ಉಪ್ಪಿ ಮತ್ತೆ ಬರ್ತಾರೆ


Team Udayavani, Apr 17, 2018, 11:04 AM IST

upendra_17-4-18.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಉಪೇಂದ್ರ ಇಷ್ಟರಲ್ಲಿ ಪ್ರಜಾಕೀಯ ಮತ್ತು ಚುನಾವಣೆಗಳಲ್ಲಿ ಬಿಝಿಯಾಗಿರಬೇಕಿತ್ತು. ಆದರೆ, ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ಹೊರಬಂದ ಕಾರಣ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟವಾಗಿದೆ. ಸದ್ಯಕ್ಕೆ ತಮ್ಮ ಹೊಸ ಪಕ್ಷವನ್ನು ಚುನಾವಣಾ ಆಯೋಗದಲ್ಲಿ ದಾಖಲಿಸುವ ಪ್ರಯತ್ನದಲ್ಲಿರುವ ಉಪೇಂದ್ರ, ಮುಂದಿನ ತಿಂಗಳು ಮತ್ತೆ ಚಿತ್ರೀಕರಣದಲ್ಲಿ ಭಾಗವಹಿಸುತ್ತಾರೆ ಎಂಬ ಸುದ್ದಿ ಇದೆ.

ಹೌದು, ರಾಜಕೀಯಕ್ಕೆ ಧುಮುಕುವುದಕ್ಕೆ ಮುನ್ನ ಉಪೇಂದ್ರ, “ಹೋಮ್‌ ಮಿನಿಸ್ಟರ್‌’ ಎಂಬ ಚಿತ್ರವನ್ನು ಒಪ್ಪಿಕೊಂಡಿದ್ದರು. ಆ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿತ್ತು. ಸಾಧ್ಯವಾದರೆ, ಅದೊಂದು ಚಿತ್ರ ಮುಗಿಸಿ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಯೋಚನೆಯಲ್ಲಿದ್ದ ಅವರು, ಈಗ ಚುನಾವಣೆಗಳು ಮುಗಿದ ನಂತರ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅದರಂತೆ ಅವರು ಮುಂದಿನ ತಿಂಗಳು, ಚುನಾವಣೆಗಳು ಮುಗಿದ ನಂತರ, “ಹೋಮ್‌ ಮಿನಿಸ್ಟರ್‌’ನ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಾದ ನಂತರ ಅವರು ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ, ಒಂದಿಷ್ಟು ಹೊಸ ಚಿತ್ರಗಳಲ್ಲಿ ನಟಿಸುತ್ತಾರೆ ಎಂಬ ಸುದ್ದಿಯೂ ಇದೆ.

ಇದಕ್ಕೆ ಪೂರಕವಾಗಿ ಉಪೇಂದ್ರ, ಈ ಹಿಂದೆಯೇ, “ರಾಜಕೀಯದಲ್ಲಿ ಗೆಲ್ಲುತ್ತೀನಿ ಎಂಬ ನಂಬಿಕೆ ಇದೆ. ಗೆದ್ದರೆ ಸಂತೋಷ. ಇಲ್ಲ ಸಾಯೋವರೆಗೂ ಪ್ರಯತ್ನ ಮಾಡುತ್ತಲೇ ಇರುತ್ತೀನಿ. ಪ್ರತಿ ಚುನಾವಣೆಯ ಆರು ತಿಂಗಳ ಮುಂಚೆ ಬಂದು ಪ್ರಯತ್ನ ಮಾಡುತ್ತಲೇ ಇರುತ್ತೀನಿ’ ಎಂದು ಹೇಳಿಕೊಂಡಿದ್ದರು. “ಹೋಮ್‌ ಮಿನಿಸ್ಟರ್‌’ ಜೊತೆಗೆ ಉಪೇಂದ್ರ ಇನ್ನೊಂದಿಷ್ಟು ಚಿತ್ರಗಳಲ್ಲಿ ನಟಿಸುವ ಸಾಧ್ಯತೆ ಇದೆ.

ರಾಜಕೀಯಕ್ಕೆ ಎಂಟ್ರಿ ಕೊಡುವ ಮುನ್ನ ಅವರು ಗುರುದತ್‌ ನಿರ್ದೇಶನದ “ನಾಗಾರ್ಜುನ’ ಚಿತ್ರವನ್ನು ಒಪ್ಪಿಕೊಂಡಿದ್ದರು. ಮೈಸೂರಿನಲ್ಲಿ ಈ ಚಿತ್ರದ ಮುಹೂರ್ತವೂ ಆಗಿತ್ತು. ಇದಲ್ಲದೆ ಉಪೇಂದ್ರ ಅವರು ಮತ್ತೆ ಚಿತ್ರ ನಿರ್ದೇಶನ ಮಾಡುವ ಸಾಧ್ಯತೆ ಇದೆ ಮತ್ತು ಅವರ ನಿರ್ದೇಶನದ ಹೊಸ ಚಿತ್ರ ಅವರ ಹುಟ್ಟುಹಬ್ಬದಂದು ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.