‘ಡಾಲರ್ಸ್ ಪೇಟೆ’ಯಲ್ಲಿ ಕೆಜಿಎಫ್ ಗರುಡ ರಾಮ್ ಸಹೋದರ ವೆಂಕಟ್ ರಾಜ್ ಡಾನ್
Team Udayavani, Feb 4, 2023, 1:26 PM IST
ಮೋಹನ್ ಎನ್ ಮುನಿನಾರಾಯಣಪ್ಪ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ‘ಡಾಲರ್ಸ್ ಪೇಟೆ’. ಫಸ್ಟ್ ಲುಕ್ ಪೋಸ್ಟರ್, ಕ್ಯಾರೆಕ್ಟರ್ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿರುವ ಚಿತ್ರತಂಡ ಡಾಲರ್ಸ್ ಪೇಟೆಯ ಡಾನ್ ಪಾತ್ರಧಾರಿಯನ್ನು ಅನಾವರಣ ಮಾಡಿದೆ. ‘ಡಾಲರ್ಸ್ ಪೇಟೆ’ ಚಿತ್ರದಲ್ಲಿ ಡಾನ್ ಪಳನಿ ಪಾತ್ರಧಾರಿಯಾಗಿ ‘ಕೆಜಿಎಫ್’ ಖ್ಯಾತಿಯ ಗರುಡ ರಾಮ್ ಸಹೋದರ ವೆಂಕಟ್ ರಾಜ್ ನಟಿಸುತ್ತಿದ್ದಾರೆ. ಡಾನ್ ಪಳನಿ ಪೋಸ್ಟರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.
ಚಿತ್ರೀಕರಣ ಕಂಪ್ಲೀಟ್ ಮಾಡಿ ರೀರೆಕಾರ್ಡಿಂಗ್ ಹಂತದಲ್ಲಿರುವ ಚಿತ್ರತಂಡ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಈ ಹಿಂದೆ ಸೌಮ್ಯ ಜಗನ್ ಮೂರ್ತಿ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆ ಮಾಡಿದ್ದ ಚಿತ್ರತಂಡ ಇದೀಗ ಡಾನ್ ಪಳನಿ ಲುಕ್ ರಿವೀಲ್ ಮಾಡಿದೆ. ಮೋಹನ್ ಎನ್ ಮುನಿನಾರಾಯಣಪ್ಪ ‘ಮಾರ್ಫಿ’, ‘ಮದಗಜ’ ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದು ‘ಡಾಲರ್ಸ್ ಪೇಟೆ’ ಮೂಲಕ ಸ್ವತಂತ್ರ ನಿರ್ದೇಶಕನಾಗಿ ಹೊಸ ಹೆಜ್ಜೆ ಇಟ್ಟಿದ್ದಾರೆ.
ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ‘ಡಾಲರ್ಸ್ ಪೇಟೆ’ ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ, ಆಕರ್ಷ್ ಕಮಲ, ವೆಂಕಟ್ ರಾಜ್, ಕುಶಾಲ್. ಎಸ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದು, ಪೃಥ್ವಿ ಅಂಬರ್ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ. ಉಳಿದಂತೆ ದತ್ತು ಬಣಕರ್, ಕೌಶಿಕ್, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್ ಮಹೇಂದ್ರ ಒಳಗೊಂಡ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಆನಂದ್ ಸುಂದರೇಶ ಕ್ಯಾಮೆರಾ ವರ್ಕ್, ಮಹೇಶ್ ತೊಗಟ್ಟ ಸಂಕಲನ, ಅರ್ಜುನ್ ರಾಜ್ ಮತ್ತು ನರಸಿಂಹ ಸಾಹಸ ನಿರ್ದೇಶನ ಹಾಗೂ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನ, ರಮೇಶ್ ಎಸ್, ಮನೋಹರ ಸಹಬರವಣಿಗೆ ಚಿತ್ರಕ್ಕಿದೆ. ಪೆಂಟ್ರಿಕ್ಸ್ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಪೂಜಾ.ಟಿ.ವೈ ‘ಡಾಲರ್ಸ್ ಪೇಟೆ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.