ಉಪ್ಪಿ – ಶಶಾಂಕ್ ಚಿತ್ರಕ್ಕೆ ಮತ್ತೆ ಜೀವ
Team Udayavani, Oct 31, 2018, 11:20 AM IST
ಸದ್ಯ ನಿರ್ದೇಶಕ ಶಶಾಂಕ್ “ತಾಯಿಗೆ ತಕ್ಕ ಮಗ’ ಚಿತ್ರವನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಇದರ ನಡುವೆಯೇ ಶಶಾಂಕ್ ನಿರ್ದೇಶನದ ಮುಂದಿನ ಚಿತ್ರದ ಬಗ್ಗೆಯೂ ಸುದ್ದಿಯೊಂದು ಹೊರಬಿದ್ದಿದೆ. “ತಾಯಿಗೆ ತಕ್ಕ ಮಗ’ ತೆರೆಕಂಡ ನಂತರ ಶಶಾಂಕ್, ರಿಯಲ್ ಸ್ಟಾರ್ ಉಪೇಂದ್ರ ನಾಯನಾಗಿ ಅಭಿನಯಿಸುವ ಚಿತ್ರವನ್ನು ನಿರ್ದೇಶಿಸಲಿದ್ದಾರೆ.
ಕಳೆದ ಒಂದೂವರೆ ವರ್ಷಗಳ ಹಿಂದೆಯೇ ಈ ಇಬ್ಬರ ಕಾಂಬಿನೇಷನ್ನಲ್ಲಿ ಚಿತ್ರವೊಂದು ಬರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಸ್ವತಃ ಶಶಾಂಕ್ ಕೂಡಾ ಈ ಸಿನಿಮಾ ಬಗ್ಗೆ ಹೇಳಿಕೊಂಡಿದ್ದರು. ಅದಾದ ನಂತರ ಉಪೇಂದ್ರ ಪ್ರಜಾಕೀಯ, ಚುನಾವಣೆ ಅಂತ ಚಿತ್ರರಂಗದಿಂದ ಕೊಂಚ ದೂರವುಳಿದ ಕಾರಣ ಈ ಸುದ್ದಿ ಅಷ್ಟಕ್ಕೆ ತಣ್ಣಗಾಗಿತ್ತು.
ಈಗ ಉಪ್ಪಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದು, ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಇದೇ ವೇಳೆ ಶಶಾಂಕ್-ಉಪ್ಪಿ ಹೊಸ ಚಿತ್ರ ಸುದ್ದಿಗೆ ಮತ್ತೆ ಕಾವು ಪಡೆದುಕೊಂಡಿದ್ದು, ಇತ್ತೀಚೆಗೆ ನಡೆದ “ತಾಯಿಗೆ ತಕ್ಕ ಮಗ’ ಚಿತ್ರದ ಆಡಿಯೋ ಸಕ್ಸಸ್ ಮೀಟ್ನಲ್ಲಿ ಉಪೇಂದ್ರ ಅವರ ಸಮ್ಮುಖದಲ್ಲೆ ತಮ್ಮ ಮತ್ತು ಉಪೇಂದ್ರ ಅವರ ಕಾಂಬಿನೇಷನ್ನಲ್ಲಿ ಹೊಸ ಚಿತ್ರ ಬರುತ್ತಿದೆ ಎಂದು ನಿರ್ದೇಶಕ ಶಶಾಂಕ್ ಘೋಷಿಸಿದ್ದಾರೆ.
ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ಇದೇ ವರ್ಷಾಂತ್ಯದೊಳಗೆ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ. “ಶಶಾಂಕ್ ಸಿನಿಮಾಸ್’ ಬ್ಯಾನರ್ನಲ್ಲಿ ನಿರ್ದೇಶಕ ಶಶಾಂಕ್ ಅವರೇ ಈ ಚಿತ್ರದ ನಿರ್ಮಾಣ ಮತ್ತು ನಿರ್ದೇಶನದ ಹೊಣೆಯನ್ನು ಹೊತ್ತುಕೊಂಡಿದ್ದು, ಇನ್ನು ಈ ಚಿತ್ರದ ಕಥೆ, ಉಳಿದ ತಾರಾಗಣ, ತಂತ್ರಜ್ಞರ ಮಾಹಿತಿ ಇನ್ನಷ್ಟೆ ಹೊರಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.