ಹೊಸ ವರ್ಷಕ್ಕೊಂದು ಟ್ರಂಕ್‌ ಪೋಸ್ಟರ್‌

Team Udayavani, Jan 3, 2018, 11:05 AM IST

Trunk.jpg

ಹಿರಿಯ ನಿರ್ದೇಶಕ-ನಿರ್ಮಾಪಕ ದಿವಂಗತ ಜಿ.ವಿ.ಅಯ್ಯರ್‌ ಅವರ ಮೊಮ್ಮಗಳು ರಿಷಿಕಾ ಶರ್ಮ ಗೊತ್ತಲ್ವಾ? ಅದೇ ಈ ಹಿಂದೆ ಅವರು ಸದ್ದಿಲ್ಲದೆಯೇ ‘ಟ್ರಂಕ್‌’ ಎಂಬ ಚಿತ್ರ ನಿರ್ದೇಶನ ಮಾಡುವ ಮೂಲಕ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದಾರೆ ಎಂಬ ಸುದ್ದಿಯನ್ನು ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಈಗ ಹೊಸ ಸುದ್ದಿಯೆಂದರೆ, ಆ ಚಿತ್ರದ ಚಿತ್ರೀಕರಣ ಬಹುತೇಕ ಮುಗಿಸಿ, ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ ನಿರ್ದೇಶಕಿ ರಿಷಿಕಾ ಶರ್ಮ.

ಅದಷ್ಟೇ ಅಲ್ಲ, ಹೊಸ ವರ್ಷಕ್ಕೆ ತಮ್ಮ ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ್ದಾರೆ. ಇಲ್ಲಿ ಪ್ರಕಟಿಸಿರುವ ಪೋಸ್ಟರ್‌ ನೋಡಿದರೆ,  ಹಾರರ್‌ ಸಿನಿಮಾದ ಫೀಲ್‌ ಬರುವುದು ದಿಟ. ಬರುವುದೇನು, ರಿಷಿಕಾ ಶರ್ಮ ನಿರ್ದೇಶಿಸಿರುವುದು ಹಾರರ್‌ ಸಿನಿಮಾನೇ. ನಿರ್ದೇಶಕಿ ರಿಷಿಕಾ ಶರ್ಮ ಅವರಿಗೆ ನಿರ್ದೇಶನ ಮಾಡಬೇಕು ಅಂತ ಯೋಚನೆ ಬಂದಾಗ, ಅವರು ಮೊದಲು  ಆಯ್ಕೆ ಮಾಡಿಕೊಂಡಿದ್ದು ಹಾರರ್‌ ಕಥೆ.

ಹಾಗಂತ, ಕಲ್ಪನೆಯ ಕಥೆಯಲ್ಲ ಅದು. ಉತ್ತರ ಕರ್ನಾಟಕದಲ್ಲಿ ನಡೆದಂತಹ ನೈಜ ಘಟನೆ ಇಟ್ಟುಕೊಂಡು ಮಾಡಿದ ಚಿತ್ರವಂತೆ. ಉತ್ತರ ಕರ್ನಾಟಕದ ಊರೊಂದರ ಮನೆಯಲ್ಲಿ ನಡೆದ ಒಂದು ಕಥೆ ಚಿತ್ರದ ಹೈಲೈಟ್‌ ಅಂತೆ. ಅದು ಒಂದು ಟ್ರಂಕ್‌ನಿಂದ ಶುರುವಾಗುವ ಕಥೆ. ಎರಡು ಜನರೇಷನ್‌ ಹಿಂದೆ ಇದ್ದಂತಹ ಕಥೆಯನ್ನು ಈಗ ಚಿತ್ರ ಮಾಡಲಾಗಿದೆ. ಒಂದು ಟ್ರಂಕ್‌ ಸುತ್ತ ನಡೆಯೋ ಕಥೆಯೇ ಚಿತ್ರದ ಜೀವಾಳ.

