ಕ್ಲೈಮ್ಯಾಕ್ಸ್‌ ನಲ್ಲಿ ರಾಘವ ಅನ್‌ಲಾಕ್‌!

Team Udayavani, Dec 26, 2022, 12:45 PM IST

tdy-11

ದೀಪಕ್‌ ಮಧುವನಹಳ್ಳಿ ನಿರ್ದೇಶನದ “ಅನ್‌ಲಾಕ್‌ ರಾಘವ’ ಚಿತ್ರ ಈಗ ಕ್ಲೈಮ್ಯಾಕ್ಸ್‌ ಹಂತದ ಚಿತ್ರೀಕರಣದಲ್ಲಿ ತೊಡಗಿದೆ. ಸತ್ಯ ಮತ್ತು ಮಯೂರ ಪಿಕ್ಚರ್ಸ್‌ ಬ್ಯಾನರ್‌ನಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ‌

ಈ ಚಿತ್ರದಲ್ಲಿ ಮಿಲಿಂದ್‌ ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರೇಚಲ್‌ ಡೇವಿಡ್‌ ನಟಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಕ್ಲೈಮ್ಯಾಕ್ಸ್‌ ಚಿತ್ರೀಕರಣದಲ್ಲಿ ನಾಯಕ, ನಾಯಕಿ ಒಳಗೊಂಡಂತೆ ಸಾಧುಕೋಕಿಲ, ಸುಂದರ್‌, ವೀಣಾ ಸುಂದರ್‌, ಶೋಭರಾಜ್, ಅವಿನಾಶ್‌ ಸೇರಿದಂತೆ ಹಲವು ಕಲಾವಿದರು ಪಾಲ್ಗೊಂಡಿದ್ದರು.

ಅನ್‌ ಲಾಕ್‌ ರಾಘವ ಚಿತ್ರದ ನಿರ್ದೇಶಕ ದೀಪಕ್‌ ಮಧುವನಹಳ್ಳಿ ಮಾತನಾಡಿ, “ಎಂಟು ದಿನಗಳ ಕಾಲ ಕ್ಲೈಮ್ಯಾಕ್ಸ್‌ ಚಿತ್ರೀಕರಣ ಯೋಜಿಸಿದ್ದು, ಇನ್ನು ಮೂರು ದಿನದಲ್ಲಿ ಕ್ಲೈಮ್ಯಾಕ್ಸ್‌ ಚಿತ್ರೀಕರಣ ಮುಗಿಯಲಿದೆ. ಎರಡು ಸಾಂಗ್‌ ಹಾಗೂ ಮಾತಿನ ಭಾಗ ಮುಗಿಸಿದರೆ ಸಿನಿಮಾ ಚಿತ್ರೀಕರಣ ಪೂರ್ಣಗೊಳ್ಳುತ್ತದೆ. ಒಟ್ಟು 50 ರಿಂದ 55 ದಿನ ಚಿತ್ರೀಕರಣ ಮಾಡಿದ್ದೇವೆ. ಎಲ್ಲಾ ಕಲಾವಿದರ ಕಾಂಬಿನೇಶನ್‌ ನಲ್ಲಿ ಕ್ಲೈಮ್ಯಾಕ್ಸ್‌ ಚಿತ್ರೀಕರಿಸುತ್ತಿದ್ದೇವೆ. ವಿನೋದ್‌ ಮಾಸ್ಟರ್‌ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಹೊಸ ರೀತಿಯ ಪ್ರಯತ್ನ ಸಿನಿಮಾದಲ್ಲಿದೆ. ಆಕ್ಷನ್‌ ಜೊತೆಗೆ ಹ್ಯೂಮರ್‌ ಕೂಡ ಇಡೀ ಸಿನಿಮಾದಲ್ಲಿ ಜೊತೆಯಾಗಿ ಟ್ರಾವೆಲ್‌ ಆಗಲಿದೆ’ ಎಂದರು.

ಚಿತ್ರದ ನಿರ್ಮಾಪಕ ಮಂಜುನಾಥ್‌.ಡಿ, “ಒಳ್ಳೆಯ ಕಂಟೆಂಟ್‌ ಕೊಟ್ರೆ ಖಂಡಿತಾ ಜನ ಸಿನಿಮಾವನ್ನು ನೋಡ್ತಾರೆ, ಗೆಲ್ಲಿಸ್ತಾರೆ. ಈ ಸಿನಿಮಾದ ಕಂಟೆಂಟ್‌ ತುಂಬಾ ಚೆನ್ನಾಗಿದೆ, ಒಳ್ಳೆಯ ಕಲಾವಿದರು ಇದ್ದಾಾರೆ. ಗೆಲ್ತೀವಿ ಎನ್ನುವ ವಿಶ್ವಾಸದಿಂದ ಹೆಜ್ಜೆ ಇಟ್ಟಿದ್ದೇವೆ. ಏಪ್ರಿಲ್‌ ನಂತರದಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದೇವೆ’ ಎಂದು ತಿಳಿಸಿದರು.

ನಾಯಕ ನಟ ಮಿಲಿಂದ್‌ ಮಾತನಾಡಿ ಒಬ್ಬ ಹೀರೋ ಆಗಿ ನನಗೆ ಬಹಳ ಮುಖ್ಯವಾದ ಸಿನಿಮಾವಿದು. ಅದ್ಭುತವಾದ ಕಥೆ ಆಯ್ಕೆ ಮಾಡಿಕೊಂಡಿದ್ದೇನೆ. ಈ ಸಿನಿಮಾದ ಶಕ್ತಿ ಎಂದರೆ ಸತ್ಯ ಅವರ ಬರವಣಿಗೆ. ಕಮರ್ಶಿಯಲ್‌ ಸಿನಿಮಾವಾದರೂ ಕೂಡ ಜಾಸ್ತಿ ಹೊಡೆದಾಟ ಬಡಿದಾಟಕ್ಕೆ ಹೋಗಿಲ್ಲ. ಬದಲಾಗಿ ರೋಮ್ಯಾನ್ಸ್‌ ಮತ್ತು ಕಾಮಿಡಿ ಜಾನರ್‌ ಸಿನಿಮಾವಿದು ಅದಕ್ಕೆ ಹೆಚ್ಚು ಒತ್ತು ನೀಡಿದ್ದೇವೆ’ ಎಂದರು.

ನಾಯಕಿ ರೇಚಲ್‌ ಡೇವಿಡ್‌ ಮಾತನಾಡಿ ವಿಶೇಷವಾದಂತಹ ಪಾತ್ರ ನನ್ನದು. ಸಿನಿಮಾ ಇಲ್ಲಿವರೆಗೂ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಹಿರಿಯ ನಟರೊಂದಿಗೆ ನಟಿಸಿದ್ದು ಒಳ್ಳೆ ಅನುಭವ ನೀಡಿದೆ. ಚಿತ್ರದಲ್ಲಿ ಜಾನಕಿ ಹೆಸರಲ್ಲಿ ಆರ್ಕಿಯೋಲಜಿಸ್ಟ್‌ ಪಾತ್ರ ನಿರ್ವಹಿಸಿದ್ದೇನೆ ಎಂದರು.

ಉಳಿದಂತೆ ನಟ ಅವಿನಾಶ್‌, ಸಾಧುಕೋಕಿಲ, ವೀಣಾ ಸುಂದರ್‌, ಸುಂರ್ದ, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.