ತೋತಾಪುರಿ ಆಡಿಯೋ ಟೀಸರ್ ಬಂತು: ಕನ್ನಡವಿಲ್ಲ, ಉರ್ದು ಹಿಂದಿಯೇ ಎಲ್ಲಾ…
Team Udayavani, Jan 26, 2022, 11:51 AM IST
ಜಗ್ಗೇಶ್ ನಟನೆಯ “ತೋತಾಪುರಿ’ಚಿತ್ರದ ಆಡಿಯೋ ಟೀಸರ್ ಬಿಡುಗಡೆಯಾಗಿದೆ. ಹಾಡು ಕೇಳಿದವರಿಗೆ ಇದು ಕನ್ನಡ ಹಾಡಾ ಅಥವಾ ಉರ್ದು- ಹಿಂದಿ ಹಾಡಾ ಎಂಬ ಸಂದೇಹ ಬರುತ್ತಿದೆ. ಅದಕ್ಕೆ ಕಾರಣ ಚಿತ್ರತಂಡ ಬಿಟ್ಟಿರುವ ಆಡಿಯೋ ಟೀಸರ್‌ನಲ್ಲಿ ಬಳಕೆಯಾಗಿರುವ ಉರ್ದು- ಹಿಂದಿ ಮಿಶ್ರಿತ ಸಾಲುಗಳು.
“ಕಭಿ ಕಿಸಿಸೇ ಪ್ಯಾರ್ ಕಿಯಾ… ಕಿಯಾ. ಕಭಿ ಕಿಸಿಕೋ ದಿಲ್ ದಿಯಾ..ದಿಯಾ..’ ಎಂಬ ಸಾಲುಗಳ ಮೂಲಕ ಹಾಡು ಆರಂಭವಾಗುತ್ತದೆ. ಚಿತ್ರತಂಡ ಬಿಟ್ಟಿರುವ ಆಡಿಯೋ ಟೀಸರ್‌ನಲ್ಲಿ ಒಂದೇ ಒಂದು ಕನ್ನಡ ಪದವಿಲ್ಲ. ಇದು ಆಡಿಯೋ ಝಲಕ್. ಹಾಗಂತ ಇಡೀ ಹಾಡಿನಲ್ಲಿ ಇದೇ ತರಹದ ಪದಗಳಿವೆ ಎಂಬ ನಿರ್ಧಾರಕ್ಕೆ ಈಗಲೇ ಬರೋದು ಕೂಡ ಸರಿಯಲ್ಲ. ಅದರಾಚೆ ಜಗ್ಗೇಶ್ ನಟನೆಯ “ತೋತಾ ಪುರಿ’ ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ. ವಿಜಯ್ ಪ್ರಸಾದ್ ಈ ಚಿತ್ರದ ನಿರ್ದೇಶಕರು.
ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಇದು ಕೂಡಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಇದೇ ಮಾದಲ ಬಾರಿಗೆ ಕನ್ನಡ ಕಾಮಿಡಿ ಸಿನಿಮಾವೊಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗುವ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಕೆ.ಎ.ಸುರೇಶ್ ಈ ಬಾರಿಯೂ ತಮ್ಮ “ಮೋನಿಫಿಕ್ಸ್ ಸ್ಟುಡಿಯೋಸ್’ ಬ್ಯಾನರ್‌ನಡಿ “ತೋತಾಪುರಿ’ ಚಿತ್ರವನ್ನು ನಿರ್ಮಿಸಿದ್ದಾರೆ.
ಚಿತ್ರದಲ್ಲಿ ಜಗ್ಗೇಶ್, ಡಾಲಿ ಧನಂಜಯ್, ದತ್ತಣ್ಣ, ಸುಮನ್ ರಂಗನಾಥ್, ಅದಿತಿ ಪ್ರಭುದೇವ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಚಿತ್ರದ ತಾರಾಬಳಗದಲ್ಲಿ ಸುಮಾರು 80ಕ್ಕೂ ಅಧಿಕ ಪ್ರಖ್ಯಾತ ಕಲಾವಿದರಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.