Vasishta Simha: ಫಸ್ಟ್‌ಲುಕ್ ನಲ್ಲಿ ‘ವಿಐಪಿ’ ಎಂಟ್ರಿ
Team Udayavani, Mar 27, 2024, 4:21 PM IST
ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ’ ಚಿತ್ರದ ಫಸ್ಟ್‌ಲುಕ್ ಇತ್ತೀಚಿಗೆ ಬಿಡುಗಡೆ ಯಾ ಗಿದೆ. ಅದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಹಾಗೂ ಶ್ರೀ ಪ್ರಸನ್ನನಾಥ ಸ್ವಾಮೀಜಿ ಫಸ್ಟ್‌ಲುಕ್ ಬಿಡುಗಡೆ ಮಾಡಿ ಶುಭಕೋರಿದರು.
ಈ ಚಿತ್ರಕ್ಕೆ ಈಗಾಗಲೇ ಬೆಂಗಳೂರು ಸುತ್ತಮುತ್ತ ಎರಡು ಹಂತಗಳ ಚಿತ್ರೀಕರಣ ನಡೆದಿದೆ. ಈ ಭಾಗದಲ್ಲಿ ಮಾತಿನ ಭಾಗದ ಚಿತ್ರೀಕರಣ ಹಾಗೂ ವಿಕ್ರಂ ಮೋರ್, ಯುವ ಖ್ಯಾತಿಯ ಅರ್ಜುನ್ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ.
ಆರ್.ಎಸ್. ಮೋಹನ್ ಕುಮಾರ್ ಹಾಗೂ ಆರ್. ಅಚ್ಯುತ್ ರಾವ್ ಅವರ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು. ವಿಐಪಿ ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ಅಭಿನಯಿಸುತ್ತಿದ್ದಾರೆ.
ಸುನೀಲ್ ಪುರಾಣಿಕ್, ಬಲ ರಾಜವಾಡಿ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ರಾಜೀವ್ ಗಣೇಸನ್ ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರಕ್ಕಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.