ಶಿವಣ್ಣ “ಆರ್‌ಡಿಎಕ್ಸ್’ಗೆ ಇಂದು ಮುಹೂರ್ತ
ತಮಿಳು ನಿರ್ಮಾಪಕರ ಕನ್ನಡ ಸಿನಿಮಾ
Team Udayavani, Feb 19, 2020, 7:05 AM IST
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯದ ಮುಂಬರುವ ಚಿತ್ರ “ಆರ್‌ಡಿಎಕ್ಸ್’ ಸೆಟ್ಟೇರಲು ಸಿದ್ಧವಾಗಿದೆ. ಈಗಾಗಲೇ “ಆರ್‌ಡಿಎಕ್ಸ್’ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಬಹುತೇಕ ಪೂರ್ಣಗೊಂಡಿದ್ದು, ಇಂದು (ಫೆ. 19) ಮುಹೂರ್ತ ನೆರವೇರುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.
ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿರುವ ಮುಹೂರ್ತ ಸಮಾರಂಭದಲ್ಲಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಹಾಗೂ ನಟ ಪುನೀತ್‌ರಾಜಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರೀಕರಣಕ್ಕೆ ಚಾಲನೆ ನೀಡಲಿದ್ದಾರೆ. ತಮಿಳಿನಲ್ಲಿ “ವಿವೇಗಂ’, “ವಿಶ್ವಾಸಂ’ ಮೊದಲಾದ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ “ಸತ್ಯ ಜ್ಯೋತಿ ಫಿಲಂಸ್’ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ತಮಿಳು ನಿರ್ದೇಶಕ ರವಿ ಅರಸು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಅಂದಹಾಗೆ, ಚಿತ್ರರಂಗದ ಮೂಲಗಳ ಚಿತ್ರಕ್ಕೆ “ಆರ್‌ಡಿಎಕ್ಸ್’ ಎಂಬ ಶೀರ್ಷಿಕೆ ಇಡಲಾಗಿದೆ ಎನ್ನಲಾಗುತ್ತಿದ್ದು, ಚಿತ್ರದ ಟೈಟಲ್ ಅನ್ನು ಚಿತ್ರತಂಡ ಇದುವರೆಗೂ ಅಧಿಕೃತವಾಗಿ ಎಲ್ಲೂ ಬಹಿರಂಗಪಡಿಸಿಲ್ಲ. ಮುಹೂರ್ತದ ದಿನವೇ ಸಿನಿಮಾ ಹೆಸರು ಕೂಡ ಹೊರ ಬರಬಹುದು ಎನ್ನಲಾಗುತ್ತಿದ್ದು, ಚಿತ್ರಕ್ಕೆ “ಆರ್‌ಡಿಎಕ್ಸ್’ ಅನ್ನೋದೆ ಟೈಟಲ್ ಆಗಿ ಮುಂದುವರೆಯಲಿದೆಯಾ ಅಥವಾ ಬೇರೆ ಏನಾದರೂ ಹೊಸ ಟೈಟಲ್ ಇಡಲಾಗುತ್ತದೆಯಾ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
ಫೆ.23ಕ್ಕೆ ದ್ರೋಣ ಟ್ರೇಲರ್: ಹೊಸ ವರ್ಷದಲ್ಲಿ ಶಿವರಾಜಕುಮಾರ್ ಅವರ ಯಾವ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ “ದ್ರೋಣ’. ಹೌದು, ಶಿವರಾಜಕುಮಾರ್ ಅವರ “ದ್ರೋಣ’ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದ್ದು, ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಫೆ.23 ರಂದು ಬಿಡುಗಡೆ ಯಾಗುತ್ತಿದೆ. ಶಿಕ್ಷಣದ ಕುರಿತಾಗಿರುವ ಈ ಚಿತ್ರದಲ್ಲಿ ಶಿವಣ್ಣ ಶಾಲಾ ಶಿಕ್ಷಕರಾಗಿ ಕಾಣಿಸಿಕೊಂಡಿದ್ದಾರೆನ್ನಲಾಗಿದೆ. ಚಿತ್ರವನ್ನು ಪ್ರಮೋದ್ ಚಕ್ರವರ್ತಿ ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.