Toxic Movie: ಈ ದಿನದಿಂದ ರಾಕಿಂಗ್ ಸ್ಟಾರ್ ಯಶ್ ʼಟಾಕ್ಸಿಕ್ʼ ಚಿತ್ರೀಕರಣ ಆರಂಭ?
Team Udayavani, Aug 3, 2024, 6:43 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ಅವರ ʼಟಾಕ್ಸಿಕ್ʼ (Toxic Movie) ಸಿನಿಮಾದ ಬಗೆಗಿನ ಕುತೂಹಲ ಹೆಚ್ಚಾಗಿದೆ. ಇತ್ತೀಚೆಗೆ ಯಶ್ ಅವರು ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದು, ʼಟಾಕ್ಸಿಕ್ʼ ಗಾಗಿ ಅವರ ನ್ಯೂ ಲುಕ್ ಸಖತ್ ಕ್ರೇಜ್ ಹುಟ್ಟಿಸಿದೆ.
ಮಾಲಿವುಡ್‌ನ ಗೀತು ಮೋಹನ್ ದಾಸ್ (Geetu Mohandas) ದೊಡ್ಡದಾಗಿಯೇ ʼಟಾಕ್ಸಿಕ್ʼ ಆರಂಭಿಸಲಿದ್ದಾರೆ. ಶೂಟಿಂಗ್ ಆರಂಭಕ್ಕೂ ಮುನ್ನ ಅದಕ್ಕಾಗಿ ಭರ್ಜರಿ ತಯಾರಿ ನಡೆಸಿಕೊಂಡಿದ್ದಾರೆ.
ಸಿನಿಮಾದಲ್ಲಿ ನಯನತಾರಾ (Nayanthara) ,ಕಿಯಾರಾ ಅಡ್ವಾಣಿ (Kiara Advani) ಹುಮಾ ಖುರೇಷಿ (Human Qureshi) ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ನವಾಝುದ್ದೀನ್ ಸಿದ್ದಿಕಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ʼಟಾಕ್ಸಿಕ್ʼ ದೊಡ್ಡ ಬಜೆಟ್ ನಲ್ಲಿ ಬರುತ್ತಿರುವುದರಿಂದ ಸಿನಿಮಾ ಕೂಡ ಅಷ್ಟೇ ಅದ್ಧೂರಿಯಾಗಿ ಬರಲಿದೆ. ಚಿತ್ರೀಕರಣಕ್ಕಾಗಿ ಸೆಟ್ ಗಳನ್ನು ಹಾಕಲಾಗಿದ್ದು, ಇದೇ ಆಗಸ್ಟ್ ತಿಂಗಳಿನಲ್ಲಿ ಶೂಟಿಂಗ್ ಆರಂಭಗೊಳ್ಳಲಿದೆ. ಮೂಲಗಳ ಪ್ರಕಾರ ಆ.7 ರಂದು ʼಟಾಕ್ಸಿಕ್ʼ ಸೆಟ್ಟೇರಲಿದೆ ಎನ್ನಲಾಗಿದೆ.
ಮುಂದೂಡಿಕೆ ಆಗುತ್ತಾ ʼಟಾಕ್ಸಿಕ್ʼ?: ಯಶ ಅವರ ʼಟಾಕ್ಸಿಕ್ʼ ಅನೌನ್ಸ್ ಆದ ದಿನದಂದಲೇ ರಿಲೀಸ್ ಡೇಟ್ ಕೂಡ ರಿವೀಲ್ ಮಾಡಿತ್ತು. ʼಟಾಕ್ಸಿಕ್ʼ ದೇಶಾದ್ಯಂತದ ಹಲವಾರು ಖ್ಯಾತ ಕಲಾವಿದರನ್ನು ಒಟ್ಟುಗೂಡಿಸಲಿದೆ. ಇದಕ್ಕಾಗಿ ಚಿತ್ರತಂಡ ಸಾಕಷ್ಟು ತಯಾರಿಯನ್ನು ನಡೆಸಲಿದೆ. ಈ ಕಲಾವಿದರ ದಿನಾಂಕಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಈ ಕಾರಣದಿಂದ ಈಗಾಗಲೇ ನಿಗದಿಪಡಿಸಿರುವ ರಿಲೀಸ್ ಡೇಟ್ ಗಿಂತ ಹೆಚ್ಚಿನ ಸಮಯ ಇದಕ್ಕೆ ಬೇಕಾಗಬಹುದು. ಹೀಗಾಗಿ ರಿಲೀಸ್ ಡೇಟ್ ಮುಂದೂಡಿಕೆ ಆಗುತ್ತದೆ ಎನ್ನಲಾಗಿದೆ.
ಶೀಘ್ರದಲ್ಲಿ ಹೊಸ ರಿಲೀಸ್ ಡೇಟ್ ಅನೌನ್ಸ್ ಆಗಲಿದೆ ಎನ್ನಲಾಗಿದೆ.
ಗೋವಾದಲ್ಲಿನ ಡ್ರಗ್ ಕಾರ್ಟೆಲ್ ಸುತ್ತ ʼಟಾಕ್ಸಿಕ್ʼ ಕಥೆ ಸುತ್ತುತ್ತದೆ. ಬಿಗ್ ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಕೆವಿಎನ್ ಪ್ರೊಡಕ್ಷನ್ ಹಾಗೂ ಮಾನ್ ಸ್ಟಾರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಲಿದೆ.
ʼಟಾಕ್ಸಿಕ್ʼ ಪ್ಯಾನ್ ಇಂಡಿಯಾ ಭಾಷೆ ಸೇರಿದಂತೆ ವಿದೇಶಿ ಭಾಷೆಯಲ್ಲೂ ತೆರೆಗೆ ಬರಲಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.