ಹಿರಿಯ ನಟಿ ಜಯಂತಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು
Team Udayavani, Mar 26, 2018, 1:52 PM IST
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟಿ ಜಯಂತಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸೋಮವಾರ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಕೆಲ ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದ 73 ಹರೆಯದ ಜಯಂತಿ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ನನ್ನ ತಾಯಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾರು ಆತಂಕ ಪಡಬೇಕಾಗಿಲ್ಲ, ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿ ಎಂದು ಪುತ್ರ ಕೃಷ್ಣ ಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಮರಾಠಿ ಯ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ನಿರ್ಮಾಪಕಿ, ಹಿನ್ನಲೆ ಗಾಯಕಿಯಾಗಿಯೂ ಕೆಲಸ ಮಾಡಿದ ಅನುಭವ ಜಯಂತಿಯವರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.