ನಟ ಸಂಚಾರಿ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ
Team Udayavani, Jun 15, 2021, 2:55 PM IST
ಬೆಂಗಳೂರು: ಬೈಕ್ ಅಪಘಾತದಲ್ಲಿ ನಿಧನರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.
ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆ, ಯುಎಸ್ ಅಂಡ್ ಚೆನ್ನೈ ಖಾತೆಯಲ್ಲಿ ಈ ಟ್ವೀಟ್ ಮಾಡಲಾಗಿದೆ. ‘ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ (ಲೈಂಗಿಕ ಅಲ್ಪಸಂಖ್ಯಾತರು) ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ…ಅವಳು’ ಪ್ರದರ್ಶನ ಸಂವಾದದಲ್ಲಿ ಸಂಚಾರಿ ವಿಜಯ್ ಭಾಗಿಯಾಗಿದ್ದರು’ ಎಂದು ಟ್ವೀಟ್ ಮಾಡಿದೆ.
ಇನ್ನು ಈ ಟ್ವೀಟ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನೂರಾರು ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ.. ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. #RIP
— US Consulate Chennai (@USAndChennai) June 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.