ಹೃದಯಾಘಾತದಿಂದ ಮಹೇಶ್ ಬಾಬು ತಂದೆ, ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣ ನಿಧನ
Team Udayavani, Nov 15, 2022, 7:57 AM IST
ಹೈದರಾಬಾದ್ : ತೆಲುಗಿನ ಸೂಪರ್‌ಸ್ಟಾರ್, ನಟ ಮಹೇಶ್‌ಬಾಬು ಅವರ ತಂದೆ ಕೃಷ್ಣ ಅವರು ಹೃದಯಾಘಾತದಿಂದ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರಿಗೆ 80 ವರ್ಷ ವಯಸ್ಸಾಗಿತ್ತು, ಕೃಷ್ಣ ಅವರಿಗೆ ಸೋಮವಾರ ಬೆಳಗ್ಗೆ 1.15ಕ್ಕೆ ಸುಮಾರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಮಂಗಳವಾರ ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ತೆಲುಗು ಚಿತ್ರರಂಗದ ಹಿರಿಯ ನಟರಾಗಿದ್ದ ಶ್ರೀ ಕೃಷ್ಣ ಅವರು ಸುಮಾರು 350 ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಆ ಕಾಲದ ಅಗ್ರ ನಟರಲ್ಲಿ ಒಬ್ಬರಾಗಿದ್ದರು. ಅಲ್ಲದೆ ಅವರು ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿದ್ದರು. ಅವರಿಗೆ 2009 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀ ಕೃಷ್ಣ ಅವರು ನಟ ಮಹೇಶ್ ಬಾಬು ಅವರ ತಂದೆ ಮತ್ತು ಟಿಡಿಪಿ ನಾಯಕ ಜಯ್ ಗಲ್ಲಾ ಅವರ ಮಾವ. ಅವರು 1980 ರ ದಶಕದಲ್ಲಿ ಕಾಂಗ್ರೆಸ್ ಸೇರಿ ಸಂಸದರಾದರು ಆದರೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮರಣದ ನಂತರ ರಾಜಕೀಯವನ್ನು ತೊರೆದರು.
ಎರಡು ತಿಂಗಳ ಹಿಂದೆ ಪತ್ನಿ ನಿಧನ :
ಅವರ ಪತ್ನಿ ಮತ್ತು ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಿಧನರಾದರು. ಅವರ ಹಿರಿಯ ಮಗ ರಮೇಶ್ ಬಾಬು ಜನವರಿಯಲ್ಲಿ ನಿಧನರಾದರು.
ಇದನ್ನೂ ಓದಿ :4 ವರ್ಷ ಬಳಿಕ ಕೊಲೆ ರಹಸ್ಯ ಬಯಲು; ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.