ನಾಳೆ “ತಾರಕ್’ ಟ್ರೇಲರ್ ಬಿಡುಗಡೆ
Team Udayavani, Sep 20, 2017, 4:40 PM IST
ದರ್ಶನ್ ಅಭಿನಯದ ಹೊಸ ಚಿತ್ರ “ತಾರಕ್’ ಇದೇ ತಿಂಗಳ 29ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈಗಾಗಲೇ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಎಲ್ಲಾ ಕಡೆ ಮೆಚ್ಚುಗೆಗೆ ಪಾತ್ರವಾಗಿದೆ. ಈ ಮಧ್ಯೆ ಚಿತ್ರದ ಅಧಿಕೃತ ಟ್ರೇಲರ್ ನಾಳೆ ಗುರುವಾರ (ಸೆಪ್ಟೆಂಬರ್ 21) ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಲಿದೆ. ನಾಳೆ ಸಂಜೆ ಆರಕ್ಕೆ ಈ ಟ್ರೇಲರ್ ಬಿಡುಗಡೆಯಾಗಲಿದ್ದು, ಪ್ರೇಕ್ಷಕರು ಈ ಟ್ರೇಲರ್‌ಗೆ ಕಾಯುತ್ತಿದ್ದಾರೆ.
“ತಾರಕ್’ ಚಿತ್ರವನ್ನು “ಮಿಲನ’ ಪ್ರಕಾಶ್ ನಿರ್ದೇಶಿಸಿದ್ದಾರೆ. ಇನ್ನು “ಮೊನಾಲಿಸಾ’ ಮತ್ತು “ಮಿಲನ’ ಚಿತ್ರಗಳನ್ನು ನಿರ್ಮಿಸಿದ್ದ ದುಷ್ಯಂತ್, ಈ ಚಿತ್ರವನ್ನು ನಿರ್ಮಿಸಿದ್ದಾರೆ. 65 ದಿನಗಳ ಕಾಲ ಬೆಂಗಳೂರು, ಮಲೇಷ್ಯಾ, ಯೂರೋಪ್‌ನಲ್ಲಿ ಚಿತ್ರದ ಚಿತ್ರೀಕರಣವಾಗಿದೆ. ಆ ಪೈಕಿ 23 ದಿನಗಳ ಕಾಲ ಯುರೋಪ್‌ನಲ್ಲಿ ಶೂಟಿಂಗ್ ಮಾಡಿದೆವು. ಮೂರೂವರೆ ಸಾವಿರ ಕಿಲೋಮೀಟರ್‌ನ ಸುತ್ತಾಡಿ, ಹಾಡು, ಫೈಟು ಹಾಗೂ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.
ಈ ಚಿತ್ರದಲ್ಲಿ ದರ್ಶನ್‌ಗೆ ಸಾನ್ವಿ ಶ್ರೀವಾತ್ಸವ್ ಮತ್ತು ಶ್ರುತಿ ಹರಿಹರನ್ ನಾಯಕಿಯರಾಗಿ ನಟಿಸಿದ್ದು, ಮಿಕ್ಕಂತೆ ದೇವರಾಜ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ನೀಡಿದ್ದು, ಎ.ವಿ. ಕೃಷ್ಣಕುಮಾರ್ ಅವರ ಛಾಯಾಗ್ರಹಣವಿದೆ. ಚಿತ್ರಕ್ಕೆ ಜಯಂತ್ ಕಾಯ್ಕಿಣಿಯವರು ಹಾಡು ಬರೆದಿದ್ದು, ಇದೇ ಮೊದಲ ಬಾರಿಗೆ ದರ್ಶನ್ ಅವರ ಚಿತ್ರವೊಂದಕ್ಕೆ ಅವರು ಸಾಹಿತ್ಯ ರಚಿಸಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.