ಉದ್ಘರ್ಷ ಚಿತ್ರೀಕರಣ ಮುಗಿತು
Team Udayavani, Jan 8, 2019, 8:42 AM IST
ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಚಿತ್ರಗಳ ಖ್ಯಾತಿಯ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ “ಉದ್ಘರ್ಷ’ದ ಚಿತ್ರೀಕರಣ ಪೂರ್ಣಗೊಂಡಿದೆ. ಇನ್ನು ಚಿತ್ರದ ಚಿತ್ರೀಕರಣದ ಜೊತೆ ಜೊತೆಗೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೂ ನಡೆಸುತ್ತಿರುವ ದೇಸಾಯಿ ಚಿತ್ರದ ಬಹುತೇಕ ಎಡಿಟಿಂಗ್ ಕಾರ್ಯಗಳನ್ನು ಪೂರ್ಣಗೊಳಿಸಿದ್ದಾರೆ. ಬಾಕಿಯಿದ್ದ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಮತ್ತು ಚಿತ್ರತಂಡ ಸದ್ಯ ಕುಂಬಳಕಾಯಿ ಒಡೆಯುವ ಮೂಲಕ ಚಿತ್ರೀಕರಣಕ್ಕೆ ಮಂಗಳಹಾಡಿದೆ.
“ಉದ^ರ್ಷ’ ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಕನ್ನಡ ಮತ್ತು ತೆಲುಗಿನಲ್ಲಿ ಈ ಚಿತ್ರ “ಉದ^ರ್ಷ’ ಎಂಬ ಹೆಸರಿನಲ್ಲಿ ಮತ್ತು ತಮಿಳಿನಲ್ಲಿ “ಉಚ್ಚಕಟ್ಟಮ್’ ಎನ್ನುವ ಹೆಸರಿನಲ್ಲಿ ತೆರೆಗೆ ಬರುತ್ತಿದೆ. ಚಿತ್ರದ ಬಹುತೇಕ ಚಿತ್ರೀಕರಣ ಮಡಿಕೇರಿಯಲ್ಲಿ ನಡೆದಿದ್ದು, ಉಳಿದಂತೆ ಬೆಂಗಳೂರು, ಹೈದರಾಬಾದ್ ಹಾಗೂ ಕೇರಳದ ಹಲವು ಸ್ಥಳಗಳಲ್ಲಿ ಚಿತ್ರದ ಕೆಲ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.
“ಉದ^ರ್ಷ’ ಚಿತ್ರದಲ್ಲಿ “ಸಿಂಗಂ 3′ ಖ್ಯಾತಿಯ ಠಾಕೂರ್ ಅನೂಪ್ ಸಿಂಗ್ ನಾಯಕ ನಟರಾಗಿ ನಟಿಸಿದ್ದರೆ, ತಮಿಳಿನ “ಕಬಾಲಿ’ ಖ್ಯಾತಿಯ ಸಾಯಿ ಧನ್ಸಿಕಾ ಹಾಗೂ ನವ ನಟಿ ತಾನ್ಯಾ ಹೋಪ್ ನಾಯಕಿಯರಾಗಿ ಅಭಿನಯಿಸಿದ್ದಾರೆ . ಉಳಿದಂತೆ ಬಾಲಿವುಡ್ ನಟ ಕಬೀರ್ ಸಿಂಗ್ ದುಹಾನ್, ತೆಲುಗು ನಟ ಪ್ರಭಾಕರ್,ಶ್ರವಣ್ ರಾಘವೇಂದ್ರ, ವಂಶಿ ಕೃಷ್ಣ, ಶ್ರದ್ಧಾ ದಾಸ್, ಕಿಶೋರ್, ಹರ್ಷಿಕಾ ಪೂಣತ್ಛ ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.