ರಭಸ; ಹೊಸ ಚಿತ್ರಕ್ಕೆ ವೀರೆನ್ ಕೇಶವ್ ತಯಾರಿ
Team Udayavani, Mar 23, 2023, 4:11 PM IST
ಈ ವರ್ಷದ ಜನವರಿ ತಿಂಗಳಿನಲ್ಲಿ ತೆರೆಕಂಡ ಔಟ್ ಆ್ಯಂಡ್ ಔಟ್ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರದ “ಕಾಕ್ಟೆಲ್’ ಸಿನಿಮಾ ನಿಮಗೆ ಗೊತ್ತಿರಬಹುದು. ಈ “ಕಾಕ್ಟೆಲ್’ ಸಿನಿಮಾದ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದವರು ವಿರೇನ್ ಕೇಶವ್. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿರುವ ವಿರೇನ್ ಕೇಶವ್, ಈಗ ಸದ್ದಿಲ್ಲದೆ ಮಾಸ್ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಹೌದು, ಯುಗಾದಿ ಹಬ್ಬದ ಸಂದರ್ಭದಲ್ಲಿ ವಿರೇನ್ ಕೇಶವ್ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾ ಘೋಷಣೆಯಾಗಿದೆ. ಅಂದಹಾಗೆ, ವಿರೇನ್ ಕೇಶವ್ ಎರಡನೇ ಸಿನಿಮಾಕ್ಕೆ “ರಭಸ’ ಎಂದು ಟೈಟಲ್ ಇಡಲಾಗಿದ್ದು, ಯುಗಾದಿ ಹಬ್ಬದಂದು “ರಭಸ’ ಟೈಟಲ್ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
“ವಿಜಯಲಕ್ಷ್ಮೀ ಕಂಬೈನ್ಸ್’ ಬ್ಯಾನರ್‌ನಲ್ಲಿ ಡಾ. ಶಿವಪ್ಪ, ಶ್ರೀನಿವಾಸ್ ಕೆ. ಬಿ, ಫಿರೋಜ್ ನದಾಫ್ ಮತ್ತು ಮೆಹಬೂಬ ಸಾಬ್ ಹವಾಲ್ದಾರ್ (ಮುಂಡರಗಿ) ಜಂಟಿಯಾಗಿ ನಿರ್ಮಿಸುತ್ತಿರುವ “ರಭಸ’ ಸಿನಿಮಾಕ್ಕೆ ಯುವ ನಿರ್ದೇಶಕ ರಾಜ್ ಚೈತನ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಇನ್ನು “ರಭಸ’ ಸಿನಿಮಾದ ಹೆಸರೇ ಹೇಳುವಂತೆ, ಇದೊಂದು ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಸಬ್ಜೆಕ್ಟ್ ಸಿನಿಮಾ. ಆ್ಯಕ್ಷನ್ ಜೊತೆಗೆ ಒಂದು ನವಿರಾದ ಪ್ರೇಮಕಥೆ, ಸೆಂಟಿಮೆಂಟ್, ಎಮೋಶನ್ಸ್, ಕಾಮಿಡಿ ಎಲ್ಲವೂ ಸೇರಿಸಿ ಪಕ್ಕಾ ಮಾಸ್ ಶೈಲಿಯಲ್ಲಿ “ರಭಸ’ ಸಿನಿಮಾವನ್ನು ತೆರೆಗೆ ತರಲು ಹೊರಟಿದೆ ಚಿತ್ರತಂಡ. ಇದೇ ಏಪ್ರಿಲ್ ಅಂತ್ಯಕ್ಕೆ “ರಭಸ’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಕೊಡಗು ಸುತ್ತಮುತ್ತ ಸಿನಿಮಾದ ಮಾತಿನ ಭಾಗದ ಚಿತ್ರೀಕರಣ ನಡೆಯಲಿದೆ. ಗೋವಾ, ನೇಪಾಳ ಮತ್ತು ಬ್ಯಾಂಕಾಕ್ ನಲ್ಲಿ ಸಿನಿಮಾದ ಹಾಡುಗಳನ್ನು ಚಿತ್ರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಈಗಾಗಲೇ “ರಭಸ’ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ಬಹುತೇಕ ಪೂರ್ಣಗೊಂಡಿದ್ದು, ದಕ್ಷಿಣ ಭಾರತದ ಹಲವು ಜನಪ್ರಿಯ ಕಲಾವಿದರು “ರಭಸ’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. “ರಭಸ’ ಬಿಗ್ ಬಜೆಟ್ ಮತ್ತು ಬಿಗ್ ಕಾಸ್ಟಿಂಗ್‌ನಲ್ಲಿ ತಯಾರಾಗುತ್ತಿದ್ದು, ಇದೇ ತಿಂಗಳಾಂತ್ಯಕ್ಕೆ ಸಿನಿಮಾದ ನಾಯಕಿ, ಇತರೆ ಕಲಾವಿದರು ಮತ್ತು ತಂತ್ರಜ್ಞರ ಅಂತಿಮ ಹೆಸರು ಹೊರಬೀಳಲಿದೆ.
ಸದ್ಯ ಬಿಡುಗಡೆಯಾಗಿರುವ “ರಭಸ’ ಸಿನಿಮಾದ ಫಸ್ಟ್ ಲುಕ್ ಟೈಟಲ್ ಪೋಸ್ಟರ್‌ನಲ್ಲಿ ನಾಯಕ ವಿರೇನ್ ಕೇಶವ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ “ರಭಸ’ ಸಿನಿಮಾದ ಪಾತ್ರಕ್ಕಾಗಿ ತೆರೆಮರೆಯಲ್ಲಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿರುವ ವಿರೇನ್ ಕೇಶವ್, ಸಿನಿಮಾದ ಆ್ಯಕ್ಷನ್ ದೃಶ್ಯಗಳಿಗಾಗಿ ವಿಶೇಷ ತರಬೇತಿ ಪಡೆದುಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.