ ಕುರಿ’ಯಂಥ ಅರ್ಥಪೂರ್ಣ ಚಿತ್ರದಲ್ಲಿ ನಟಿಸಿದವರು. ಕನ್ನಡದಲ್ಲಷ್ಟೇ ಅಲ್ಲದೇ, ಹಿಂದಿ, ತೆಲುಗು, ತಮಿಳು ಚಿತ್ರಗಳಲ್ಲೂ ನಟಿಸಿದ್ದ ವಿಷ್ಣು, ಯಾವತ್ತೂ ಚಿತ್ರರಂಗದ ನಾಯಕನೆಂದು ತಮ್ಮನ್ನು ಕರೆದುಕೊಂಡವರೇ ಅಲ್ಲ. ನಾನು ತುಂಬ ಚಿಕ್ಕವನು, ನಾನು ಹಿಂದೆಯೇ ಇರಬೇಕು ಅನ್ನುತ್ತಿದ್ದವರು ಅವರು. ಎಲ್ಲರನ್ನೂ ಮುಂದೆ ಬಿಟ್ಟುಕೊಂಡು, “ಸ್ನೇಹಲೋಕ’ ಎಂಬ ತಂಡ ಕಟ್ಟಿ, ಸಮಾನಮನಸ್ಕರನ್ನು ಒಂದಾಗಿಸಿದ ಖ್ಯಾತಿಯೂ ಅವರದ್ದೇ.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.