Upendra; ಪ್ರೇಮಿಗಳ ದಿನಕ್ಕೆ ಯುಐ ಹಾಡು
Team Udayavani, Feb 13, 2024, 3:40 PM IST
ಸದ್ಯಕ್ಕೆ ನಟ ಉಪೇಂದ್ರ ಅಭಿನಯಿಸಿ, ನಿರ್ದೇಶಿಸುತ್ತಿರುವ “ಯುಐ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಇದರ ನಡುವೆಯೇ ನಿಧಾನವಾಗಿ “ಯುಐ’ ಸಿನಿಮಾದ ಪ್ರಚಾರ ಕಾರ್ಯಗಳಿಗೂ ಚಾಲನೆ ನೀಡಿರುವ ಚಿತ್ರತಂಡ, ಕೆಲ ದಿನಗಳ ಹಿಂದಷ್ಟೇ ಸಿನಿಮಾದ ಟೀಸರ್ ಅನ್ನು ಬಿಡುಗಡೆಗೊಳಿಸಿತ್ತು. ಈ ಟೀಸರ್‌ಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಸಿಕ್ಕಿದ್ದು, ಇದೀಗ “ಯುಐ’ ಚಿತ್ರತಂಡ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.
ಹೌದು, “ಪ್ರೇಮಿಗಳ ದಿನ’ವಾಗಿರುವ ಫೆ. 14ರಂದು “ಯುಐ’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಎರಡು ದಿನಗಳ ಮುಂಚೆಯೇ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸ್ವತಃ ಮಾಹಿತಿ ಹಂಚಿಕೊಂಡಿರುವ “ಯುಐ’ ಸಿನಿಮಾದ ನಾಯಕ ನಟ ಕಂ ನಿರ್ದೇಶಕ ಉಪೇಂದ್ರ, “ಪ್ರೇಮಿಗಳ ದಿನ’ದ ಅಂಗವಾಗಿ “ಯುಐ’ ಸಿನಿಮಾದ ಮೊದಲ ಹಾಡು ಫೆ.14 ರ ಬೆಳಿಗ್ಗೆ 10 ಗಂಟೆಗೆ “ಫಸ್ಟ್ ಸಿಂಗಲ್ ಪ್ರೊಮೋ’ ಬಿಡುಗಡೆ ಯಾಗುತ್ತಿರುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ “ಯುಐ’ ಸಿನಿಮಾದ ಹೊಚ್ಚ ಹೊಸ ಪೋಸ್ಟರ್ ಅನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್‌ನಲ್ಲಿ ಉಪೇಂದ್ರ ವಿಚಿತ್ರ ಗೆಟಪ್ ಸಹಜವಾಗಿಯೇ ಅಭಿಮಾನಿಗಳ ಕುತೂಹಲ ಕೆರಳಿಸಲು ಯಶಸ್ವಿಯಾಗಿದ್ದು, ಸದ್ಯ ಉಪ್ಪಿ ಅಭಿಮಾನಿಗಳ ಚಿತ್ತ “ಯುಐ’ ಹಾಡಿನತ್ತ ನೆಟ್ಟಿದೆ.
ಇನ್ನು “ಯುಐ’ ಸಿನಿಮಾದ ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ರವಿಶಂಕರ್, ಅಚ್ಯುತ್ ಕುಮಾರ್, ಸಾಧುಕೋಕಿಲ ಮುಂತಾದವರು “ಯುಐ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಅಂದಹಾಗೆ, “ಯುಐ’ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು, ಮಲೆಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಸಿನಿಮಾದ ಮೊದಲ ಹಾಡು ಕೂಡ ಏಕಕಾಲಕ್ಕೆ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Mangaluru: ವೆನ್ಲಾಕ್‌ನಲ್ಲಿ ದೊರೆಯಲಿದೆ ಕಿಮೋಥೆರಪಿ
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.