ಉಪೇಂದ್ರ “ಐ ಲವ್ ಯು’ಗೆ ಡೇಟ್ ಫಿಕ್ಸ್
ಜೂನ್ 14 ರಿಲೀಸ್
Team Udayavani, May 13, 2019, 3:00 AM IST
ಉಪೇಂದ್ರ ಅವರ ಚಿತ್ರ ಬಿಡುಗಡೆಯಾಗದೇ ಸುಮಾರು ಒಂದೂವರೆ ವರ್ಷ ಕಳೆದಿದೆ. “ಉಪೇಂದ್ರ ಮತ್ತೆ ಬಾ’ ಚಿತ್ರ ಬಿಡುಗಡೆಯಾದ ನಂತರ ಯಾವ ಚಿತ್ರವೂ ತೆರೆಕಂಡಿರಲಿಲ್ಲ. ಸಹಜವಾಗಿಯೇ ಉಪ್ಪಿ ಅಭಿಮಾನಿಗಳು ಅವರ ಸಿನಿಮಾಕ್ಕಾಗಿ ಎದುರು ನೋಡುತ್ತಿದ್ದರು. ಈಗ ಉಪೇಂದ್ರ ಅವರ ಸಿನಿಮಾದ ಬಿಡುಗಡೆಯ ದಿನಾಂಕ ಅನೌನ್ಸ್ ಆಗಿದೆ.
ಅದು “ಐ ಲವ್ ಯು’ ಚಿತ್ರದ್ದು. ಆರ್.ಚಂದ್ರು ನಿರ್ಮಾಣ, ನಿರ್ದೇಶನದ “ಐ ಲವ್ ಯು’ ಚಿತ್ರ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಬಿಡುಗಡೆಯಾಗಬೇಕಿತ್ತು. ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜೂನ್ 14 ರಂದು ಚಿತ್ರ ತೆರೆಕಾಣುತ್ತಿದೆ. “ಐ ಲವ್ ಯು’ ಚಿತ್ರ ತೆಲುಗು ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಸುಮಾರು 1000ಕ್ಕೂ ಹೆಚ್ಚು ಪರದೆಗಳಲ್ಲಿ ಚಿತ್ರ ಪ್ರದರ್ಶನವಾಗಲಿದೆ.
ಆಂಧ್ರ, ತೆಲಂಗಾಣ, ಕರ್ನಾಟಕ ಸೇರಿದಂತೆ ಹಲವೆಡೆ “ಐ ಲವ್ ಯು’ ಚಿತ್ರ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಉಪೇಂದ್ರ ಅವರು ಈಗಾಗಲೇ ತೆಲುಗು ಚಿತ್ರಗಳಲ್ಲಿ ನಟಿಸಿದ್ದು, ಅವರ ಅಭಿಮಾನಿ ಬಳಗ ದೊಡ್ಡದಿದೆ. ಹಾಗಾಗಿ, “ಐ ಲವ್ ಯು’ ಚಿತ್ರವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಂದ್ರು ಅವರದು. ಈ ಹಿಂದೆ ಯಶ್ ನಾಯಕರಾಗಿರುವ “ಕೆಜಿಎಫ್’ ಚಿತ್ರ ತೆಲುಗಿನಲ್ಲೂ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿ, ಯಶಸ್ಸು ಕಂಡಿತ್ತು.
ಈಗ ಉಪೇಂದ್ರ ಅವರ “ಐ ಲವ್ ಯು’ ಕೂಡಾ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ನಿರ್ದೇಶಕ ಆರ್.ಚಂದ್ರು ಹೇಳುವಂತೆ, “ಐ ಲವ್ ಯು’ ಚಿತ್ರದ ಕಥೆ ಎಲ್ಲಾ ಕಡೆಗೂ ಸಲ್ಲುವ ಕಥೆ. ಯುನಿವರ್ಸಲ್ ಸಬ್ಜೆಕ್ಟ್ ಆದ ಕಾರಣ ಎಲ್ಲಾ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುತ್ತದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಅಂದಹಾಗೆ, ಚಿತ್ರದಲ್ಲಿ ರಚಿತಾ ರಾಮ್ ಹಾಗೂ ಸೋನು ಗೌಡ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.