Kannada Movie: ಕಡಲೂರ ಪ್ರೇಮ ಪುರಾಣ “ಕಡಲೂರ ಕಣ್ಮಣಿ”
Team Udayavani, Jul 16, 2024, 2:51 PM IST
ಹೀಗೊಂದು ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜು.19ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. “ಕಡಲೂರ ಕಣ್ಮಣಿ’ ಪ್ರೇಮಕಥಾಹಂದರ ಹೊಂದಿರುವ ಚಿತ್ರ.
ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು. ಕಡಲಿನಲ್ಲಿ ಮುತ್ತು ಸಿಗುವುದು ಎಲ್ಲರಿಗೂ ತಿಳಿದ ಸಂಗತಿ ನನಗೂ ಸಹ ಈ ಈ ಚಿತ್ರದಲ್ಲಿ ಮೂರು ಮುತ್ತುಗಳು ಸಿಕ್ಕಿದೆ. ಅದು ನಮ್ಮ ಚಿತ್ರದ ನಾಯಕ, ನಾಯಕಿ ಹಾಗೂ ನಿರ್ಮಾಪಕರು. ಇವರ ಹಾಗೂ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಚಿತ್ರ ಜುಲೈ 19 ರಂದು ತೆರೆಗೆ ಬರಲಿದೆ. ಇದೇ ತಂಡದೊಂದಿಗೆ ಕಡಲೂರ ಕಣ್ಮಣಿ ಎರಡನೇ ಭಾಗದಲ್ಲಿ ತರುವ ಸಿದ್ಧತೆ ನಡೆಯುತ್ತಿದೆ’ ಎಂದು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ರಾಮ್ ಪ್ರಸನ್ನ ಹುಣಸೂರು ತಿಳಿಸಿದರು.
ಅರ್ಜುನ್ ನಗರ್‌ಕರ್ ಈ ಚಿತ್ರದ ನಾಯಕ. “ವರ್ಣಪಟಲ ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿರುವ ನನಗೆ ನಾಯಕನಾಗಿ ಇದು ಮೊದಲ ಚಿತ್ರ. ಅವಕಾಶ ನೀಡಿದ ನಿರ್ದೇಶಕ ಹಾಗು ನಿರ್ಮಾಪಕರಿಗೆ ಧನ್ಯವಾದ’ ಎಂದರು.
“ನಾವು ಬ್ಯಾಂಕ್ ಉದ್ಯೋಗಿಗಳು. ಜೊತೆಗೆ ಆಪ್ತಮಿತ್ರರು. ರಾಮ್ ಪ್ರಸನ್ನ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು’ ಎನ್ನುವುದು ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ಅವರ ಮಾತು. ಚಿತ್ರದ ಆಕ್ಷನ್ ಸನ್ನಿವೇಶಗಳ ಬಗ್ಗೆ ಚಂದ್ರು ಬಂಡೆ ಮಾಹಿತಿ ನೀಡಿದರು. ಡಿಎಸ್‌ಕೆ ಸಿನಿಮಾಸ್ ಮೂಲಕ ಚಿತ್ರ ಬಿಡುಗಡೆ ಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.