![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 27, 2021, 12:27 PM IST
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟರಾಗಿ ಅಭಿನಯಿಸುತ್ತಿರುವ ಹಾಗೂ ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ ಹೊಸ ಪೋಸ್ಟರ್ ಇಂದು ( ಜೂನ್ 27) ಬಿಡುಗಡೆಯಾಗಿದೆ.
‘ಐ ಲವ್ ಯು’ ಚಿತ್ರದ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್.ಚಂದ್ರು ಕಾಂಬಿನೇಶನ್ ನಲ್ಲಿ ‘ಕಬ್ಜ’ ಸಿನಿಮಾ ರೆಡಿಯಾಗುತ್ತಿದೆ. ಭೂಗತ ಲೋಕದ ಕಥಾಹಂದರ ಹೊಂದಿರುವ ‘ಕಬ್ಜ’ ಚಿತ್ರದಲ್ಲಿ ಉಪೇಂದ್ರ ಜೊತೆಗೆ ಕಿಚ್ಚ ಸುದೀಪ್ ಕೂಡ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್.ಚಂದ್ರು.
ಇಂದು ಚಿತ್ರದ ಕಾಂಬೊ ಪೋಸ್ಟರ್ ಬಿಡುಗಡೆಯಾಗಿದ್ದು, ಉಪೇಂದ್ರ ಹಾಗೂ ಸುದೀಪ್ ಖಡಕ್ ಆಗಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ.
ಕಬ್ಜ ಚಿತ್ರದಲ್ಲಿ ‘ಭಾರ್ಗವ್ ಬಕ್ಷಿ’ ಎಂಬ ಪಾತ್ರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದೆ. ಜಗಪತಿ ಬಾಬು, ಕಬೀರ್ ದುಹಾನ್ ಸಿಂಗ್, ಪ್ರಮೋದ್ ಶೆಟ್ಟಿ, ಅನೂಪ್ ರೇವಣ್ಣ, ಕಾಮರಾಜ್ ಮೊದಲಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕಬ್ಜ 1940 ಮತ್ತು 1980 ರ ನಡುವಿನ ದರೋಡೆಕೋರ ಭೂಗತಲೋಕದ ಕಥಾಹಂದರವನ್ನು ಹೊಂದಿರುವ ಚಿತ್ರವಾಗಿದೆ. ಚಿತ್ರವನ್ನು ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿ ಚಿತ್ರೀಕರಿಸಲಾಗುತ್ತಿದೆ. ರವಿ ಬಸ್ರೂರು ಸಂಗೀತ, ಕಲಾ ವಿಭಾಗವನ್ನು ಶಿವಕುಮಾರ್ ನಿರ್ವಹಿಸುತ್ತಿದ್ದಾರೆ. ಚಿತ್ರದ ಛಾಯಾಗ್ರಹಣ ಮತ್ತು ಸಂಕಲನ ಕ್ರಮವಾಗಿ ಎಜೆ ಶೆಟ್ಟಿ ಮತ್ತು ಮಹೇಶ್ ರೆಡ್ಡಿ ನಿರ್ವಹಿಸಿದ್ದಾರೆ. ಚಿತ್ರದಲ್ಲಿನ ಸಾಹಸಗಳನ್ನು ರವಿವರ್ಮ, ವಿಕ್ರಮ್ ಮೊರ್ ಮತ್ತು ವಿಜಯ್ ನೃತ್ಯ ಸಂಯೋಜಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.