UI Movie: ಉಪ್ಪಿ ನಿವಾಸದ ಮುಂದೆ ಜಮಾಯಿಸಿದ ಫ್ಯಾನ್ಸ್; ಕೊನೆಗೂ ಟೀಸರ್ ಡೇಟ್ ಅನೌನ್ಸ್
Team Udayavani, Sep 11, 2023, 3:16 PM IST
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ʼಯುಐʼ ಸಿನಿಮಾದ ನಿರೀಕ್ಷೆ ಹೆಚ್ಚಾಗುತ್ತಿದ್ದು. ಸಿನಿಮಾ ರಿಲೀಸ್ ಗೂ ಮುನ್ನ ವಿಭಿನ್ನವಾಗಿ ಪ್ರಚಾರದಲ್ಲಿ ಚಿತ್ರತಂಡ ನಿರತವಾಗಿದೆ.ಇತ್ತೀಚೆಗೆ ಟೀಸರ್ ರಿಲೀಸ್ ಮಾಡುವ ವಿಚಾರದಲ್ಲಿ ನಿರ್ಮಾಪಕರೊಂದಿಗೆ ಮಾತುಕತೆ ನಡೆಸುವ ಡಿಫ್ರೆಂಟ್ ನಮೂನೆಯ ವಿಡಿಯೋವೊಂದನ್ನು ಚಿತ್ರತಂಡ ರಿಲೀಸ್ ಮಾಡಿತ್ತು. “ಫಸ್ಟ್ ಲುಕ್ ಟೀಸರ್ ಬಿಡಲೇಬೇಕಾ? ನೇರವಾಗಿ ರಿಲೀಸ್ ಡೇಟ್ ಅನೌನ್ಸ್ ಮಾಡಿಬಿಡೋಣ” ಎಂದಿದ್ದರು. “ಸುಳ್ಳಿಗೆ ಹೈಪ್ ತರಬೇಕು, ಸತ್ಯಕ್ಕೆ ತಾನಾಗಿಯೇ ಹೈಪ್ ಸಿಗುತ್ತೆ”ಉಪ್ಪಿ ಎಂದು ಹೇಳಿದ್ದರು.
ಇದೀಗ ಅಂಥದ್ದೇ ವಿಡಿಯೋವೊಂದನ್ನು ಬಿಟ್ಟಿದ್ದಾರೆ. ಇದರಲ್ಲಿ ಅಭಿಮಾನಿಗಳು ಉಪ್ಪಿ ಅವರ ನಿವಾಸದ ಮುಂದೆ ಜಮಾಯಿಸಿದ್ದು ಟೀಸರ್ ರಿಲೀಸ್ ಮಾಡಲೇಬೇಕು ಎಂದು ಹಟ ಹಿಡಿದಿದ್ದಾರೆ.
ಥಿಯೇಟರ್ ನಲ್ಲಿ ನೀವೆಲ್ಲ ತಲೆ ಎತ್ತಿ ಸಿನಿಮಾ ನೋಡ್ಬೇಕು. ಆ ಕಾರಣದಿಂದ ನಾನು ಸಿನಿಮಾದ ಟೀಸರ್ ಬಿಟ್ಟಿಲ್ಲ ಎಂದು ಉಪ್ಪಿ ಎಂದಿದ್ದಾರೆ. ಅದಕ್ಕೆ ಅಭಿಮಾನಿಗಳು ಒಂದು ಕ್ಷಣ ಹೌದೆಂದು ಸುಮ್ಮನಾಗಿ ಮತ್ತೆ ಟೀಸರ್ ಬೇಕೆಂದು ಕೇಳಿದ್ದಾರೆ. ಇದಕ್ಕೆ ಕೊನೆಗೂ ಮಣಿದಿರುವ ಉಪೇಂದ್ರ ಟೀಸರ್ ರಿಲೀಸ್ ಡೇಟ್ ನ್ನು ಅನೌನ್ಸ್ ಮಾಡಿದ್ದಾರೆ.
ಸೆಪ್ಟೆಂಬರ್ 18ರಂದು ಮಧ್ಯಾಹ್ನ 3 ಗಂಟೆಗೆ ಊರ್ವಶಿ ಥಿಯೇಟರ್ನಲ್ಲಿ ಟೀಸರ್ ರಿಲೀಸ್ ಆಗಲಿದೆ ಎಂದು ಉಪ್ಪಿ ಹೇಳಿದ್ದಾರೆ. ಅಂದಹಾಗೆ ಸೆ.18 ರಂದು ರಿಯಲ್ ಸ್ಟಾರ್ ಉಪ್ಪಿ ಅವರ ಹುಟ್ಟುಹಬ್ಬವಿದೆ.
ಈ ಚಿತ್ರವನ್ನು ಕೆ.ಪಿ. ಶ್ರೀಕಾಂತ್ ಮತ್ತು ಜಿ. ಮನೋಹರನ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ʼಯುಐʼ ಮೂಲಕ ಉಪ್ಪಿ ಬಹು ಸಮಯದ ಬಳಿಕ ಮತ್ತೆ ನಿರ್ದೇಶನಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ರೀಷ್ಮಾ ನಾಣಯ್ಯ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು,ನಿಧಿ ಸುಬ್ಬಯ್ಯ, ಇಂದ್ರಜಿತ್ ಲಂಕೇಶ್ ಹಾಗೂ ಪ್ರಶಾಂತ್ ಸಂಬರಗಿ ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.