ಇಂದು ಯಾನ ಲಿರಿಕಲ್ ವಿಡಿಯೋ ರಿಲೀಸ್
Team Udayavani, Jan 1, 2019, 5:43 AM IST
ವಿಜಯಲಕ್ಷ್ಮೀ ಸಿಂಗ್ ಅವರ ನಿರ್ದೇಶನದಲ್ಲಿ “ಯಾನ’ ಎಂಬ ಚಿತ್ರ ಆರಂಭವಾದ ವಿಚಾರ ನಿಮಗೆ ಗೊತ್ತೇ ಇದೆ. ಚಿತ್ರದಲ್ಲಿ ಅವರು ಮೂವರು ಮಕ್ಕಳಾದ ವೈಭವಿ, ವೈನಿಧಿ ಹಾಗೂ ವೈಸಿರಿ ನಟಿಸುತ್ತಿದ್ದಾರೆ. ಆ ಚಿತ್ರ ಯಾವ ಹಂತದಲ್ಲಿದೆ ಎಂದು ನೀವು ಕೇಳಬಹುದು. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಹೊಸ ವರ್ಷದಲ್ಲಿ ಚಿತ್ರ ಬಿಡುಗಡೆಯ ತಯಾರಿಯಲ್ಲಿದೆ. ಮೊದಲ ಹಂತವಾಗಿ ಚಿತ್ರದ ಒಂದು ಲಿರಿಕಲ್ ವಿಡಿಯೋ ಇಂದು ಬಿಡುಗಡೆಯಾಗುತ್ತಿದೆ.
“ಯಾನ’ದಲ್ಲಿ ಟ್ರಾವೆಲ್ ಕೂಡಾ ಪ್ರಮುಖ ಅಂಶವಾಗಿದ್ದು, ಅದಕ್ಕೆ ಪೂರಕವಾಗಿ ಕವಿರಾಜ್ ಬರೆದಿರುವ “ಗರಿಬಿಚ್ಚಿ ಮರಿಹಕ್ಕಿ ಅದೆಲ್ಲೋ ಹಾರಿ ಹೊಂಟಿದೆ …’ ಎಂಬ ಹಾಡು ಇಂದು ಬಿಡುಗಡೆಯಾಗುತ್ತಿದೆ. ಫ್ಯೂಶನ್ ಶೈಲಿಯಲ್ಲಿರುವ ಈ ಹಾಡು ಇಂದು ಸಂಜೆ ಆರು ಗಂಟೆಗೆ ಲಹರಿ ಸಂಸ್ಥೆಯ ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಜೋಶ್ವಾ ಶ್ರೀಧರ್ ಸಂಗೀತ ನೀಡಿದ್ದಾರೆ. ಚಿತ್ರದ ಹಾಡುಗಳನ್ನು ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ಹೃದಯ ಶಿವ, ಶಶಾಂಕ್ ಹಾಗೂ ಚೇತನ್ ಕುಮಾರ್ ಬರೆದಿದ್ದಾರೆ.
ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ಆರು ಹಾಡುಗಳನ್ನು ಲಿರಿಕಲ್ ವಿಡಿಯೋ ಮೂಲಕ ಬಿಡುಗಡೆ ಮಾಡುವ ಯೋಚನೆ ನಿರ್ದೇಶಕಿ ವಿಜಯಲಕ್ಷ್ಮೀ ಸಿಂಗ್ ಅವರಿಗಿದೆ. ಆರು ಹಾಡುಗಳು ಒಂದಕ್ಕಿಂತ ಒಂದು ವಿಭಿನ್ನವಾಗಿದ್ದು, ಕೇಳುಗರಿಗೆ ಇಷ್ಟವಾಗಲಿದೆ ಎಂಬ ವಿಶ್ವಾಸ ಅವರದು. ಇನ್ನು, ಚಿತ್ರವನ್ನು ಫೆಬ್ರವರಿಯಲ್ಲಿ ಬಿಡುಗಡೆ ಮಾಡುವ ಯೋಚನೆ ಕೂಡಾ ಅವರಿಗಿದೆ. “ಯಾನ’ ಚಿತ್ರವನ್ನು ಕರ್ನಾಟಕದ ಹಲವು ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ.
ಚಿತ್ರದುರ್ಗ, ದಾವಣಗೆರೆ, ಮೂಡಿಗೆರೆ ಸೇರಿದಂತೆ ಅನೇಕ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ವೈಭವಿ, ವೈನಿಧಿ ಹಾಗೂ ವೈಸಿರಿ ನಾಯಕಿಯರಾಗಿ ನಟಿಸಿದ್ದು, ಇವರಿಗೆ ಸುಮುಖ, ಚಕ್ರವರ್ತಿ ಹಾಗೂ ಅಭಿಷೇಕ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ಅನಂತ್‌ನಾಗ್, ಸುಹಾಸಿನಿ, ಸಾಧುಕೋಕಿಲ, ವೀಣಾಸುಂದರ್, ಗಡ್ಡಪ್ಪ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಕರಮ್‌ಚಾವ್ಲಾ ಛಾಯಾಗ್ರಹಣವಿದೆ. ಚಿತ್ರವನ್ನು ಹರೀಶ್ ಶೇರಿಗಾರ್, ಶರ್ಮಿಳಾ ಶೇರಿಗಾರ್ ಹಾಗೂ ವೈಭವಿ, ವೈನಿಧಿ, ವೈಸಿರಿ ಸೇರಿ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Suri Loves Sandhya: ಟೀಸರ್‌ನಲ್ಲಿ ಸೂರಿ ಲವ್ ಸ್ಟೋರಿ
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.