ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Team Udayavani, Apr 23, 2024, 2:57 PM IST
ಬೆಂಗಳೂರು: ಡಾಲಿ ಧನಂಜಯ ಅವರ ʼಉತ್ತರಕಾಂಡʼ ಸಿನಿಮಾದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿದೆ. ದಿನಕಳೆದಂತೆ ಹೊಸ ಹೊಸ ಅಪ್ಡೇಟ್ ಗಳು ಚಿತ್ರತಂಡದಿಂದ ಬರುತ್ತಿದೆ.
ಕಳೆದ ವರ್ಷ ಸಿನಿಮಾದ ಮುಹೂರ್ತ ನಡೆದಿತ್ತು. ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಈ ಸಿನಿಮಾದ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ರಮ್ಯಾ ಅವರು ಡೇಟ್ ಹೊಂದಿಕೆಯಾಗದ ಕಾರಣ ʼಉತ್ತರಕಾಂಡʼದಿಂ ಹೊರ ಹೋಗಿದ್ದಾರೆ.
ರೋಹಿತ್ ಪದಕಿ ನಿರ್ದೇಶನದ ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇರಲಿದೆ. ಒಂದೊಂದೇ ಪಾತ್ರಗಳ ಪರಿಚಯವನ್ನು ಚಿತ್ರತಂಡ ಮಾಡುತ್ತಿದೆ. ಇದೀಗ ಕಾಲಿವುಡ್ ಹಾಗೂ ಟಾಲಿವುಡ್ ಸಿನಿಮಾರಂಗದಲ್ಲಿ ಖ್ಯಾತಿಯನ್ನು ಗಳಿಸಿರುವ ನಟಿ ಐಶ್ವರ್ಯಾ ರಾಜೇಶ್ ʼಉತ್ತರಕಾಂಡʼ ತಂಡಕ್ಕೆ ಸೇರಿಕೊಂಡಿದ್ದಾರೆ. ಆ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಐಶ್ವರ್ಯ ರಾಜೇಶ್, ಉತ್ತರಕಾಂಡದಾಗ “ದುರ್ಗಿ” ಎಂದು ಅವರ ಪಾತ್ರದ ಲುಕ್ ನ್ನು ಕೆಆರ್ ಜಿ ರಿಲೀಸ್ ಮಾಡಿದೆ.
ಐಶ್ವರ್ಯ ರಾಜೇಶ್ ಅವರ ಆಯ್ಕೆ ಅಧಿಕೃತವಾಗಿದ್ದು, ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಶಿವರಾಜ್ ಕುಮಾರ್ ಅವರಿಗೆ ಜೋಡಿಯಾಗಿ ಭಾವನಾ ಮೆನನ್ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರ ತಂಡ ಅಧಿಕೃತವಾಗಿ ಹೇಳಿಲ್ಲ.
ಬಹು ನಿರೀಕ್ಷಿತ ʼಉತ್ತರಕಾಂಡʼದಲ್ಲಿ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು, ಚೈತ್ರಾ ಜೆ ಆಚಾರ್, ರಂಗಾಯಣ ರಘು, ಯೋಗರಾಜ್ ಭಟ್, ಗೋಪಾಲಕೃಷ್ಣ ದೇಶಪಾಂಡೆ, ಉಮಾಶ್ರೀ, ಮತ್ತು ದಿಗಂತ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
ಸದ್ಯ ವಿಜಯಪುರದಲ್ಲಿ ಸಿನಿಮಾದ ಮೊದಲ ಶೆಡ್ಯೂಲ್ ಚಿತ್ರೀಕರಣಗೊಳ್ಳಲಿದೆ.
ಐಶ್ವರ್ಯ ರಾಜೇಶ್, ಉತ್ತರಕಾಂಡದಾಗ “ದುರ್ಗಿ”
South Indian Actress @aishu_dil enters #Uttarakaanda as “𝐃𝐔𝐑𝐆𝐈” 🔥
Welcome to Kannada 🤩@KRG_Studios @NimmaShivanna @Dhananjayaka @RohitPadaki @Karthik1423 @yogigraj @ItsAmitTrivedi @diganthmanchale @Chaithra_Achar_ @VijaybabuFFH… pic.twitter.com/8qL75vVvGn— KRG Studios (@KRG_Studios) April 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.