ಉಪ್ಪಿ-ರಚಿತಾ ಹೀಗೆ ಕಾಣ್ತಾರೆ …
Team Udayavani, Jul 11, 2018, 11:05 AM IST
ನಿರ್ದೇಶಕ ಆರ್.ಚಂದ್ರು ಯಾಕೋ ಜಿದ್ದಿಗೆ ಬಿದ್ದವರಂತೆ ತಮ್ಮ ಹೊಸ ಚಿತ್ರದ ಚಿತ್ರೀಕರಣ ಮಾಡುತ್ತಿದ್ದಾರೆ. ಸಪೋಟ ಗಾರ್ಡನ್‌ನಲ್ಲಿ ಆರಂಭವಾದ ಉಪೇಂದ್ರ ಅವರ “ಐ ಲವ್ ಯೂ’ ಚಿತ್ರ ಆ ನಂತರ ನೈಸ್ ರೋಡ್ ಸುತ್ತಿ, ಉಪೇಂದ್ರ ಅವರ ಹೊಸ ಮನೆ, ರುಪ್ಪೀಸ್ ರೆಸಾರ್ಟ್‌ನಲ್ಲಿ ಚಿತ್ರೀಕರಣವಾಗಿ ಈಗ ನೇರವಾಗಿ 7ಸ್ಟಾರ್ ಹೋಟೆಲ್ ಹೊಕ್ಕಿದೆ!
ಹೌದು, ಚಂದ್ರು ಅವರ “ಐ ಲವ್ ಯೂ’ ಚಿತ್ರೀಕರಣ 7 ಸ್ಟಾರ್ ಹೋಟೆಲ್ ಶೆರಾಟನ್ ಹೋಟೆಲ್‌ನಲ್ಲಿ ನಡೆಯುತ್ತಿದೆ. ರಾತ್ರಿ-ಹಗಲೆನ್ನದೇ ಚಿತ್ರೀಕರಣದಲ್ಲಿ ಚಂದ್ರು ಬಿಝಿಯಾಗಿದ್ದಾರೆ. ಇಷ್ಟು ದಿನ ಉಪೇಂದ್ರ ಅವರ ಇಂಟ್ರೋಡಕ್ಷನ್ ಫೈಟ್ ಸೇರಿದಂತೆ ಇತರ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುತ್ತಿದ್ದ ಚಂದ್ರು ಈಗ ಉಪೇಂದ್ರ ಹಾಗೂ ರಚಿತಾ ರಾಮ್ ಕಾಂಬಿನೇಶನ್‌ನ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುತ್ತಿದ್ದಾರೆ.
ಈಗಾಗಲೇ ರಚಿತಾ ರಾಮ್ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಇಬ್ಬರ ಕಾಂಬಿನೇಶನ್‌ನ ದೃಶ್ಯ, ಹಾಡನ್ನು ಚಂದ್ರು, ಶೆರಾಟನ್ ಹೋಟೆಲ್‌ನ ಐಷಾರಾಮಿ ಸೂಟ್ ಬುಕ್ ಮಾಡಿ, ಅಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದಾರೆ. ಇನ್ನು, ಚಂದ್ರು ಅವರು ಈ ಚಿತ್ರದ ಮೂಲಕ ಪ್ರೀತಿಗೆ ಹೊಸ ವ್ಯಾಖ್ಯಾನ ನೀಡಲಿದ್ದಾರಂತೆ. ಇದು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್‌ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದೆಯಂತೆ.
ಉಪೇಂದ್ರ ಈ ಹಿಂದೆ ತಮ್ಮ “ಎ’ ಸಿನಿಮಾದಲ್ಲಿ, “ಈ ಪ್ರೀತಿ ಪ್ರೇಮ ಎಲ್ಲಾ ಪುಸ್ತಕದ ಬದ್ನೇಕಾಯಿ’ ಎಂದಿದ್ದರು. ಆದರೆ, ಈಗ 15 ವರ್ಷಗಳ ನಂತರ ಉಪೇಂದ್ರ ಅವರು, ಅದೇ ಪ್ರೀತಿ ಬಗ್ಗೆ ಹೊಸ ಅಂಶವನ್ನು ಹೇಳಲಿದ್ದಾರಂತೆ. ಚಿತ್ರಕ್ಕೆ ಸುಜ್ಞಾನ್ ಅವರ ಛಾಯಾಗ್ರಹಣ ಮತ್ತು ಕಿರಣ್ ಅವರ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.