ಉತ್ತರ ಕರ್ನಾಟಕದತ್ತ ‘ತ್ರಿವಿಕ್ರಮ’; ಅದ್ಧೂರಿ ಕಾರ್ಯಕ್ರಮದಲ್ಲಿ ಟ್ರೇಲರ್ ಲಾಂಚ್
Team Udayavani, Jun 13, 2022, 3:41 PM IST
ವಿಕ್ರಮ್ ನಟನೆಯ “ತ್ರಿವಿಕ್ರಮ’ ಚಿತ್ರ ಜೂನ್ 24ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಉತ್ತರ ಕರ್ನಾಟಕ ಪ್ರವಾಸಕ್ಕೆ ರೆಡಿಯಾಗಿದೆ. ಈಗಾಗಲೇ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ದೊರಕಿರುವುದರಿಂದ ರಾಜ್ಯಾದ್ಯಂತ ಪ್ರೇಕ್ಷಕರಿಗೆ ಧನ್ಯವಾದಗಳನ್ನು ತಿಳಿಸಲು “ತ್ರಿವಿಕ್ರಮ’ ತಂಡ ಮೊದಲಿಗೆ ಉತ್ತರ ಕರ್ನಾಟಕವನ್ನು ಸುತ್ತಿ ಬರಲಿದೆ.
ಜೂನ್ 13ರಂದು ದಾವಣಗೆರೆಯಿಂದ ಪ್ರಯಾಣ ಆರಂಭಿಸಲಿದ್ದು, 14ರಂದು ಹುಬ್ಬಳ್ಳಿ-ಧಾರವಾಡ, 15ರಂದು ಬೆಳಗಾವಿ ಹಾಗೂ 16ರಂದು ಬಳ್ಳಾರಿ ಮತ್ತು ಹೊಸಪೇಟೆಯ ಪ್ರಮುಖ ಸ್ಥಳಗಳು, ಕಾಲೇಜುಗಳಿಗೆ ಭೇಟಿ ನೀಡಿ ಬರಲಿದೆ. ಬಳಿಕ ಮಂಡ್ಯ, ಮದ್ದೂರು ಹಾಗೂ ಮೈಸೂರು ಸುತ್ತಮುತ್ತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆ ಚಿತ್ರತಂಡಕ್ಕಿದೆ.
ಜೂನ್ 19ರಂದು ದೊಡ್ಡ ಮಟ್ಟದಲ್ಲಿ ಪ್ರಿ ರಿಲೀಸ್ ಈವೆಂಟ್ ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾನಾ ಭಾಷೆಯ ತಾರೆಯರು ಆಗಮಿಸುವ ನಿರೀಕ್ಷೆಯಿದೆ. ಅನೇಕ ಸ್ಟಾರ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಲಿದ್ದಾರೆ. ಅದೇ ವೇದಿಕೆಯಲ್ಲಿ “ತ್ರಿವಿಕ್ರಮ’ ಟ್ರೇಲರ್ ಅನಾವರಣಗೊಳ್ಳಲಿದೆ.
ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳಿಗೆ ಭೂಷಣ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಸಹನಾ ಮೂರ್ತಿ “ತ್ರಿವಿಕ್ರಮ’ನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ.
ಚಿತ್ರದಲ್ಲಿ ತುಳಸಿ, ಸುಚೇಂದ್ರ ಪ್ರಸಾದ್, ಸಾಧು ಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.