Ramesh Aravind; ಬರ್ತ್ ಡೇ ಹಿನ್ನೆಲೆಯಲ್ಲಿ ಎರಡು ಹೊಸ ಸಿನಿಮಾ ಘೋಷಣೆ
Team Udayavani, Sep 11, 2023, 11:42 AM IST
ನಟ ರಮೇಶ್ ಅರವಿಂದ್ ಅವರಿಗೆ ಭಾನುವಾರ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರವೊಂದು ಅನೌನ್ಸ್ ಆಗಿದೆ. ಅದು “ದೈಜಿ’.
ಹೌದು, ಹೀಗೊಂದು ವಿಭಿನ್ನ ಟೈಟಲ್ನ ಸಿನಿಮಾದಲ್ಲಿ ರಮೇಶ್ ಅರವಿಂದ್ ನಟಿಸುತ್ತಿದ್ದಾರೆ. ಇದು ಅವರ 106ನೇ ಚಿತ್ರ. ಈ ಚಿತ್ರವನ್ನು ಆಕಾಶ್ ಶ್ರೀವತ್ಸ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ರಮೇಶ್ ಅರವಿಂದ್ ಜೊತೆ “ಶಿವಾಜಿ ಸುರತ್ಕಲ್’ ಹಾಗೂ “ಶಿವಾಜಿ ಸುರತ್ಕಲ್-2′ ಚಿತ್ರಗಳನ್ನು ನಿರ್ದೇಶಿಸಿರುವ ಆಕಾಶ್ ಈಗ ಮೂರನೇ ಬಾರಿ ರಮೇಶ್ ಅರವಿಂದ್ ಅವರಿಗೆ ಸಿನಿಮಾ ಮಾಡುತ್ತಿದ್ದಾರೆ.
ಈ ಚಿತ್ರವನ್ನು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುಂಚೆ ಧನಂಜಯ್ ಅವರು ನಟಿಸಿದ “ಬದ್ಮಾಶ್’
ಸೇರಿದಂತೆ ಕೆಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಚಿತ್ರದ ಶೀರ್ಷಿಕೆ “ದೈಜಿ’ ಗೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ ದೈಜಿ ಎಂದರೆ ರಕ್ತ ಸಂಬಂಧ. ಜಪಾನಿ ಭಾಷೆಯಲ್ಲಿ ದೈಜಿ ಎಂದರೆ ಬಹಳ ಕಾಳಜಿ ವಹಿಸಬೇಕಾದ ವಿಚಾರ ಎಂದು. ಹಾರರ್ ಜೊತೆಗೆ ಮಿಸ್ಟರಿ ಅಂಶಗಳೊಂದಿಗೆ ಈ ಚಿತ್ರ ಸಾಗಲಿದೆ ಎಂಬ ಮಾಹಿತಿ ನೀಡುತ್ತದೆ ತಂಡ. ಚಿತ್ರಕಥೆಯನ್ನು ಶಿವಾಜಿ ಸುರತ್ಕಲ್ ಬರೆದ ಅಭಿಜಿತ್ ವೈ ಆರ್ ಮತ್ತು ಆಕಾಶ್ ಶ್ರೀವತ್ಸರವರು ಸೇರಿ ಬರೆದಿದ್ದಾರೆ.
ಚಿತ್ರೀಕರಣ ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಚಿತ್ರವು ಸಂಪೂರ್ಣವಾಗಿ ಅಮೆರಿಕದಲ್ಲಿ ಚಿತ್ರೀಕರಣವಾಗಲಿದೆ. ಚಿತ್ರದಲ್ಲಿ ರಮೇಶ್ ಅರವಿಂದ್ ಅವರ ಗೆಟಪ್ ಕೂಡಾ ವಿಭಿನ್ನವಾಗಿರಲಿದೆ ಎನ್ನುತ್ತದೆ ಚಿತ್ರತಂಡ.
ವಿಖ್ಯಾತ್ ಸಿನಿಮಾದಲ್ಲಿ ನಟನೆ
ನಿರ್ಮಾಪಕ ವಿಖ್ಯಾತ್ ಅವರ ಹೊಸ ಚಿತ್ರದಲ್ಲಿ ರಮೇಶ್ ಅರವಿಂದ್ ನಟಿಸುತ್ತಿದ್ದಾರೆ. ಈ ವಿಚಾರವನ್ನು ಹುಟ್ಟುಹಬ್ಬ ದಿನ ಚಿತ್ರತಂಡ ಅನೌನ್ಸ್ ಮಾಡಿದೆ. ಅಂದಹಾಗೆ, ವಿಶೇಷವೆಂದರೆ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡಾ ನಟಿಸುತ್ತಿದ್ದಾರೆ. ಚಿತ್ರದ ಹೊಸ ಪೋಸ್ಟರ್ ಬಿಟ್ಟಿದ್ದು, ಅಲ್ಲಿ ಒಂದಷ್ಟು ಸೈನಿಕರ ಮಧ್ಯೆ ವಿಭಿನ್ನ ಗೆಟಪ್ನಲ್ಲಿ ರಮೇಶ್ ಹಾಗೂ ಗಣೇಶ್ ನಿಂತಿದ್ದಾರೆ. ಈ ಮೂಲಕ ಚಿತ್ರತಂಡ ಹೊಸದೇನೋ ಹೇಳಲು ಹೊರಟಿದೆ. ಅಂದಹಾಗೆ, ಇದು ವಿಖ್ಯಾತ್ ಚಿತ್ರ ಸಂಸ್ಥೆಯ 6ನೇ ಚಿತ್ರ. ಈ ಚಿತ್ರವನ್ನು ವಿಖ್ಯಾತ್ ಎ.ಆರ್. ನಿರ್ದೇಶಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.