Vamana Teaser: ಟೀಸರ್‌ನಲ್ಲಿ ವಾಮನ ಆ್ಯಕ್ಷನ್‌ ಅಬ್ಬರ


Team Udayavani, Aug 21, 2023, 3:43 PM IST

tdy-13

ಧನ್ವೀರ್‌ ಮತ್ತು ರೀಷ್ಮಾ ನಾಣಯ್ಯ ಅಭಿನಯದ “ವಾಮನ’ ಚಿತ್ರ ಸೆಪ್ಟೆಂಬರ್‌ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಆಕ್ಷನ್‌ ಟೀಸರ್‌ ಇತ್ತೀಚೆಗೆ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ಈ ಸಮಾರಂಭದಲ್ಲಿ ಹುಣಸೂರು ಶಾಸಕ ಹರೀಶ್‌ ಗೌಡ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ  ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್‌ ರಾಮನ್‌, “ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಜನರಿಂದ ಮೆಚ್ಚುಗೆ ಪಡೆದಿದೆ. ಇದೊಂದು ಆ್ಯಕ್ಷನ್‌ ಚಿತ್ರ. ಚಿತ್ರದಲ್ಲಿ ಆ್ಯಕ್ಷನ್‌ ಹೇಗಿರುತ್ತದೆ ಎಂದು ತೋರಿಸು ವುದಕ್ಕೆ ಈ ಟೀಸರ್‌ ಬಿಡುಗಡೆ ಮಾಡಿದ್ದೇವೆ. ಈ ಚಿತ್ರದಲ್ಲಿ ಒಟ್ಟು ನಾಲ್ಕು ಫೈಟ್‌ಗಳಿವೆ. ಮೂರು ಫೈಟ್‌ ಗಳಿಗೆ ಅರ್ಜುನ್‌ ರಾಜ್‌ ಸಾಹಸ ನಿರ್ದೇಶನ ಮಾಡಿದ್ದಾರೆ. ಇನ್ನೊಂದು ಫೈಟ್‌ನಲ್ಲಿ ಕಥೆ ಜೊತೆಜೊತೆಯಾಗಿ ಸಾಗುತ್ತದೆ. ಈ ಫೈಟ್‌ ಪ್ರೇಕ್ಷಕರಿಗೆ ಬೇರೆ ತರಹದ ಅನುಭವ ಕೊಡುತ್ತದೆ ಎಂಬ ನಂಬಿಕೆ ನನಗಿದೆ. ಸಾಹಸ ದೃಶ್ಯವನ್ನು ವಿಕ್ರಮ್‌ ಮೋರ್‌ ನಿರ್ದೇಶನ ಮಾಡಿದ್ದಾರೆ. ಅರ್ಜುನ್‌ ರಾಜ್‌ ಮತ್ತು ವಿಕ್ರಮ್‌ ಮೋರ್‌ ಜೊತೆಗೆ ಜಾಲಿ ಬಾಸ್ಟಿನ್‌ ಅವರ ನೆರವು ಮತ್ತು ಮಾರ್ಗದರ್ಶನವಿದೆ. ಈ ಮೂವರೂ ಸಾಹಸ ನಿರ್ದೇಶಕರಿಗೆ ನಮ್ಮ ಚಿತ್ರತಂಡದಿಂದ ಧನ್ಯವಾದಗಳು.”ವಾಮನ’ ಚಿತ್ರವನ್ನು ಸೆಪ್ಟೆಂಬರ್‌ ನಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ. ಧನ್ವೀರ್‌ ಅವರ ಚಿತ್ರ  ಬಿಡುಗಡೆಗೆ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಹಬ್ಬ ಆಗುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ವಾಮನ ಅಂದರೆ ದಶಾವತಾರದಲ್ಲಿ ಬರುವ ಐದನೇ ಅವತಾರ. ದುಷ್ಟತ್ವವೇ ಸರ್ವಸ್ವ ಎನ್ನುವ ಜನರ ವಿರುದ್ಧ ವಾಮನ ಹೇಗೆ ಹೋರಾಡುತ್ತಾನೆ ಎಂಬುದು ಚಿತ್ರದ ಕಥೆ. ಇಲ್ಲಿ ರೌಡಿಸಂ, ಭೂಗತಲೋಕ ಮತ್ತು ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಕಥೆ ಸಾಗುತ್ತಿದೆ. ಈ ಚಿತ್ರದ ಹೈಲೈಟ್‌ ಅಂದರೆ ಸೆಂಟಿಮೆಂಟ್‌ ದೃಶ್ಯಗಳು. ಈ ಚಿತ್ರದಲ್ಲಿ ಒಂದು ಅದ್ಭುತವಾದ ಸಂದೇಶವಿದೆ’ ಎಂದರು.

ನಾಯಕ ಧನ್ವೀರ್‌ ಮಾತನಾಡಿ, “ಈ ಚಿತ್ರದಲ್ಲಿ ನನ್ನದು ಎರಡು ತರಹ ಶೇಡ್‌ ಗಳಿರುವ ಪಾತ್ರ. ಚಿತ್ರದಲ್ಲೊಂದು ಒಳ್ಳೆಯ ಸಂದೇಶವಿದೆ. ನಿರ್ದೇಶಕರು ಮೂಲತಃ ಒಳ್ಳೆಯ ಬರಹಗಾರರು. ಅವರೊಂದು ಎಳೆಯನ್ನು ಹೇಳಿದ್ದರು. ಬಹಳ ಇಷ್ಟವಾಗಿ, ಅದನ್ನು ಬೆಳೆಸಿ ಎಂದು ಹೇಳಿದ್ದೆ. ಆ ಎಳೆ ಚಿತ್ರವಾಗಿ, ಇದೀಗ ಬಿಡುಗಡೆಗೆ ಬಂದಿದೆ.  ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ಸೇರಿದಂತೆ ಬೇರೆ ಊರುಗಳಲ್ಲಿ ಸಹ ಚಿತ್ರದ ಪ್ರಮೋಷನ್‌ ಮಾಡುತ್ತೇವೆ’ ಎಂದರು.

“ಈ ಚಿತ್ರದಲ್ಲಿ ನನ್ನದು ಬಹಳ ಮುದ್ದಾದ ಮತ್ತು ಅಷ್ಟೇ ಸರಳವಾದ ಪಾತ್ರ. ನನಗಂತೂ ಬಹಳ ಇಷ್ಟವಾದ ಪಾತ್ರ ಇದು. ಚಿತ್ರ ನೋಡಿದ ಜನರಿಗೂ ಇಷ್ಟವಾಗುತ್ತೆ ಎಂಬ ನಂಬಿಕೆ ಇದೆ’ ಎನ್ನುವುದು ನಾಯಕಿ  ರೀಷ್ಮಾ ನಾಣಯ್ಯ ಮಾತು. ಈ ಚಿತ್ರವನ್ನು ಚೇತನ್‌ ನಿರ್ಮಿಸಿದ್ದಾರೆ.

 

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.