ವಿದೇಶದಲ್ಲಿ ವಿಜಯೋತ್ಸವ: ವಿಜಯಪ್ರಕಾಶ್ ಹಾಡು ಸಂಭ್ರಮ
Team Udayavani, May 29, 2018, 12:03 PM IST
ಗಾಯಕ ವಿಜಯಪ್ರಕಾಶ್ ಆಗಾಗ ವಿದೇಶಗಳಿಗೆ ಹೋಗಿ ಅಲ್ಲಿ ಹಾಡುವ ಮೂಲಕ ಅಲ್ಲಿನ ಕನ್ನಡಿಗರನ್ನು ಖುಷಿಪಡಿಸುವುದು ಹೊಸದೇನಲ್ಲ. ಬಹಳ ವರ್ಷಗಳಿಂದಲೂ ಈ ಕೆಲಸ ಮಾಡುತ್ತಿರುವ ವಿಜಯಪ್ರಕಾಶ್, ಏಪ್ರಿಲ್, ಮೇ ತಿಂಗಳಲ್ಲೂ ಅಮೆರಿಕದ ಕನ್ನಡಿಗರ ಮನ ಸಂತಸಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ತಮ್ಮ ತಂಡದೊಂದಿಗೆ ಅಮೆರಿಕಕ್ಕೆ ತೆರಳಿದ್ದ ವಿಜಯಪ್ರಕಾಶ್, ಕಸ್ತೂರಿ ಮೀಡಿಯಾ ಹಾಗೂ ಪಂಪ ಸ್ಟುಡಿಯೋ ಆಶ್ರಯದಲ್ಲಿ ಆಯೋಜಿಸಿದ್ದ “ವಿಜಯೋತ್ಸವ-2018′ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಅಮೆರಿಕದ ಹತ್ತು ವಿವಿಧ ತಾಣಗಳಲ್ಲಿ ಸಾವಿರಾರು ಸಂಗೀತ ಪ್ರಿಯರ ಮನಗೆಲ್ಲುವಂತಹ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಯಶಸ್ವಿಯಾಗಿ ಸಂಗೀತ ಕಾರ್ಯಕ್ರಮ ನಡೆದಿತ್ತು. ಆ ಹಿನ್ನೆಲೆಯಲ್ಲಿ ಕ್ಯಾಲಿಫೋರ್ನಿಯಾ ಕನ್ನಡಿಗರಾದ ಬಿಂದು ಮಾಧವ, ರಘು ಹಾಲೂರು ಹಾಗೂ ಗೋವರ್ಧನ್ ಗೌಡ ಅವರು ಈ ಬಾರಿ ಅಮೆರಿಕದ ಹಲವು ಕಡೆ ನಡೆಸುವ ಮೂಲಕ ಅಲ್ಲಿನ ಕನ್ನಡಿಗರನ್ನು ಖುಷಿಪಡಿಸಿದ್ದಾರೆ.
ಸಂಗೀತ ಕಾರ್ಯಕ್ರಮ ನಡೆಸುವ ಮುನ್ನ ಸಾಕಷ್ಟು ಸಮಸ್ಯೆಗಳು ಎದುರಾದರೂ, ಬಿಂದು ಮಾಧವ, ರಘು ಹಾಲೂರು ಇತರರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಗಾಯಕ ವಿಜಯಪ್ರಕಾಶ್ ಅವರೊಂದಿಗೆ ಗಾಯಕಿ ಅನುರಾಧ ಭಟ್, ಅರುಣ್ ಕುಮಾರ್, ವೆಂಕಿ, ಹರ್ಷ, ಪ್ರವೀಣ್ ಅವರ ಹಾಡು ಅಲ್ಲಿನವರನ್ನು ಖುಷಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.