ಹಾಡಿನ ಮೂಲಕ ಕನ್ನಡ ಉಳಿಸುವ ಪ್ರಯತ್ನ

Team Udayavani, Jan 31, 2018, 10:45 AM IST

Kannada-Song_(108).jpg

ಕನ್ನಡ ಭಾಷೆ ಮತ್ತು ಸಂಸ್ಕೃತಿ ಕುರಿತು ಅನೇಕ ವಿಡೀಯೋ ಆಲ್ಬಂಗಳು ಬಂದಿವೆ. ಈಗ ಆ ಸಾಲಿಗೆ “ಕನ್ನಡ ಕಲಿಸಿ ಕನ್ನಡ ಉಳಿಸಿ ಕನ್ನಡ ಬೆಳೆಸೋಣ’ ವೀಡಿಯೋ ಆಲ್ಬಂ ಹೊಸ ಸೇರ್ಪಡೆ ಎನ್ನಬಹುದು. ಅಭಿಲಾಷ್‌ ಅವರೇ ಗೀತೆ ಬರೆದು, ಸಂಗೀತ ಸಂಯೋಜಿಸಿ ಆ ಹಾಡನ್ನು ನಿರ್ದೇಶಿಸಿರುವುದಲ್ಲದೆ, ನಿರ್ಮಾಣ ಕೂಡ ಮಾಡಿದ್ದಾರೆ.

ರಾಜ್ಯದಲ್ಲಿ ಕನ್ನಡ ಭಾಷೆಗೆ ಧಕ್ಕೆಯಾಗುತ್ತಿದ್ದು, ಅದರಲ್ಲೂ ಸಿಲಿಕಾನ್‌ ಸಿಟಿಯಲ್ಲಿನ ಕನ್ನಡ ಭಾಷೆಗೆ ಪೆಟ್ಟು ಬೀಳುತ್ತಿದೆ ಎಂಬುದನ್ನು ಅರಿತು ಅಭಿಲಾಷ್‌, ಹಾಡಿನ ಮೂಲಕ ಕನ್ನಡ ಕಲಿಸಿ, ಉಳಿಸಿ, ಬೆಳೆಸುವ ಬಗ್ಗೆ ಒಂದಷ್ಟು ಸಾರುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗೆ ವಿಡೀಯೋ ಆಲ್ಬಂ ಕೂಡ ಬಿಡುಗಡೆಯಾಗಿದೆ.

ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಂಪಾ, ಹಿರಿಯ ಸಾಹಿತಿ ದೊಡ್ಡರಂಗೇಗೌಡರು ಸೇರಿದಂತೆ ಅನೇಕ ಗಣ್ಯರು ವಿಡೀಯೋ ಆಲ್ಬಂಗೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಅಭಿಲಾಷ್‌ ಅವರಿಗೆ ಈ ಆಲ್ಬಂ ಮಾಡಬೇಕು ಅಂತ ಅನಿಸಿದ್ದು, ವೈಟ್‌ಫೀಲ್ಡ್‌ನಲ್ಲಿ ಒಮ್ಮೆ ಅಪರಿಚಿತರೊಬ್ಬರಿಗೆ ವ್ಯಕ್ತಿಯೊಬ್ಬರು ವಿಳಾಸವನ್ನು ಬೇರೆ ಭಾಷೆಯಲ್ಲಿ ಹೇಳುತ್ತಿದ್ದನ್ನು ನೋಡಿದ್ದರಂತೆ.

ಆಗ ಅವರಿಗೆ ಕನ್ನಡ ಭಾಷೆ ಬಾರದವರಿಗೆ ಕನ್ನಡ ಕಲಿಸದೆ, ಅವರ ಭಾಷೆಯಲ್ಲೇ ಅವರ ಜೊತೆ ಮಾತಾಡುವುದನ್ನು ನೋಡಿ, ಹೀಗೆ ಇದ್ದರೆ, ಕನ್ನಡ ಭಾಷೆ ಇನ್ನಷ್ಟು ಕುಂಠಿತಗೊಳ್ಳುತ್ತೆ ಎಂಬುದನ್ನು ಅರಿತು, ಕನ್ನಡ ಹಾಡಿನ ಮೂಲಕ ಆ ವಿಷಯ ಸಾರುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು.

ಹಿರಿಯ ಸಾಹಿತಿ ಚಂಪಾ ಅವರು ಕನ್ನಡ ಸತ್ವ ಸಾರುವ ಗೀತೆಯನ್ನು ವೀಕ್ಷಿಸಿದ್ದಲ್ಲದೆ, “ಕನ್ನಡ ನಾಡಿನ ಸಮಗ್ರ ಚಿತ್ರಣ ಸಾಹಿತ್ಯದಲ್ಲಿದೆ. ನಾಡು-ನುಡಿ ಕುರಿತು ಹಾಡಿನ ಮೂಲಕ ಅರಿವು ಮೂಡಿಸಲು ಹೊರಟಿರುವ ನಿರ್ದೇಶಕರ ಪ್ರಯತ್ನ ಶ್ಲಾಘನೀಯ. ಸಿನಿಮಾ ಮಾಧ್ಯಮ ಮೂಲಕ ಸಾಮಾನ್ಯರಿಗೆ ಬೇಗ ವಿಷಯಗಳು ತಲುಪುತ್ತವೆ.

ಈ ಮೂಲಕ ಕನ್ನಡ ಭಾಷೆ ಉಳಿಸುವ ಪ್ರಯತ್ನ ಮಾಡುತ್ತಿರುವುದು ಸಾರ್ಥಕ. ಈ ರಂಗದಿಂದಲೇ ಹಲವು ಸಾಹಿತಿಗಳು ಹೆಸರು ಮಾಡಿದ್ದಾರೆ. ನಿರ್ದೇಶಕರ ಪ್ರಯತ್ನಕ್ಕೆ ನಮ್ಮ ಸಹಕಾರವಿದೆ’ ಎಂಬುದು ಚಂಪಾ ಮಾತು. ಉಳಿದಂತೆ ಅಂದು ಹಾಜರಿದ್ದ ಗಣ್ಯರೆಲ್ಲರೂ ಕನ್ನಡ ಗೀತೆ ಮೂಡಿಬಂದಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.