ಟ್ರಂಕ್‌  ಚಿತ್ರದ ಕೇಂದ್ರಬಿಂದು. ಅದರೊಳಗೊಂದು ವಿಚಿತ್ರ ಘಟನೆ ನಡೆಯುತ್ತೆ. ಅದನ್ನೇ ಇಟ್ಟುಕೊಂಡು ಕಥೆ ವಿಸ್ತರಿಸಿ ಸಿನಿಮಾ ಮಾಡಿದ್ದಾರೆ ರಿಷಿಕಾ ಶರ್ಮ. ರಿಷಿಕಾ ಶರ್ಮ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರವಾದರೂ, ಈ ಹಿಂದೆ “ಬಿಟೆಕ್‌’ ಎಂಬ ಚಿತ್ರದಲ್ಲಿ ಸಹಾಯಕಿ ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾರೆ. ಆ ಚಿತ್ರ ಸೋಷಿಯಲ್‌ ಮೀಡಿಯಾದಲ್ಲಿ ತೆರೆಕಂಡಿದೆ.

ತುಳು ಭಾಷೆಯಲ್ಲಿ ಬಂದ “ಶಟರ್‌ ದುಲೈ’ ಚಿತ್ರದಲ್ಲೊಂದು ಪಾತ್ರ ನಿರ್ವಹಿಸಿ, ಅಲ್ಲೂ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇದರ ಜತೆಗೆ “ಸೈಕೋ ಶಂಕ್ರ’ ಹಾಗು ‘ನಡುವೆ ಅಂತರವಿರಲಿ’ ಚಿತ್ರದಲ್ಲೂ ನಟಿಸಿದ್ದಾರೆ. ಇಷ್ಟಕ್ಕೂ ರಿಷಿಕಾ ಶರ್ಮ ಅವರಿಗೆ ಈ ದೆವ್ವದ ಚಿತ್ರ ಮಾಡೋಕೆ ಕಾರಣ, ಅವರಿಗಾದ ಒಂದು ಅನುಭವ.

ಅದರ ಮೇಲೆಯೇ ದೆವ್ವದ ಚಿತ್ರ ಮಾಡಿದ್ದಾರಂತೆ. ಚಿತ್ರಕ್ಕೆ ರಂಗಶಂಕರದ ಸುಖೇಶ್‌ ಶೆಟ್ಟಿ ಸಂಭಾಷಣೆ ಬರೆದಿದ್ದಾರೆ. ಇಲ್ಲಿ ಮಾತುಗಳಿಗೆ ಹೆಚ್ಚು ಅವಕಾಶವಿಲ್ಲ. ಕೇವಲ ನಿಶ್ಯಬ್ಧದಲ್ಲೇ ಕಥೆ ಹೇಳುವ ಪ್ರಯತ್ನ ಮಾಡಿದ್ದಾರೆ ಅವರು. ಚಿತ್ರವನ್ನು ರಾಜೇಶ್‌ ಭಟ್‌ ನಿರ್ಮಿಸಿದ್ದಾರೆ. ಚಿತ್ರಕ್ಕೆ ನಿಹಾಲ್‌ ನಾಯಕರಾದರೆ, ವೈಶಾಲಿ ದೀಪಕ್‌ ನಾಯಕಿ.

ಉಳಿದಂತೆ ಅರುಣ ಬಾಲರಾಜ್‌, ರಂಗಭೂಮಿಯ ಹಿರಿಯ ಕಲಾವಿದೆ ಸುಂದರಶ್ರೀ ಸೇರಿದಂತೆ ಅನೇಕರು ನಟಿಸಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಭಜರಂಗ್‌, ಸಂದೀಪ್‌ ಕ್ಯಾಮೆರಾ ಹಿಡಿದಿದ್ದಾರೆ. ಕಾರ್ತಿಕ್‌ ರಮನ್‌ ಮತ್ತು ಬೀಟ್‌ ಗುರು ಬ್ಯಾಂಡ್‌ನ‌ ಗಣೇಶನ್‌ ಸಂಗೀತವಿದೆ. ಅಲ್ವಿನ್‌ ಹಿನ್ನೆಲೆ ಸಂಗೀತವಿದೆ.

ಟಾಪ್ ನ್ಯೂಸ್

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.