ವಾಸು ಪಕ್ಕಾ ದರ್ಶನ್!
Team Udayavani, Jul 23, 2018, 11:24 AM IST
ನಟ, ನಿರ್ಮಾಪಕ ಅನೀಶ್ ತೇಜೇಶ್ವರ್ ಅಭಿನಯದ “ವಾಸು ನಾನ್ ಪಕ್ಕಾ ಕಮರ್ಷಿಯಲ್’ ಚಿತ್ರ ಇನ್ನೇನು ಬಿಡುಗಡೆಗೆ ತಯಾರಾಗಿದೆ. ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲೆಂದೇ ಅನೀಶ್ ತೇಜೇಶ್ವರ್ ಅಂಬೇಡ್ಕರ್ ಭವನದಲ್ಲಿ ಶನಿವರಾ ಸಂಜೆ ಭರ್ಜರಿ ಮನರಂಜನೆ ಕಾರ್ಯಕ್ರಮ ಏರ್ಪಡಿಸಿದ್ದರು.
ನಟ ದರ್ಶನ್ ಆ ಕಾರ್ಯಕ್ರಮದ ಆಕರ್ಷಣೆ. ಅವರ ಮೂಲಕ ತಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು ಇನ್ನೊಂದು ವಿಶೇಷ. ಅಂದಹಾಗೆ, “ವಾಸು ನಾನ್ ಪಕ್ಕಾ ಕಮರ್ಷಿಯಲ್’ ಆಗಸ್ಟ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ದಿನಾಂಕ ಇರುವ ಚಿತ್ರದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡುವ ಮೂಲಕ ದರ್ಶನ್, ಅನೀಶ್ ತೇಜೇಶ್ವರ್ ಮತ್ತು ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಚಿತ್ರ ಬಿಡುಗಡೆ ಮುನ್ನ ಒಂದು ದೊಡ್ಡ ಮನರಂಜನೆ ಕಾರ್ಯಕ್ರಮ ಮಾಡಬೇಕೆಂಬುದು ಅನೀಶ್ ತೇಜೇಶ್ವರ್ ಅವರ ಬಯಕೆಯಾಗಿತ್ತು. ಅವರ ಕಲ್ಪನೆಯಂತೆ ನಡೆದ ಆ ಕಾರ್ಯಕ್ರಮದಲ್ಲಿ ಮೊದಲು ಟ್ರೇಲರ್ ತೋರಿಸಲಾಯಿತು. ನಂತರ, ಅನುಷಾ ರಂಗನಾಥ್, ಅನಿತಾಭಟ್,ಕೃಷಿ ತಾಪಂಡ, ಸೇರಿದಂತೆ ಇತರರು ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ರಂಜಿಸಿದರು.
ಯುವ ಪ್ರತಿಭಾವಂತ ಯಶವಂತ್ ಯೋಗಾಸನದ ವಿವಿಧ ಭಂಗಿ ಆಕರ್ಷಣೆಯಾಗಿತ್ತು. ಮೌಂಟ್ ಕಾರ್ಮಲ್ ಕಾಲೇಜು ವಿದ್ಯಾರ್ಥಿನಿಯರ ಹಿಪ್‌ಹಾಪ್ ಡ್ಯಾನ್ಸ್ ಕೂಡ ಗಮನಸೆಳೆಯಿತು. ಈ ವೇಳೆ ನಿರ್ದೇಶಕ ಅಜಿತ್ ಉಗ್ಗಿನ್ ವಾಸನ್, ನಾಯಕಿ ನಿಶ್ವಿಕಾ ನಾಯ್ಡು ಇತರರು ಇದ್ದರು. ದಿಲೀಪ್ ಚಕ್ರವರ್ತಿ ಛಾಯಾಗ್ರಹಣವಿದೆ. ಅಜನೀಶ್ ಲೋಕನಾಥ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.